Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ದಿಢೀರ್ ಶ್ರೀಮಂತನಾಗುವ ದುರಾಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಯುವಕ
Team Udayavani, Sep 21, 2024, 6:08 PM IST
ತೀರ್ಥಹಳ್ಳಿ: ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದ. ಈ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸುನಿಲ್ ಜೈಲಿಗೂ ಹೋಗಿದ್ದ. ನಂತರ ಜಾಮೀನಿನ ಮೇಲೆ ಹೊರ ಬಂದಿದ್ದ ಈತ ಆನ್ಲೈನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ.
ಆನ್ಲೈನ್ ವ್ಯವಹಾರ ನಡೆಸಿ ಹಣ ಕಳೆದುಕೊಂಡ ಸುನೀಲ್ ಗುರುವಾರ ವಿಷ ಸೇವಿಸಿದ್ದ ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.