ಯತ್ನಾಳ ಕೇಳಿ ರಾಜ್ಯಾಧ್ಯಕ್ಷರನ್ನು ನೇಮಿಸಬೇಕಿಲ್ಲ: ಈಶ್ವರಪ್ಪ
Team Udayavani, Aug 22, 2019, 12:27 PM IST
ವಿಜಯಪುರ: ನಳೀನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲು ಪಕ್ಷದ ವರಿಷ್ಠರು ಬಸನಗೌಡ ಪಾಟೀಲ ಯತ್ನಾಳ ಅವರನ್ನು ಕೇಳುವ ಅಗತ್ಯವಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಮಂಗಳೂರು ಹೊರತಾಗಿ ರಾಜ್ಯದ ಜನರಿಗೆ ಗೊತ್ತಿಲ್ಲ ಎಂಬ ಹೇಳಿಕೆ ಸರಿಯಲ್ಲ. ನಾನು ರಾಜ್ಯಾಧ್ಯಕ್ಷನಾಗಿ ನೇಮಕವಾದಾಗ ವಿಜಯಪುರ ಜಿಲ್ಲೆಯ ಕುರಿತು ಗೊತ್ತಿರಲಿಲ್ಲ. ಈಗ ಇಡೀ ರಾಜ್ಯ ನನ್ನನ್ನು ಗುರುತಿಸುತ್ತಿದೆ. ಯತ್ನಾಳ ಇನ್ನಾದರೂ ತಮ್ಮ ವರ್ತನೆ ತಿದ್ದಿಕೊಳ್ಳಲಿ. ಪದೇ ಪದೇ ಇಂಥ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಗೋಡ್ಸೆ ಪರ ಮಾತನಾಡಿದ ನಳೀನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕಟ್ಟಿದೆ ಎಂದು ಕಾಂಗ್ರೆಸ್ ಮಾಜಿ ಸಚಿವ ರಮಾನಾಥ ರೈ ಇಂಥ ಹುಚ್ಚು ಹೇಳಿಕೆ ನೀಡುವುದನ್ನು ಇನ್ನಾದರೂ ಬಿಡಬೇಕು. ಅವರ ಇಂಥ ವರ್ತನೆಗೆ ಅಲ್ಲಿನ ಮತದಾರರು ರೈ ಅವರನ್ನು ಮನೆಯಲ್ಲಿ ಕುಳ್ಳಿರಿಸಿದ್ದಾರೆ ಎಂದು ತಿರುಗೇಟು ನೀಡಿದರು.
ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬಲಿಷ್ಠವಾಗಿದೆ. ಭವಿಷ್ಯದಲ್ಲಿ ಪಕ್ಷವನ್ನು ರಾಜ್ಯದಲ್ಲಿ ಅತ್ಯಂತ ಬಲಿಷ್ಠ ಮಾಡುವ ಅಗತ್ಯವಿದೆ. ಇದಕ್ಕಾಗಿ ಎಲ್ಲರೂ ನೂತನ ರಾಜ್ಯಾಧ್ಯಕ್ಷರಿಗೆ ಸಾಥ್ ನೀಡಬೇಕಿದೆ ಎಂದರು.
ಬಾಲಚಂದ್ರ ಜಾರಕಿಹೊಳಿ ಮಾತ್ರವಲ್ಲ, ಯಾರು ಯಾರಿಗೆ ಬೇಕಾದರೂ ಗಡುವು ನೀಡಬಹುದು. ನಮ್ಮದು ಪ್ರಜಾಪ್ರಭುತ್ವ ವಾಕ್ ಸ್ವಾತಂತ್ರ ರಾಷ್ಟ್ರ. ಪ್ರಸಕ್ತ ಸಂದರ್ಭದಲ್ಲಿ ಸರಕಾರ ಪೂರ್ಣ ಪ್ರಮಾಣದ ಬಹುಮತ ಸಿಗದಿರುವ ಕಾರಣ ಹಲವರನ್ನು ಸಚಿರನ್ನಾಗಿ ಮಾಡಲು ಸಾಧ್ಯವಾಗಿಲ್ಲ. ಸಚಿವಾಕಾಂಕ್ಷಿಗಳು ಅಸಮಾಧಾನ ಹೊರ ಹಾಕಿದ್ದಾರೆಯೇ ಹೊರತು ಯಾರೂ ಸರಕಾರ ಕೆಡವಲು ಯತ್ನಿಸುವ ಹೇಳಿಕೆ ನೀಡಿಲ್ಲ ಎಂದು ಬಿಜೆಪಿ ಅತೃಪ್ತ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಕಾಂಗ್ರೆಸ್-ಜೆಡಿಎಸ್ ತೊರೆಯಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಾಸಕರನ್ನು ಅನರ್ಹ ಮಾಡುವ ಮೂಲಕ ಹಿಂದಿನ ಸ್ಪೀಕರ್ ರಮೇಶಕುಮಾರ ಸಂವಿಧಾನಕ್ಕಿಂತ ತಾವು ದೊಡ್ಡವರಾಗಲು ಹೋಗಿದ್ದಾರೆ ಎಂದು ಕುಟುಕಿದರು.
ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ. ಹೀಗಾಗಿ ಸರಕಾರ ತಚನೆಗೆ ಕಾರಣವಾದ ಶಾಸಕರನ್ನು ಬಿಜೆಪಿ ಕೈ ಬಿಡುವುದಿಲ್ಲ. ಅವರು ಅನರ್ಹರರಲ್ಲ, ಸುಪ್ರೀಂ ಕೋರ್ಟ್ ಈ ಕುರಿತು ಶೀಘ್ರವೇ ನ್ಯಸಯದ ಪರ ಆದೇಶ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.