Threat: ಹೆಬ್ಬಾಳ್ಕರ್ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ
ಸರ್ಕಾರ, ಪೊಲೀಸರಿಗೆ ದುಷ್ಟ ಶಕ್ತಿಗಳ ಬಗ್ಗೆ ತಿಳಿದಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲವೇಕೆ?: ಬಿ.ವೈ.ವಿಜಯೇಂದ್ರ
Team Udayavani, Jan 12, 2025, 7:15 AM IST
ಚಿಕ್ಕಮಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. 15 ದಿನದಲ್ಲಿ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳದೆ ಹೋದರೆ ಹತ್ಯೆ ಮಾಡುತ್ತೇವೆ ಎಂದು ಎಚ್ಚರಿಸಲಾಗಿದೆ.
ನಮ್ಮ ತಂಡ ಚಿಕ್ಕಮಗಳೂರಿನಲ್ಲಿ ಸಕ್ರಿಯವಾಗಿದೆ. ಲಕ್ಷ್ಮೀ ಅವರ ಕ್ಷಮೆ ಯಾಚಿಸದಿದ್ದರೆ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎಂದು ಬರೆದಿರುವ ಪತ್ರ ನಗರದ ಬಸವನಹಳ್ಳಿಯ ಸಿ.ಟಿ. ರವಿ ನಿವಾಸಕ್ಕೆ ಬಂದಿದೆ. ಈ ಪತ್ರದ ಕುರಿತು ಬಸವನಹಳ್ಳಿ ಪೊಲೀಸ್ ಠಾಣೆಗೆ ಸಿ.ಟಿ.ರವಿ ಆಪ್ತ ಸಹಾಯಕ ಚೇತನ್ ದೂರು ನೀಡಿದ್ದಾರೆ.
ಬೆದರಿಕೆ ಪತ್ರ ರವಾನೆ ಅತ್ಯಂತ ಆತಂಕಕಾರಿ ವಿಷಯ: ಬಿ.ವೈ.ವಿಜಯೇಂದ್ರ
ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸಿಟಿ ರವಿ ಅವರನ್ನು ಗುರಿಯಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕಲಾಗದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ” ಎಂದು ಟೀಕಿಸಿದ್ದಾರೆ.
ಸಿಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ. ಈ ನಿಟ್ಟಿನಲ್ಲಿ ಸಿಟಿ ರವಿ ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಲು ಒತ್ತಾಯಿಸುವೆ. ಶಾಸಕ ಸಿಟಿ ರವಿ ಅವರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆ, ದೌರ್ಜನ್ಯಗಳು ಮುಂದುವರಿದಲ್ಲಿ ರಾಜ್ಯ ಬಿಜೆಪಿ ಅದನ್ನು ಸವಾಲಾಗಿ ಸ್ವೀಕರಿಸಿ ಹೋರಾಡಲಿದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
Naxal Surrender: ‘ಶರಣಾಗುವಾಗ ಬಂದೂಕು ಹಿಡಿದುಕೊಂಡು ಬರುತ್ತಾರಾ?’: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.