ಯಡಿಯೂರಪ್ಪ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಬೇಕು : ಹೆಚ್ ಡಿಕೆ


Team Udayavani, Oct 26, 2019, 8:58 PM IST

hdk-1

ಬೆಳಗಾವಿ: ಸರಕಾರ ಉರುಳಿಸುವ ಆತುರ ನನಗಿಲ್ಲ. ಆದರೆ ನೆರೆ ಸಂತ್ರಸ್ತರ ಮತ್ತು ರಾಜ್ಯದ ಜನತೆ ಹಿತೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರವನ್ನು   ಉಳಿಸಿಕೊಳ್ಳುವುದು ಮತ್ತು ಬಿಡುವುದು ನನ್ನ ಕೈಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳುವ ಮೂಲಕ ಮತ್ತೆ ಬಿಜೆಪಿ ಹಾಗೂ ಜೆಡಿ ಎಸ್ ಸಮ್ಮಿಶ್ರ ಸರ್ಕಾರದ ಸುಳಿವು ನೀಡಿದರು.

ಬೆಳಗಾವಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಸರ್ಕಾರ ಅಧಿಕಾರದಿಂದ ಕೆಳಗಿಳಿಸಿ ಚುನಾವಣೆಗೆ ಸಜ್ಜಾದರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸುವವರು ಯಾರು? ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆಗೆ ಹೋಗುವುದು ಸರಿಯಲ್ಲ. ಹಾಗಾಗಿ ಸದ್ಯ ಆಡಳಿತ ನಡೆಸುತ್ತಿರುವ ಯಡಿಯೂರಪ್ಪ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಬೇಕು ಎಂಬುದು ಜನತೆ ಪರವಾಗಿ ನಾನು ಆಶಿಸುತ್ತೇನೆ ಎಂದರು. ಆದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸದಾಗಿ ಚುನಾವಣೆ ನಡೆಯುವ ಕನಸು ಕಾಣುತ್ತಿದ್ದಾರೆ. ಅದು ಕೇವಲ ಹಗಲು ಗನಸಾಗಲಿದೆ ಎಂದು ತಿರುಗೇಟು ನೀಡಿದರು.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಚುನಾವಣೆ ನಡೆಸಲು ಸರ್ಕಾರವು ಚುನಾವಣೆ ಆಯೋಗಕ್ಕೆ 15 ಕೋಟಿ ರೂ. ನೀಡಬೇಕು. ಇನ್ನೂ 224 ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕಾದರೆ 240 ಕೋಟಿ ರೂ. ನೀಡಬೇಕು. ಇಂತಹ ನೆರೆ ಪರಿಸ್ಥಿತಿಯಲ್ಲಿ ಚುನಾವಣೆಗಳನ್ನು ನಡೆಸುವುದು ಅವಶ್ಯಕತೆ ಇಲ್ಲ. ಹಾಗಾಗಿ ಸರ್ಕಾರ ಉಳಿಸಿಕೊಳ್ಳುವುದು ಅಥವಾ ಬಿಡುವುದು ನನ್ನ ಕೈಯಲ್ಲಿದೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿನ ಚುನಾವಣೆ ಫಲಿತಾಂಶ ಮತ್ತು ರಾಜ್ಯದಲ್ಲಿ ಪರಿಸ್ಥಿತಿಗಳನ್ನು ಅವಲೋಕಿಸಿದರೆ ಉಪ ಚುನಾವಣೆ ಮುಂದೂಡುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಉಪ ಚುನಾವಣೆ ನಡೆದರೆ ಎಲ್ಲ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಕುಮಾರಸ್ವಾಮಿ ಹೇಳಿದರು. ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ನೀಡಬೇಕು ಅಥವಾ ಬಿಡಬೇಕು ಎಂಬುದರ ಕುರಿತು ಉಪ ಚುನಾವಣೆ ಫಲಿತಾಂಶದ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದರು

ಕಾಂಗ್ರೆಸ ಪಕ್ಷದ ಮುಖಂಡರು ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹಗಲು ಗನಸು ಕಾಣುತ್ತಿದ್ದಾರೆ. ಅಷ್ಟೇ ಅಲ್ಲದೆ ಅಧಿಕಾರದ ಆಸೆಗಾಗಿ ಪಾದಯಾತ್ರೆ ನಡೆಸಲು ಸಜ್ಜಾಗುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ 5 ವರ್ಷದ ಅಧಿಕಾರದ ಅವಧಿಯಲ್ಲಿ ನೀರಾವರಿ ಇಲಾಖೆಗೆ ಏಕಾಏಕಿ 1.2 ಲಕ್ಷ ಕೋಟಿ ರೂ. ಕಾಮಗಾರಿಗೆ ಅನುಮತಿ ನೀಡಿದ್ದಾರೆ. ವಸತಿ ನಿಗಮಕ್ಕೆ 29 ಸಾವಿರ ಕೋಟಿ ರೂ. ನೀಡುವುದು ಬಾಕಿ ಉಳಿದಿದೆ. ಪುಕ್ಕಟೆ ಅಕ್ಕಿ ಯೋಜನೆಯ 800 ಕೋಟಿ ರೂ. ಬಾಕಿ ಹಣ ಕುಮಾರಸ್ವಾಮಿ ಭರಿಸಬೇಕಾಯಿತು. 22 ಸಾವಿರ ಕೋಟಿ ರೂ. ಲೋಕೋಪಯೋಗಿ ಇಲಾಖೆ ಕಾಮಗಾರಿಗೆ ಅನುಮೋದನೆ ನೀಡಿದ್ದು ಇವರ ಸಾಧನೆ ಎಂದು ಸಿದ್ದರಾಮಯ್ಯ ವಿರುದ್ಧ  ವಾಗ್ದಾಳಿ ನಡೆಸಿದರು.

ಕಬ್ಬಿನ ಬಿಲ್ ನೀಡದವರು ಸಾಹುಕಾರರೇ?
ಕಬ್ಬಿನ ಬಾಕಿ ಬಿಲ್ ನೀಡದವರು, ಜನರ ಸಮಸ್ಯೆಗಳಿಗೆ ಸ್ಪಂದಿಸದವರನ್ನು ಬೆಳಗಾವಿ ಜಿಲ್ಲೆಯ ಸಾಹುಕಾರರು ಎಂದು ಕೆಲ ಅಮಾಯಕರು ಹೇಳುತ್ತಿದ್ದಾರೆ. ಅವರೆಲ್ಲಾ ಯಾವ ರೀತಿ ಸಾಹುಕಾರ, ಹೇಗೆ ಸಾಹುಕಾರ ಆದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಜಾರಕಿಹೊಳಿ ಸಹೋದರರ ವಿರುದ್ಧ ಹರಿಹಾಯ್ದರು. ಕ್ಷೇತ್ರದಲ್ಲಿ ಸಾಧನೆ ಮಾಡದವರು ಬೆಟ್ಟದಲ್ಲಿ ಕಲ್ಲು ಹೊಡೆಯುವ ಸಾಹಸಕ್ಕೆ ಕೈ ಹಾಕಿದ್ದಾರೆ. ಹಾಗಾಗಿ ಗೋಕಾಕ ಕ್ಷೇತ್ರದ ಜನತೆ ಇದೀಗ ಒಳ್ಳೆಯ ಅವಕಾಶ ಬಂದಿದ್ದು, ಅದನ್ನು ಸದುಪಯೋಗ ಪಡಿಸಿಕೊಂಡು ಎರಡು ದಶಕಗಳಿಂದ ಎದುರಿಸುತ್ತಿರುವ ಸಮಸ್ಯೆಯಿಂದ ಮುಕ್ತಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ಟಾಪ್ ನ್ಯೂಸ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.