ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 163ಕ್ಕೆ ಏರಿಕೆ

ಒಂದೇ ದಿನ ಎಂಟು ಮಂದಿ ಗುಣಮುಖ ಮೈಸೂರಿನಲ್ಲಿ ಮತ್ತೆ ಏಳು ಮಂದಿಗೆ ಸೋಂಕು

Team Udayavani, Apr 7, 2020, 5:30 AM IST

ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 163ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 12 ಮಂದಿಯಲ್ಲಿ ಕೋವಿಡ್ 19 ದೃಢಪಟ್ಟಿದ್ದು, ಒಟ್ಟಾರೆ ಸೋಂಕಿಗೊಳಗಾದವರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ಸೋಂಕಿತರ ಪೈಕಿ ವಿವಿಧ ಆಸ್ಪತ್ರೆಗಳಿಂದ ಒಂದೇ ದಿನ 8 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಸೋಮವಾರ ಮೈಸೂರಿನಲ್ಲಿ ಏಳು, ಬಾಗಲಕೋಟೆಯಲ್ಲಿ ಎರಡು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೇರಳ ಮೂಲದ ಒಬ್ಬ ವ್ಯಕ್ತಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ನಿಜಾಮುದ್ದೀನ್‌ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯದ ಮತ್ತೂಬ್ಬನಿಗೆ ಸೋಂಕು ತಗಲಿದೆ. ಈ ಎಲ್ಲ ಸೋಂಕಿತರನ್ನು ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಪತ್ತೆ ಕಾರ್ಯ ನಡೆಯುತ್ತಿದೆ.

ಮೈಸೂರಿನಲ್ಲಿ ಸೋಂಕಿತರ ಏರಿಕೆ
ಮೈಸೂರಿನಲ್ಲಿ ಕೋವಿಡ್ 19  ಸೋಂಕಿತರ ಸಂಖ್ಯೆ ನಿರಂತರ ಏರಿಕೆಯಾಗುತ್ತಿದ್ದು, ಸೋಮವಾರ ಮತ್ತೆ ಏಳು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ 35ಕ್ಕೆ ತಲುಪಿದೆ. ಕಳೆದ ಎರಡು ದಿನಗಳಿಂದ ದಿಲ್ಲಿ ಪ್ರಯಾಣ ಮಾಡಿದ ಹಿನ್ನೆಲೆ ಹೊಂದಿರುವವರಲ್ಲಿಯೇ ಸೋಂಕಿತರಾಗುತ್ತಿದ್ದು, ಈವರೆಗೂ ಇಂಥ 8 ಮಂದಿಯಲ್ಲಿ ಸೋಂಕು ದೃಢವಾಗಿದೆ. ನಂಜನಗೂಡು ಔಷಧ ಕಂಪೆನಿ ಪ್ರಕರಣಗಳ ಅನಂತರ ಈ ದಿಲ್ಲಿ ಪ್ರಯಾಣ ಹಿನ್ನೆಲೆ ಇರುವ ಪ್ರಕರಣ ತಲೆನೋವಾಗಿ ಪರಿಣಮಿಸಿವೆ.

8 ಮಂದಿ ಗುಣಮುಖರಾಗಿ ಮನೆಗೆ
ಕೋವಿಡ್ 19 ಸೋಂಕು ತಗಲಿಸಿಕೊಂಡು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ ಒಂದೇ ದಿನ ಎಂಟು ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಐದು ಮಂದಿ, ದಾವಣಗೆರೆಯಲ್ಲಿ ಇಬ್ಬರು (ಸಂಸದರ ಕುಟುಂಬಸ್ಥರು), ಮಂಗಳೂರಿನಲ್ಲಿ ಭಟ್ಕಳ ಮೂಲದ ವ್ಯಕ್ತಿ ಮನೆಗೆ ತೆರಳಿದ್ದು, ಮುಂದಿನ 15 ದಿನಗಳ ಕಾಲ ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿ ಮುಂದುವರಿಯುವಂತೆ ವೈದ್ಯರು ಸೂಚಿಸಿದ್ದಾರೆ. ಇನ್ನು ರಾಜ್ಯದ ಒಟ್ಟಾರೆ ಕೋವಿಡ್ 19 ಸೋಂಕಿತರ ಪೈಕಿ ಇಲ್ಲಿಯವರೆಗೂ 20 ಮಂದಿ ಗುಣಮುಖರಾಗಿದ್ದಾರೆ, ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸೋಂಕಿತರ ವಿವರ
– ನಿಜಾಮುದ್ದೀನ್‌ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿ ಸೋಂಕು ತಗಲಿಸಿಕೊಂಡ ಕರ್ನಾಟಕವರು -22
– ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಪರ್ಕದಿಂದ ಅವಲೋಕನದಲ್ಲಿರುವವರು – 29,629. ಈ ಪೈಕಿ ಸೋಂಕಿತನ ಪ್ರಾಥಮಿಕ ಸಂಪರ್ಕಿತರು -1,525, ದ್ವಿತೀಯ ಸಂಪರ್ಕಿತರು – 6,261
– ಆಸ್ಪತ್ರೆಗೆ ಸೋಮವಾರ ದಾಖಲಾದ ಕೊರೊನಾ ಶಂಕಿತರು – 47, ಬಿಡುಗಡೆಯಾದವರು – 120, ಸದ್ಯ ಆಸ್ಪತ್ರೆಯಲ್ಲಿರುವ ಶಂಕಿತರು ಒಟ್ಟು- 333.
– ಸೋಮವಾರ ನೆಗೆಟಿವ್‌ ಬಂದ ವರದಿಗಳು – 324, ಪಾಸಿಟಿವ್‌ ಬಂದ ವರದಿಗಳು- 12 ( ಈವರೆಗೂ ಒಟ್ಟಾರೆ ನೆಗೆಟಿವ್‌ – 5,503, ಪಾಸಿಟಿವ್‌ – 163)

ಸರಕಾರದ ಜತೆ ಸಹಕರಿಸಲು ಮನವಿ
ಬೆಂಗಳೂರು: ಕೋವಿಡ್ 19 ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಮುಸ್ಲಿಂ ಸಮುದಾಯ ಪರಿಸ್ಥಿತಿ ಅರ್ಥ ಮಾಡಿಕೊಂಡು ಸರಕಾರದ ಜತೆ ಸಹಕರಿಸಿ ದೇಶವಾಸಿಗಳ ಜತೆ ಕೈ ಜೋಡಿಸಬೇಕು ಎಂದು ಅಖೀಲ ಕರ್ನಾಟಕ ಮಹಮ್ಮದೀಯ ಕನ್ನಡ ವೇದಿಕೆ ಮನವಿ ಮಾಡಿದೆ. ತಬ್ಲೀಘ… ಸಭೆಯಲ್ಲಿ ಪಾಲ್ಗೊಂಡವರು ತಾವಾಗಿಯೇ ಮಾಹಿತಿ ನೀಡಿ ತಪಾಸಣೆಗೆ ಒಳಪಡಬೇಕು. ತಪಾಸಣೆಗಾಗಿ ಮನೆಗೆ ಬರುವ ಆರೋಗ್ಯ ಕಾರ್ಯಕರ್ತರನ್ನು ಗೌರವದಿಂದ ಕಾಣಬೇಕು ಎಂದು ವೇದಿಕೆ ರಾಜ್ಯಾಧ್ಯಕ್ಷ ಸಮೀವುಲ್ಲಾಖಾನ್‌ ಮನವಿ ಮಾಡಿಕೊಂಡಿದ್ದಾರೆ.

ತಬ್ಲೀ ಜಮಾತ್‌: ರಾಜ್ಯದ 26 ಮಂದಿಗೆ ಕೋವಿಡ್ 19
ಬಳ್ಳಾರಿ: ನಿಜಾಮುದ್ದೀನ್‌ ಮರ್ಕಜ್‌ ಮಸೀದಿ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದಿಂದ ಪಾಲ್ಗೊಂಡವರ ಪೈಕಿ ಸುಮಾರು 26 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಸ್ವಯಂ ಪ್ರೇರಣೆಯಿಂದ ಚಿಕಿತ್ಸೆಗೆ ಒಳಗಾಗುವಂತೆ ಮುಸ್ಲಿಂ ಧರ್ಮಗುರುಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಕೆಲವರು ಸ್ವಯಂ ಪ್ರೇರಣೆಯಿಂದ ಚಿಕಿತ್ಸೆಗೆ ಒಳಗಾಗಿದ್ದಾರೆ. ಸ್ವಯಂ ಪ್ರೇರಣೆಯಿಂದ ಬರದಿದ್ದಲ್ಲಿ ಅಂಥವರನ್ನು ಗುರುತಿಸುವ ಕೆಲಸವನ್ನೂ ಮಾಡಲಾಗುತ್ತಿದೆ ಎಂದರು. ತಬ್ಲೀ ಜಮಾತ್‌ನಲ್ಲಿ ರಾಜ್ಯದ ಸುಮಾರು 390ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಈ ಪೈಕಿ ಬೀದರ್‌ ಜಿಲ್ಲೆಯ 10 ಮಂದಿ ಸಹಿತ ರಾಜ್ಯಾದ್ಯಂತ 26 ಮಂದಿಯಲ್ಲಿ ಕೋವಿಡ್ 19 ವೈರಸ್‌ ಪಾಸಿಟಿವ್‌ ಬಂದಿದೆ. ಒಟ್ಟಾರೆ 150ಕ್ಕೂ ಹೆಚ್ಚು ಪಾಸಿಟಿವ್‌ ಇವೆ. ವಿಮಾನಯಾನ ಸ್ಥಗಿತಗೊಂಡು 21 ದಿನಗಳ ಬಳಿಕ ಕೋವಿಡ್‌-19 ವಿರುದ್ಧ ಗೆದ್ದಿದ್ದೇವೆ ಎಂಬ ವಿಶ್ವಾಸವಿತ್ತು. ಆದರೆ ತಬ್ಲೀ ಜಮಾತ್‌ನಲ್ಲಿ ಪಾಲ್ಗೊಂಡವರಲ್ಲಿ ಕೋವಿಡ್ 19 ಪಾಸಿಟಿವ್‌ ಬರುವ ಮೂಲಕ ಯುದ್ಧ ಇನ್ನೂ ಬಾಕಿ ಇದೆ ಎಂಬಂತಾಗಿದ್ದು, ಹಲವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.