ಇಂದು ಲಸಿಕೆ ದಿನ
ಪ್ರಧಾನಿ ನರೇಂದ್ರ ಮೋದಿ ಚಾಲನೆ ರಾಜ್ಯದ 243; ಕರಾವಳಿಯ 12 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ
Team Udayavani, Jan 16, 2021, 6:30 AM IST
ಹೊಸದಿಲ್ಲಿ/ಬೆಂಗಳೂರು: ಕೋವಿಡ್ ವೈರಸ್ ವಿರುದ್ಧ ಲಸಿಕೆ ವಿತರಣೆಗೆ ಪ್ರಧಾನಿ ಮೋದಿ ಶನಿವಾರ ಚಾಲನೆ ನೀಡಲಿದ್ದಾರೆ. ಅಷ್ಟೇ ಅಲ್ಲ, ಕೋವಿನ್ ಆ್ಯಪ್ ಮತ್ತು ದಿನದ 24 ಗಂಟೆಯೂ ಲಭ್ಯವಿರುವ ಸಹಾಯವಾಣಿ 1075 ಸಂಖ್ಯೆಯನ್ನೂ ಇದೇ ಸಂದರ್ಭದಲ್ಲಿ ಆರಂಭಿಸಲಾಗುತ್ತದೆ.
ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಿವೆ. ಬೆಳಗ್ಗೆ 10.30ಕ್ಕೆ ಪ್ರಧಾನಿ ಮೋದಿ ಅವರು ವಚ್ಯುìವಲ್ ಮೂಲಕ ವಿತರಣೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ದೇಶಾದ್ಯಂತ ಲಸಿಕೆ ನೀಡಿಕೆಯನ್ನು ಆರಂಭಿಸಲಾಗುತ್ತದೆ.
ಕರ್ನಾಟಕದಲ್ಲಿ 243 ಕೇಂದ್ರ :
ರಾಜ್ಯದಲ್ಲಿ ಒಟ್ಟು 243 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿದ್ದಾರೆ. 237 ಕೇಂದ್ರಗಳಲ್ಲಿ ಕೊವಿಶೀಲ್ಡ್ ಮತ್ತು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ದಾವಣಗೆರೆ ಕೇಂದ್ರಗಳಲ್ಲಿ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಆತಂಕ ಬೇಡ :
ಲಸಿಕೆ ಪಡೆದ ತತ್‌ಕ್ಷಣ ಕೆಲವರಿಗೆ ತಲೆ ಸುತ್ತು, ಕೈ ಊತ ಉಂಟಾಗಬಹುದು. ಅದು ಸ್ವಲ್ಪ ಸಮಯದ ಅನಂತರ ತಾನಾಗಿಯೇ ಕಡಿಮೆಯಾಗುತ್ತದೆ. ಈ ಬಗ್ಗೆ ಅತಂಕ ಪಡಬೇಕಿಲ್ಲ. ಲಸಿಕೆ ನೀಡಿದ ಅರ್ಧ ತಾಸು ಲಸಿಕಾ ಕೇಂದ್ರದಲ್ಲಿಯೇ ಉಳಿಸಿ ನಿಗಾ ವಹಿಸ ಲಾಗುತ್ತದೆ ಎಂದು ಡಾ| ಸುಧಾಕರ್ ಹೇಳಿದರು.
ಸರಕಾರಿ ಮಾಹಿತಿ ಮಾತ್ರ ನಂಬಿ :
ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಸರಕಾರದಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಡಾ| ಸುಧಾಕರ್ ಸ್ಪಷ್ಟಪಡಿಸಿದರು.
ಮೊದಲ ದಿನ 3 ಲಕ್ಷ ಲಸಿಕೆ :
ಮೊದಲ ದಿನವೇ 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ಇದಕ್ಕಾಗಿ 3,006 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತೀ ಕೇಂದ್ರದಲ್ಲೂ ದಿನಕ್ಕೆ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ 5,000 ಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ.
ಕೇಂದ್ರದ ನಿಯಮಾವಳಿಗಳು :
- 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ.
- ಗರ್ಭಿಣಿಯರು, ಬಾಣಂತಿಯರಿಗೆ ಲಸಿಕೆ ನೀಡಲಾಗುವುದಿಲ್ಲ.
- ಒಮ್ಮೆ ಕೊವಿಶೀಲ್ಡ್ , ಮಗದೊಮ್ಮೆ ಕೊವ್ಯಾಕ್ಸಿನ್ ನೀಡುವುದಿಲ್ಲ.
- 2 ಡೋಸ್‌ಗಳ ನಡುವಿನ ಅಂತರ 14 ದಿನಗಳು.
- ಲಸಿಕೆ ಪಡೆಯುವುದು ಕಡ್ಡಾಯವಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.