ಕದನದಲ್ಲಿ ಚುನಾವಣಾ ಅಕ್ರಮಗಳದ್ದೇ ಸದ್ದು

10 ಕೋಟಿ ರೂಪಾಯಿ ಅಕ್ರಮ ಹಣ ಜಪ್ತಿ; 197 ಎಫ್ಐಆರ್‌ ದಾಖಲು

Team Udayavani, Dec 3, 2019, 6:15 AM IST

cv-27

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌.

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಭರಾಟೆ ಅಂತಿಮ ಘಟ್ಟದಲ್ಲಿದೆ. ಇದೇ ವೇಳೆ, ಚುನಾವಣಾ ಅಕ್ರಮ ಸಹ ಸಾಕಷ್ಟು ಸದ್ದು ಮಾಡಿದೆ. ಹಣ-ಹೆಂಡದ ಹಂಚಿಕೆ, ಮತದಾರರಿಗೆ ಆಮಿಷವೊಡ್ಡುವಲ್ಲಿ ಕ್ಷೇತ್ರಗಳು ಪೈಪೋಟಿಗಿಳಿದಂತಿವೆ.

ಈ 15 ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಡಿ.1ರವರೆಗೆ 4.16 ಕೋಟಿ ರೂ.ನಗದು, 4.58 ಕೋಟಿ ಮೊತ್ತದ ಅಕ್ರಮ ಮದ್ಯ, 4 ಸಾವಿರ ರೂ. ಮೌಲ್ಯದ ಮಾದಕವಸ್ತು ಹಾಗೂ 1.95 ಕೋಟಿ ರೂ.ಗಳ ಉಡುಗೊರೆ ವಸ್ತುಗಳು ಸೇರಿದಂತೆ ಒಟ್ಟು 10.70 ಕೋಟಿ ಅಕ್ರಮ ಹಣ ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ, ನೀತಿ ಸಂಹಿತೆ ಉಲ್ಲಂಘನೆ ಹಾಗೂ  ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಒಟ್ಟು 197 ಎಫ್ಐಆರ್‌ ದಾಖಲಾಗಿದ್ದು, 30 ದೂರುಗಳು ಪರಿಶೀಲನೆಯ ಹಂತದಲ್ಲಿವೆ. ಈ ಎಫ್ಐಆರ್‌ಗಳ ಪೈಕಿ “ವೀರಶೈವ ಮತಗಳನ್ನು ಸೆಳೆಯುವ ಸಂಬಂಧ’ ಹೇಳಿಕೆ
ನೀಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಿಸಲಾಗಿರುವ ಎಫ್ಐಆರ್‌ ಪ್ರಮುಖವಾಗಿದೆ.

ಹುಣಸೂರಲ್ಲಿ ಹೆಚ್ಚು ಹಣ ಜಪ್ತಿ: ಹುಣಸೂರು ಕ್ಷೇತ್ರದಲ್ಲಿ ಅತಿ ಹೆಚ್ಚು 3.80 ಕೋಟಿ ಅಕ್ರಮ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಇದರಲ್ಲಿ 2.07 ಕೋಟಿ ನಗದು, 74.44 ಲಕ್ಷ ಮೊತ್ತದ ಅಕ್ರಮ ಮದ್ಯ, 98.82ಲಕ್ಷ ರೂ.ಗಳ ಉಡುಗೊರೆ ವಸ್ತುಗಳು ಸೇರಿವೆ. ಮಹಾಲಕ್ಷ್ಮೀಲೇಔಟ್‌ ಕ್ಷೇತ್ರದಲ್ಲಿ ಅತಿ ಕಡಿಮೆ 1.85 ಲಕ್ಷ ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಕೆ.ಆರ್‌.ಪುರದಲ್ಲಿ ಅತಿ ಹೆಚ್ಚು 1.37 ಕೋಟಿ ಮೌಲ್ಯದ
ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.

197 ಎಫ್ಐಆರ್‌ಗಳು: ವೀರಶೈವ ಮತಗಳನ್ನು ಸೆಳೆಯುವ ವಿಚಾರವಾಗಿ ಹೇಳಿಕ್ಕೆ ನೀಡಿದ್ದ ಯಡಿಯೂರಪ್ಪ ವಿರುದಟಛಿದ ದೂರು ಸೇರಿದಂತೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮಗಳ ಕುರಿತು ಈವರೆಗೆ 197 ಎಫ್ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ. ಇದರಲ್ಲಿ ನಗದು ಹಾಗೂ ಇತರ ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡ ಸಂಬಂಧ 143, ಚುನಾವಣಾ ನೀತಿ
ಸಂಹಿತೆ ಉಲ್ಲಂಘನೆ ದೂರುಗಳಿಗೆ ಸಂಬಂಧಿಸಿದಂತೆ 48 ಹಾಗೂ ಇತರ 6 ಎಫ್ಐಆರ್‌ಗಳು ಸೇರಿಕೊಂಡಿವೆ. 30 ದೂರುಗಳು ಆಯೋಗದ ಪರಿಶೀಲನೆಯಲ್ಲಿವೆ.

ಚಿಕ್ಕಬಳ್ಳಾಪುರದಲ್ಲಿ ಹೆಚ್ಚು: ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು 67 ಎಫ್ಐಆರ್‌ಗಳು ದಾಖಲಾಗಿವೆ. ಉಳಿದಂತೆ ಹೊಸ ಕೋಟೆಯಲ್ಲಿ 32, ಯಲ್ಲಾಪುರದಲ್ಲಿ 15, ಕೆ.ಆರ್‌. ಪೇಟೆಯಲ್ಲಿ 13, ಹಿರೆಕೇರೂರಿನಲ್ಲಿ 12, ವಿಜಯನಗರದಲ್ಲಿ 10, ಹುಣಸೂರಿನಲ್ಲಿ 9, ರಾಣಿಬೆನ್ನೂರು, ಮಹಾಲಕ್ಷ್ಮೀಲೇಔಟ್‌
ನಲ್ಲಿ ತಲಾ 8, ಅಥಣಿಯಲ್ಲಿ 7, ಕಾಗವಾಡ, ಯಶವಂತಪುರ ದಲ್ಲಿ ತಲಾ 5, ಶಿವಾಜಿನಗರ, ಗೋಕಾಕ್‌, ಕೆ.ಆರ್‌.ಪುರದಲ್ಲಿ ತಲಾ 2 ಎಫ್ಐಆರ್‌ಗಳು ದಾಖಲಾಗಿವೆ.

ಪ್ರಮುಖರ ವಿರುದ್ಧ ಎಫ್ಐಆರ್‌: ಸಿಎಂ ಯಡಿಯೂರಪ್ಪ, ಡಿಸಿ ಎಂ ಗೋವಿಂದ ಕಾರಜೋಳ, ಪ್ರತಿಪಕ್ಷ
ನಾಯಕ ಸಿದ್ದರಾಮಯ್ಯ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌, ಸಚಿವ ಬಿ.ಶ್ರೀರಾಮುಲು, ಮಾಜಿ ಸಚಿವ
ಶಿವರಾಜ್‌ ತಂಗಡಗಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

165 ಅಭ್ಯರ್ಥಿಗಳ ಕಣದಲ್ಲಿ: ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಬಿಜೆಪಿ,
ಜೆಡಿಎಸ್‌ ಅಭ್ಯರ್ಥಿಗಳು ಸೇರಿದಂತೆ ಒಟ್ಟು 165 ಮಂದಿ ಕಣದಲ್ಲಿದ್ದಾರೆ. ಈ ಕ್ಷೇತ್ರಗಳಲ್ಲಿ ಡಿ. 5ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. 37.82 ಲಕ್ಷ ಮತದಾರರು 4,185 ಮತಗಟ್ಟೆಗಳಲ್ಲಿ ಮತ ಚಲಾಯಿಸಲಿದ್ದಾರೆ. ಇದರಲ್ಲಿ 884 ಸೂಕ್ಷ್ಮಮತಗಟ್ಟೆಗಳನ್ನು ಗುರುತಿಸಲಾಗಿದೆ. 42,509 ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇಂದು ಸಂಜೆ
6ರಿಂದ ಮೌನ ಅವಧಿ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನಕ್ಕೆ 48 ಗಂಟೆ ಮೊದಲು ಅಂದರೆ, ಡಿ.3ರ ಸಂಜೆ 6ರಿಂದ “ಮೌನ ಅವಧಿ’ (ಸೈಲೆಂಟ್‌ ಪಿರಿಯಡ್‌) ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಬಹಿರಂಗ ಪ್ರಚಾರ, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಪ್ರತ್ಯೇಕ್ಷ ಆಥವಾ ಪರೋಕ್ಷವಾಗಿ ನೆರವು ಆಗಬಲ್ಲಂತಹ ಯಾವುದೇ ಸಮೀಕ್ಷೆ, ವಿಶ್ಲೇಷಣೆಗಳಿಗೆ ಅವಕಾಶ ಇರುವುದಿಲ್ಲ. ಕ್ಷೇತ್ರದ ವರು ಅಲ್ಲದ ಸ್ಟಾರ್‌ ಪ್ರಚಾರಕರು, ಪಕ್ಷದ ಮುಖಂಡರು ಕ್ಷೇತ್ರ ಬಿಟ್ಟು ತೆರಳಬೇಕು ಮತ್ತು ಈ ಅವಧಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಪತ್ರಿಕಾ ಹೇಳಿಕೆ, ಸಂದರ್ಶನ ನೀಡುವಂತಿಲ್ಲ. ಪತ್ರಿಕಾಗೋಷ್ಠಿ ನಡೆಸುವಂತಿಲ್ಲ.

ವೀರಶೈವ ಮತಗಳ ವಿಚಾರವಾಗಿ
ಯಡಿಯೂರಪ್ಪ ನೀಡಿದ ಹೇಳಿಕೆ ವಿರುದ್ಧ ಈಗಾಗಲೇ ಎಫ್ಐಆರ್‌ ದಾಖಲಾಗಿದೆ. 15 ಜನ ಗೆಲ್ಲುತ್ತಾರೆ, ಎಲ್ಲರನ್ನೂ ಮಂತ್ರಿ ಮಾಡುತ್ತೇವೆ ಎಂಬ ಯಡಿಯೂರಪ್ಪ ಹೇಳಿಕೆ ಚುನಾವಣಾ ನೀತಿ ಸಂಹಿತೆಗೆ ವಿರುದಟಛಿವಾಗಿದೆ. ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡುವುದು ರಾಜಕೀಯ ಪಕ್ಷಗಳಲ್ಲಿ
ಸಂಪ್ರದಾಯವಾಗಿ ಬೆಳೆದಿದೆ. ಈ ಬಗ್ಗೆ ಸಮಾಜದಲ್ಲಿ ಚರ್ಚೆ ಆಗಬೇಕು, ಜನರೂ ಇದನ್ನು ಗಮನಿಸಬೇಕು.
● ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ.

ಟಾಪ್ ನ್ಯೂಸ್

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.