Maharashtra: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯ, ಭುಗಿಲೆದ್ದ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Team Udayavani, Aug 20, 2024, 3:00 PM IST
ಮುಂಬೈ: ಸ್ಥಳೀಯ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯ ನಡೆಸಿದ ಘಟನೆ ವಿರುದ್ಧ ಮಹಾರಾಷ್ಟ್ರದ ಥಾಣೆಯ ಬದ್ಲಾಪುರ್ ನಲ್ಲಿ ಮಂಗಳವಾರ (ಆ.20) ಭಾರೀ ಪ್ರತಿಭಟನೆ ನಡೆಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು ನಗರವನ್ನು ಬಂದ್ ಮಾಡಿ, ಬದ್ಲಾಪುರ್ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ರೈಲ್ವೆ ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.
ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಘಟನೆಯನ್ನು ಖಂಡಿಸಿದ್ದು, ಆರೋಪಿ ವಿರುದ್ಧ ಕಠಿನ ಕ್ರಮ ತೆಗೆದುಕೊಂಡು, ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಘಟನೆ ನಡೆದ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆರೋಪಿಗೆ ಕಠಿನ ಶಿಕ್ಷೆ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ಶಾಲಾ ಆಡಳಿತ ಮಂಡಳಿಗೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
#WATCH | Maharashtra | Protest underway at Badlapur Station against the alleged sexual assault incident with a girl child at a school in Badlapur pic.twitter.com/eMazZDliiU
— ANI (@ANI) August 20, 2024
ಘಟನೆಗೆ ಸಂಬಂಧಪಟ್ಟಂತೆ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಇತರ ಮೂವರನ್ನು ಅಮಾನತುಗೊಳಿಸಲಾಗಿದೆ. ಘಟನೆಗೆ ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
ಇದೊಂದು ಅತ್ಯಂತ ಕಳವಳಕಾರಿ ಘಟನೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುಣೆ ಮತ್ತು ಮುಂಬೈನ ಐಎಎಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಸಿಸಿಟಿವಿ ಫೂಟೇಜ್ ಪರಿಶೀಲಿಸಿ, ತಕ್ಷಣವೇ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.