ಟೋಕಿಯೊ ಒಲಿಂಪಿಕ್ಸ್ : ಭಾರತದ ಹಾಕಿಗೆ ಮನ್ಪ್ರೀತ್ ಸಾರಥ್ಯ
Team Udayavani, Jun 23, 2021, 6:41 AM IST
ಹೊಸದಿಲ್ಲಿ : ಮಿಡ್ಫೀಲ್ಡರ್ ಆಟಗಾರ ಮನ್ಪ್ರೀತ್ ಸಿಂಗ್ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಪುರುಷರ ಹಾಕಿ ತಂಡವನ್ನು ಮುನ್ನಡೆಸಲಿದ್ದಾರೆ. ಜತೆಗೆ ಹರ್ಮನ್ಪ್ರೀತ್ ಸಿಂಗ್ ಮತ್ತು ಬೀರೇಂದ್ರ ಲಾಕ್ರಾ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಮಂಗಳವಾರ “ಹಾಕಿ ಇಂಡಿಯಾ’ ಇದನ್ನು ಅಧಿಕೃತವಾಗಿ ಪ್ರಕಟಿಸಿತು.
ಜುಲೈ 23ರಿಂದ ಆಗಸ್ಟ್ 8ರ ವರೆಗೆ ನಡೆಯುವ ಒಲಿಂಪಿಕ್ಸ್ಗಾಗಿ ಕಳೆದ ವಾರವೇ ಭಾರತದ 16 ಸದಸ್ಯರ ಹಾಕಿ ತಂಡವನ್ನು ಪ್ರಕಟಿಸಲಾಗಿತ್ತು. ಆದರೆ ನಾಯಕನನ್ನು ಆಯ್ಕೆ ಮಾಡಿರಲಿಲ್ಲ.
“3ನೇ ಬಾರಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವು ದರಿಂದ, ಜತೆಗೆ ಈ ಬಾರಿ ನಾಯಕತ್ವದ ಜವಾಬ್ದಾರಿ ವಹಿಸಿ ರುವುದರಿಂದ ವಿನೀತಭಾವ ಮೂಡಿದೆ. ಇದು ನನಗೆ ಅತ್ಯಂತ ಹೆಮ್ಮೆಯ ಕ್ಷಣ’ ಎಂದು ಮನ್ಪ್ರೀತ್ ಸಂಭ್ರಮಿಸಿದ್ದಾರೆ.
“ಕಳೆದ ಕೆಲವು ವರ್ಷಗಳಿಂದ ನಾವು ಪ್ರಬಲ ನಾಯಕತ್ವದ ಗುಂಪನ್ನು ರೂಪಿಸಿಕೊಂಡಿದ್ದೇವೆ. ಸಾಂಕ್ರಾಮಿಕ ಪಿಡುಗು ತಂದೊಡ್ಡಿದ ಸವಾಲಿನ ನಡುವೆಯೂ ಆಟದ ಗುಣಮಟ್ಟ ಕುಸಿಯದಂತೆ ಯಶಸ್ವಿಯಾಗಿ ನೋಡಿಕೊಂಡಿದ್ದೇವೆೆ’ ಎಂದು ಮನ್ಪ್ರೀತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.