ಪ್ರಚಾರಕ್ಕಾಗಿ ಗ್ರಾಮ ವಾಸ್ತವ್ಯ ಮಾಡುತ್ತಿಲ್ಲ

ಗ್ರಾಮೀಣರೊಂದಿಗೆ ಬೆರೆಯಲು ವಾಸ್ತವ್ಯ: ಸಿಎಂ

Team Udayavani, Jun 21, 2019, 5:50 AM IST

Ban21061901Medn

ಬೆಂಗಳೂರು: ‘ಅಗ್ಗದ ಪ್ರಚಾರಕ್ಕಾಗಿ ಗ್ರಾಮ ವಾಸ್ತವ್ಯ ಮಾಡುತ್ತಿಲ್ಲ. ಗ್ರಾಮೀಣ ಜನ ರೊಂದಿಗೆ ಬೆರೆತು ಅವರೊಂದಿಗೆ ಇನ್ನಷ್ಟು ಹತ್ತಿರವಾಗಲು ಈ ಬಾರಿ ಗ್ರಾಮ ವಾಸ್ತವ್ಯ ಮಾಡಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಕುರಿತ ಮೈತ್ರಿ ಪರ್ವ ಪುಸ್ತಕ ಬಿಡುಗಡೆ ಮಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೊಮ್ಮೆ ಅಧಿಕಾರದಲ್ಲಿದ್ದಾಗ ಗ್ರಾಮ ವಾಸ್ತವ್ಯ ಮಾಡಿದಾಗ ನೀಡಿದ ಎಷ್ಟು ಭರವಸೆಗಳು ಈಡೇರಿವೆ? ಎಷ್ಟು ಬಾಕಿ ಇವೆ ? ಎನ್ನುವ ವರದಿ ಪಡೆದುಕೊಂಡಿದ್ದೇನೆ’ ಎಂದರು. ಗ್ರಾಮವಾಸ್ತವ್ಯ ಸಂದರ್ಭದಲ್ಲಿ ರೈತರಿಗೆ ನೀರು ನಿರ್ವಹಣೆ ಮಾಡುವ ಕುರಿತು ಪ್ರಾತ್ಯಕ್ಷಿಕೆಗಳನ್ನು ತೋರಿಸಲು ಸಾಕ್ಷ್ಯ ಚಿತ್ರಗಳನ್ನು ನಿರ್ಮಿಸ ಲಾಗಿದ್ದು, ಈ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಗ್ರಾಮದಲ್ಲಿಯೇ ಉಳಿದು ಗ್ರಾಮಸ್ಥರು ನೀಡುವ ದೂರು, ಸಲಹೆ ಸೂಚನೆಗಳನ್ನು ಪಡೆದು, ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿ ಸಮಸ್ಯೆ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮ ವಾಸ್ತವ್ಯದ ಮೂಲಕ ವಾಸ್ತವ್ಯ ಮಾಡುವ ಗ್ರಾಮದ ಸುತ್ತಲಿನ ಹಳ್ಳಿಗಳಿಗೂ ಅಭಿವೃದ್ಧಿ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

ಸಚಿವರಿಂದಲೂ ಗ್ರಾಮವಾಸ್ತವ್ಯ: ಕೇವಲ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಮಾಡಿದರೆ, ಇಡೀ ಸರ್ಕಾರದ ಸಚಿವರಿಗೆ ವಾಸ್ತವ ಚಿತ್ರಣ ಅರಿವಾಗದಿರಬಹುದು ಈ ಕಾರಣಕ್ಕಾಗಿ ಸಚಿವ ಸಂಪುಟದ ಎಲ್ಲ ಸಚಿವರಿಗೂ ಗ್ರಾಮ ವಾಸ್ತವ್ಯ ಮಾಡುವಂತೆ ಸಲಹೆ ನೀಡಿರುವುದಾಗಿ ತಿಳಿಸಿದರು. ಅದರಂತೆ ಶಾಸಕರೂ ಕೂಡ ಪ್ರತಿ ತಿಂಗಳೂ ತಮ್ಮ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಪಂಚತಾರಾ, ಗುಡಿಸಲು ಸಂಸ್ಕೃತಿಯೂ ಗೊತ್ತು: ವೈದ್ಯರ ಸಲಹೆಯಂತೆ ಪಂಚತಾರಾ ಹೊಟೆಲ್ನಲ್ಲಿ ವಾಸಿಸುತ್ತಿದ್ದೇನೆ. ನಾನು ಗುಡಿಸಲಿನಲ್ಲಿಯೂ ನೆಮ್ಮದಿಯಾಗಿ ನಿದ್ದೆ ಮಾಡಬಲ್ಲೆ. ಮನೆಗಳಲ್ಲಿ ನಿದ್ದೆ ಬಾರದವರು ಮೌರ್ಯ ಸರ್ಕಲ್ನಲ್ಲಿ ಮಲಗಿ, ಬೆಳಿಗ್ಗೆ ಚಡ್ಡಿ ಹಾಕಿಕೊಂಡು ವಾಕಿಂಗ್‌ ಮಾಡಿದ್ದಾರೆ. ಅವರಿಗೆ ಮನೆಯಲ್ಲಿ ನಿದ್ದೆ ಬರುತ್ತಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರು ಜಿಂದಾಲ್ ವಿರುದ್ಧ ಅಹೋರಾತ್ರಿ ಪ್ರತಿಭಟನೆ ಮಾಡಿರುವುದಕ್ಕೆ ವ್ಯಂಗ್ಯವಾಡಿದರು.

ಇಂದು ಚಂಡರಕಿಗೆ ಎಚ್ಡಿಕೆ
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ತಾಲೂಕಿನ ಚಂಡರಕಿ ಗ್ರಾಮದ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಇಡೀ ಗ್ರಾಮ ಸಿಎಂ ಆಗಮನಕ್ಕಾಗಿ ಕಾಯುತ್ತಿದೆ.

ತಮ್ಮ ಮಹತ್ವಾಕಾಂಕ್ಷೆಯ ಕಾರ್ಯಕ್ರಮಕ್ಕೆ ಗುರುವಾರ ರಾತ್ರಿಯೇ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿನಿಂದ ಕರ್ನಾಟಕ ಎಕ್‌ಪ್ರಸ್‌ ರೈಲು ಮೂಲಕ ಯಾದಗಿರಿಗೆ ತೆರಳಿದ್ದಾರೆ. ಗುರುಮಿಠ್ಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ರೈತರು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ರಾತ್ರಿ ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಅಲ್ಲೇ ಭೋಜನ ಮಾಡಿ ವಾಸ್ತವ್ಯ ಹೂಡಲಿದ್ದಾರೆ.

ರೈಲಿನಲ್ಲಿ ತೆರಳಿದ ಸಿಎಂ: ಗ್ರಾಮ ವಾಸ್ತವ್ಯಕ್ಕಾಗಿ ಗುರುವಾರ ರಾತ್ರಿ ಸಿಎಂ ಕುಮಾರಸ್ವಾಮಿ ಅವರು, ಕರ್ನಾಟಕ ಎಕ್ಸ್‌ಪ್ರಸ್‌ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಕುಮಾರಸ್ವಾಮಿ ಅವರು ಶುಕ್ರವಾರ ಬೆಳಗ್ಗೆ ಚಂಡರಕಿ ಗ್ರಾಮಕ್ಕೆ ತಲುಪಲಿದ್ದಾರೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.