Uttar Pradesh;ಬಹುದೊಡ್ಡ ಹಗರಣ ಬಯಲಿಗೆ- ಒಬ್ಬ ವೈದ್ಯನ ಹೆಸರಲ್ಲೇ 83 ಆಸ್ಪತ್ರೆ ನೋಂದಣಿ!

ಈವರೆಗೆ 570 ಆಸ್ಪತ್ರೆ ಮತ್ತು ಕ್ಲಿನಿಕ್ಸ್‌ ಗಳ ಪರವಾನಿಗೆ ನವೀಕರಿಸಲಾಗಿದೆ

Team Udayavani, Jun 20, 2023, 1:18 PM IST

Uttar Pradesh;ಬಹುದೊಡ್ಡ ಹಗರಣ ಬಯಲಿಗೆ- ಒಬ್ಬ ವೈದ್ಯನ ಹೆಸರಲ್ಲೇ 83 ಆಸ್ಪತ್ರೆ ನೋಂದಣಿ!

ಆಗ್ರಾ(ಉತ್ತರಪ್ರದೇಶ): ಆಸ್ಪತ್ರೆ ಹಾಗೂ ಕ್ಲಿನಿಕ್ಸ್‌ ಗಳ ಪರವಾನಿಗೆ ನವೀಕರಣ ಅರ್ಜಿಗಳ ಪರಿಶೀಲನೆ ಸಂದರ್ಭದಲ್ಲಿ ದೊಡ್ಡ ಹಗರಣವೊಂದು ಉತ್ತರಪ್ರದೇಶದ ಆಗ್ರಾದಲ್ಲಿ ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Seer Arrested: ಆಶ್ರಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ದೈಹಿಕ ದೌರ್ಜನ್ಯ; ಸ್ವಾಮೀಜಿ ಬಂಧನ

ಆಗ್ರಾ ಮತ್ತು ಸಮೀಪದ ಜಿಲ್ಲೆಗಳಲ್ಲಿ ಸುಮಾರು 15 ವೈದ್ಯರು ಕಾನೂನು ಬಾಹಿರವಾಗಿ 449 ಕ್ಲಿನಿಕ್ಸ್‌ ಗಳಲ್ಲಿ ಪೂರ್ಣಕಾಲಿಕ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ.

ಅದೇ ರೀತಿ ಅವರಲ್ಲೊಬ್ಬ ವೈದ್ಯ ಮೀರತ್‌, ಕಾನ್ಪುರ್‌ ಹಾಗೂ ಪಶ್ಚಿಮ ಉತ್ತರಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಸುಮಾರು 83 ಆಸ್ಪತ್ರೆಗಳನ್ನು ತನ್ನ ಹೆಸರಿನಲ್ಲಿ ನೋಂದಾಯಿಸಿಕೊಂಡಿರುವುದು ಪರವಾನಿಗೆ ನವೀಕರಣ ಅರ್ಜಿಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿ ವಿವರಿಸಿದೆ.

ಕಾನುನು ಬಾಹಿರ ನಡವಳಿಕೆ ತೋರಿದ ಈ ವೈದ್ಯರುಗಳಿಗೆ ನೋಟಿಸ್‌ ಜಾರಿಗೊಳಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯ ವೈದ್ಯಾಧಿಕಾರಿ ಅರುಣ್‌ ಕುಮಾರ್‌ ಶ್ರೀವಾಸ್ತವ್‌ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ವೃತ್ತಿಪರ ವೈದ್ಯರಲ್ಲದ ಜನರು ಆಸ್ಪತ್ರೆ, ಕ್ಲಿನಿಕ್‌ ಮತ್ತು ಪೆಥಾಲಜಿ ಪ್ರಯೋಗಾಲಯ ನಡೆಸಲು ಆರೋಗ್ಯ ಇಲಾಖೆಯಿಂದ ವೈದ್ಯರ ಹೆಸರಿನಲ್ಲಿ ಪರವಾನಿಗೆ ಪಡೆಯುತ್ತಾರೆ ಎಂದು ತಿಳಿಸಿದೆ.

ಆಸ್ಪತ್ರೆ, ಕ್ಲಿನಿಕ್‌ ಗಳ ಲೈಸೆನ್ಸ್‌ ನವೀಕರಣ ಪ್ರಕ್ರಿಯೆಯನ್ನು ಆನ್‌ ಲೈನ್ ಮೂಲಕವೇ ನಡೆಸಬೇಕೆಂದು ಉತ್ತರಪ್ರದೇಶ ಸರ್ಕಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ನಂತರ ಈ ಹಗರಣ ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ.

ಆರೋಗ್ಯ ಇಲಾಖೆಯ ದಾಖಲೆಗಳ ಪ್ರಕಾರ, 2022-2023ರ ಸಾಲಿನಲ್ಲಿ 1,269 ಮೆಡಿಕಲ್‌ ಸೆಂಟರ್ಸ್‌ ಗಳು ರಿಜಿಸ್ಟರ್ಡ್‌ ಆಗಿತ್ತು. ಇದರಲ್ಲಿ 494 ಆಸ್ಪತ್ರೆಗಳು, 493 ಕ್ಲಿನಿಕ್ಸ್‌, 170 ಪೆಥಾಲಜಿ ಲ್ಯಾಬ್ಸ್‌, 104 ಡಯಾಗ್ನೋಸ್ಟಿಕ್ಸ್‌ ಸೆಂಟರ್ಸ್‌ ಹಾಗೂ ಒಂದು ಡಯಾಲಿಸಿಸ್‌ ಸೆಂಟರ್‌ ಸೇರಿದೆ.

2023-2024ರ ಸಾಲಿನ ಪರವಾನಿಗೆ ನವೀಕರಣ ಅರ್ಜಿಗಳ ಪರಿಶೀಲನೆ ನಂತರ ಈವರೆಗೆ 570 ಆಸ್ಪತ್ರೆ ಮತ್ತು ಕ್ಲಿನಿಕ್ಸ್‌ ಗಳ ಪರವಾನಿಗೆ ನವೀಕರಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

World Osteoporosis Day: ಆಸ್ಟಿಯೊಪೊರೋಸಿಸ್‌ ಅಥವಾ ಮೂಳೆ ಸವಕಳಿ ಎಂದರೇನು?

6-anasthesia

Anesthesia: ರೋಗಿ ಸುರಕ್ಷೆಗೆ ಒಂದು ನಮನ – ವಿಶ್ವ ಅರಿವಳಿಕೆ ದಿನ ಅಕ್ಟೋಬರ್‌ 16

5-health

Global Infection Control: ಜಾಗತಿಕ ಸೋಂಕು ನಿಯಂತ್ರಣ ಸಪ್ತಾಹ

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

17-

Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.