ಅವಕಾಶ ವಂಚಿತರನ್ನು ಮುಖ್ಯ ವಾಹಿನಿಗೆ ತರುವುದು ಸರ್ಕಾರದ ಉದ್ದೇಶ : ಬಿ.ಎಸ್.ಯಡಿಯೂರಪ್ಪ
Team Udayavani, Feb 1, 2020, 6:31 PM IST
ಬೆಂಗಳೂರು: ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಿ ಮುಖ್ಯ ವಾಹಿನಿಗೆ ತರುವುದು ಸರಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಟೂರಿಸ್ಟ್ ಟ್ಯಾಕ್ಸಿ ವಿತರಿಸಿ ಮಾತನಾಡಿದ ಅವರು, ಯುವಕ-ಯುವತಿಯರು ಬದುಕಿನ ಮಾರ್ಗಕ್ಕಾಗಿ ಉದ್ಯೋಗವನ್ನೇ ಅವಲಂಬಿಸದೆ ಸ್ವ ಉದ್ಯೋಗಿಗಳಾಗಬೇಕು ಎನ್ನುವ ಆಶಯದೊಂದಿಗೆ ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪಂಗಡ, ಇತರ ಹಿಂದುಳಿದ ವರ್ಗ, ಅಲ್ಪಸಂಖ್ಯಾಕ ಯುವಕ-ಯುವತಿಯರಿಗೆ ಟ್ಯಾಕ್ಸಿ ಒದಗಿಸುವ ಯೋಜನೆಯನ್ನು ಸರಕಾರ ಜಾರಿಗೊಳಿಸಿದೆ ಎಂದು ಹೇಳಿದರು.
2013ರಿಂದ ಇಲ್ಲಿಯವರೆಗೆ ಬಾಕಿ ಇದ್ದ 86 ಪ್ರವಾಸಿ ಟ್ಯಾಕ್ಸಿಗಳನ್ನು ಇಂದು ವಿತರಿಸಲಾಗುತ್ತಿದೆ. ವಾಹನಕ್ಕೆ ತಗಲುವ ಒಟ್ಟು ವೆಚ್ಚದಲ್ಲಿ 2-3 ಲ. ರೂ. ಗಳನ್ನು ಇಲಾಖೆಯಿಂದ ಸಹಾಯಧನವಾಗಿ ನೀಡಲಾಗುತ್ತಿದೆ ಎಂದು ಹೇಳಿದರು.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ನಟಿ ಶೃತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.