Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಕೆ ಅತ್ಯಂತ ದುರದೃಷ್ಟಕರ: ಅಯೋಧ್ಯೆ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿಕೆ
Team Udayavani, Sep 21, 2024, 9:15 PM IST
ಅಯೋಧ್ಯಾ: ತಿರುಪತಿ (Thirupathi) ಶ್ರೀವೆಂಕಟೇಶ್ವರ ದೇವಸ್ಥಾನದ ‘ಪ್ರಸಾದ’ವನ್ನು ಜನವರಿಯಲ್ಲಿ ನಡೆದ ಅಯೋಧ್ಯೆಯ ಶ್ರೀರಾಮಮಂದಿರದ (Ramamandir) ಪ್ರಾಣಪ್ರತಿಷ್ಠೆ ವೇಳೆಯ ಸಮಾರಂಭದಲ್ಲಿ (Ayodhya) ಭಕ್ತರಿಗೆ ವಿತರಿಸಲಾಗಿತ್ತು ಎಂದು ಅಯೋಧ್ಯೆ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಕಠಿಣ ಕ್ರಮಕ್ಕೆ ಒತ್ತಾಯ
ತಿರುಪತಿಯ ಲಡ್ಡು ಪ್ರಸಾದಕ್ಕೆ ಬಳಸಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಅಯೋಧ್ಯೆ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ‘ಪ್ರಸಾದ’ದಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಿದ್ದರೆ ಅದು ಅಕ್ಷಮ್ಯ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ಕುರಿತು ತನಿಖಾ ಸಂಸ್ಥೆಯಿಂದ ತನಿಖೆಯಾಗಲಿ ಎಂದು ಸತ್ಯೇಂದ್ರ ದಾಸ್ ಒತ್ತಾಯಿಸಿದ್ದಾರೆ.
ಬೆಳ್ಳುಳ್ಳಿ, ಈರುಳ್ಳಿಯನ್ನೂ ಬಳಸದವರಿಗೆ ಅಪಚಾರ
ವೈಷ್ಣವ ಸಂತರು ಮತ್ತು ಭಕ್ತರು ಬೆಳ್ಳುಳ್ಳಿ, ಈರುಳ್ಳಿಯೂ ಬಳಸುವುದಿಲ್ಲ. ಇಂತಹ ಸಂದರ್ಭದಲ್ಲಿ ಲಡ್ಡು ಪ್ರಸಾದದಲ್ಲಿ ಕೊಬ್ಬು ಬಳಸಿರುವುದು ಅತ್ಯಂತ ದುರದೃಷ್ಟಕರ. ಇದು ಹಿಂದೂ ನಂಬಿಕೆಯ ಅಪಹಾಸ್ಯ. ಪ್ರಮುಖ ಏಜೆನ್ಸಿಗಳು ಇದನ್ನು ತನಿಖೆ ಮಾಡಬೇಕು ಮತ್ತು ತಪ್ಪಿತಸ್ಥರು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ದಾಸ್ ಹೇಳಿದ್ದಾರೆ.
ಗುಣಮಟ್ಟದ ಪ್ರಸಾದ ವಿತರಿಸಲಿ:
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾತನಾಡಿ ” ತಿರುಪತಿ ಲಡ್ಡು ಪ್ರಸಾದದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ತನಿಖಾ ವರದಿಗಾಗಿ ಕಾಯುತ್ತಿದ್ದೇವೆ. ರಾಮ ಜನ್ಮಭೂಮಿಯಲ್ಲಿ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಭಕ್ತರಿಗೆ ಏಲಕ್ಕಿ ಬೀಜಗಳ ಮಾತ್ರವೇ ವಿತರಿಸಲಾಗಿದೆ. ನಾನು ನನ್ನ ಜೀವನದಲ್ಲಿ 1981ರಲ್ಲಿ ಒಮ್ಮೆ ಮಾತ್ರ ತಿರುಪತಿಗೆ ತೆರಳಿದ್ದೇನೆ. ಅಯೋಧ್ಯೆಯ ಪ್ರಮುಖ ದೇವಸ್ಥಾನ ಹನುಮಾನ್ ಗಡಿಯ ಪ್ರಸಾದದಲ್ಲಿ ದೇಸಿ ಗೋವಿನ ತುಪ್ಪ ಮಾತ್ರ ಬಳಸಲಾಗುತ್ತಿದೆ ಎಂದರು. ತಿರುಪತಿ ಪ್ರಸಾದ ವಿವಾದದಿಂದ ದೇಶಾದ್ಯಂತ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರಿಗೆ ವಿತರಿಸುವ ದೇವರ ಪ್ರಸಾದದ ಗುಣಮಟ್ಟ ಪರೀಕ್ಷಿಸಿ ವಿತರಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿಗೂ ಲಡ್ಡು ಪ್ರಸಾದ ನೀಡಿದ್ರಂತೆ ಜಗನ್!
ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನಂತರ ತಿರುಪತಿ ದೇವಸ್ಥಾನದ ‘ಪ್ರಸಾದ’ (ಲಡ್ಡುಗಳು) ಭಾರೀ ವಿವಾದದ ಕೇಂದ್ರಬಿಂದುವಾಗಿದೆ. 2019 ಮತ್ತು 2024ರ ನಡುವೆ ಆಂಧ್ರದ ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡಿದಾಗ ಪ್ರಧಾನಿ ನರೇಂದ್ರ ಮೋದಿಗೆ ದೇವಸ್ಥಾನದ ಲಡ್ಡುಗಳ ಉಡುಗೊರೆಯಾಗಿ ನೀಡಿದ್ದರು ಎಂದು ವರದಿ ತಿಳಿಸಿದೆ.
ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಲಡ್ಡುಗಳಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬು ಬಳಸಲು ಅನುಮತಿ ನೀಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ ವಿವಾದ ಉಂಟಾಗಿದೆ. ಗುಜರಾತಿನ ಪ್ರಯೋಗಾಲಯದ ವರದಿ ಉಲ್ಲೇಖಿಸಿ, ನಾಯ್ಡು ಅವರ ಪಕ್ಷವು ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಕಂಡು ಬಂದಿದೆ ಎಂದು ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.