ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಬದಲಾವಣೆಯಿಲ್ಲ
Team Udayavani, Jul 13, 2023, 7:15 AM IST
ಭೋಪಾಲ್: ಮಧ್ಯಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವದಂತಿಗೆ ತೆರೆಬಿದ್ದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಪ್ರದೇಶ ಭೇಟಿ ವೇಳೆ ನಡೆದ ಸಭೆಯಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣುದತ್ತ ಶರ್ಮ ಅವರೇ ತಮ್ಮ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯಾಧ್ಯಕ್ಷ ವಿಷ್ಣುದತ್ತ ಮತ್ತು ಶಿವರಾಜ್ ಸಿಂಗ್ ನಡುವೆ ಭಿನ್ನಮತ ತೀವ್ರವಾಗಿರುವುದರಿಂದ ಸ್ಥಾನಗಳಲ್ಲಿ ಬದಲಾವಣೆಯಾಗಬಹುದು ಎಂಬ ವದಂತಿ ಹಬ್ಬಿತ್ತು.
ಅಮಿತ್ ಶಾ ಅವರು ಮಂಗಳವಾರ ರಾತ್ರಿ ಭೋಪಾಲ್ಗೆ ತೆರಳಿದ್ದರು. ಪಕ್ಷದ ಪ್ರಮುಖರೊಂದಿಗೆ ಅವರು ಸುಮಾರು ಎರಡೂವರೆ ಗಂಟೆ ಸಭೆ ಸಭೆ ನಡೆಸಿದರು. ಎಲ್ಲರೂ ಒಗ್ಗಟ್ಟಾಗಿ ಮುಂಬರುವ ವಿಧಾನಸಭೆ ಚುನಾವಣೆ ಎದುರಿಸುವಂತೆ, “ವಿಜಯ ಸಂಕಲ್ಪ ಅಭಿಯಾನ’ಕ್ಕೆ ಸಕಲ ಸಿದ್ಧತೆ ನಡೆಸುವಂತೆ ಹಾಗೂ ಪ್ರಚಾರದಲ್ಲಿ ತೀವ್ರವಾಗಿ ತೊಡಗಿಕೊಳ್ಳುವಂತೆ ಇದೇ ವೇಳೆ ಮಧ್ಯಪ್ರದೇಶ ಬಿಜೆಪಿ ಘಟಕಕ್ಕೆ ಅವರು ಸೂಚಿಸಿದರು.
ಚುನಾವಣಾ ತಯಾರಿ ಕುರಿತು ಪ್ರತಿನಿತ್ಯದ ಆಧಾರದಲ್ಲಿ ಸ್ವತಃ ಅಮಿತ್ ಶಾ ಅವರೇ ಪರಿಶೀಲನೆ ನಡೆಸಲಿದ್ದಾರೆ. ಸಭೆಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣು ದತ್ ಶರ್ಮ, ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯ, ನಾಯಕರಾದ ಭೂಪೇಂದ್ರ ಯಾದವ್, ಅಶ್ವಿನಿ ವೈಷ್ಣವ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.