ಗುಂಡ್ಲುಪೇಟೆ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆ
ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು
Team Udayavani, Feb 7, 2023, 5:25 PM IST
ಗುಂಡ್ಲುಪೇಟೆ(ಚಾಮರಾಜನಗರ): ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿಯೊಂದರ ಮೃತ ದೇಹ ಪತ್ತೆಯಾಗಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ನಡೆದಿದೆ.
ಹುಲಿಯು ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ಇನ್ನೂ ಕೂಡ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರವಷ್ಟೆ ಕಾರಣ ಗೊತ್ತಾಗಲಿದೆ.
ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ರೈತರೊಬ್ಬರು ಹೋಗಿದ್ದಾಗ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ನಂತರ ರೈತರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಹಾಯಕ ಅರಣ್ಯಾಧಿಕಾರಿ ರವೀಂದ್ರ, ಆರ್ ಎಫ್ ಓ ಶ್ರೀನಿವಾಸ್ ಹಾಗೂ ತಂಡದವರು ಪರಿಶೀಲನೆ ನಡೆಸಿದ್ದು, ಹುಲಿಯ ಮೃತ ದೇಹ ಕೆರೆಯಿಂದ ಮೇಲೆತ್ತಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು:
ಚೌಡಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ, ಚಿರತೆ, ಕಾಡಾನೆಗಳು ನಿರಂತರವಾಗಿ ಜಾನುವಾರು ಹಾಗೂ ರೈತರ ಫಸಲಿನ ಮೇಲೆ ದಾಳಿ ನಡೆಸಿ ನಾಶಗೊಳಿಸಿದ್ದವು. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ರೈತರು ಹಲವು ಬಾರಿ ದೂರು ನೀಡುತ್ತಿದ್ದರೂ ಸಹ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿರಲಿಲ್ಲ. ಆದರೆ ಇದೀಗ ಕೆರೆಯಲ್ಲಿ ಹುಲಿ ಮೃತ ದೇಹ ಪತ್ತೆಯಾಗಿರುವ ಕಾರಣ ಸ್ಥಳಕ್ಕಾಗಿಮಿಸಿದ ಅರಣ್ಯಾಧಿಕಾರಿಗಳನ್ನು ರೈತರ ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ: ಬಾಲಕಿ ಜೊತೆ ಮಾತನಾಡಲು ಬಂದ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ, ಮೂತ್ರ ಕುಡಿಸಿದ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.