ಕರಾವಳಿ ಹಿನ್ನೀರು ಪ್ರದೇಶದಲ್ಲಿ ಇಕೋ ಟೂರಿಸಂ : ಸಚಿವ ಲಿಂಬಾವಳಿ


Team Udayavani, Jul 11, 2021, 4:05 AM IST

ಕರಾವಳಿ ಹಿನ್ನೀರು ಪ್ರದೇಶದಲ್ಲಿ ಇಕೋ ಟೂರಿಸಂ : ಸಚಿವ ಲಿಂಬಾವಳಿ

ಕುಂದಾಪುರ: ಕರಾವಳಿ ಭಾಗದ ಹಿನ್ನೀರಿನಲ್ಲಿ ಹಲವಾರು ಸುಂದರ ಪ್ರದೇಶಗಳಿವೆ. ಜಲಚರಗಳಿಗೆ ಆಶ್ರಯ ನೀಡುವ ಮತ್ತು ಪ್ರಾಕೃತಿಕವಾಗಿ ಮನಸೆಳೆಯುವ ಕಾಂಡ್ಲಾ ವನ ಪ್ರದೇಶಗಳನ್ನು ಬಳಸಿಕೊಂಡು “ಇಕೋ ಟೂರಿಸಂ’ ಅಭಿವೃದ್ಧಿಗೊಳಿಸುವ ಚಿಂತನೆಗಳಿದ್ದು, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಅವರು ಶನಿವಾರ ಕುಂದಾಪುರದ ಕೋಡಿ ಪಂಚಗಂಗಾವಳಿ ನದಿ ತೀರದ ಹಿನ್ನೀರು ಪ್ರದೇಶಗಳಲ್ಲಿ ಬೋಟ್‌ ಮೂಲಕ ಸಂಚರಿಸಿ ಕಾಂಡ್ಲಾ ವನಗಳನ್ನು ವೀಕ್ಷಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಟೂರಿಸಂ ಆದಾಯ ಕಾಂಡ್ಲಾ ವನಕ್ಕೆ
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಇಲ್ಲಿನ ರಮಣೀಯ ಪ್ರದೇಶಗಳ ದೃಶ್ಯಾವಳಿ ಗಳನ್ನು ಸೆರೆ ಹಿಡಿದು ಇಕೋ ಟೂರಿಸಂ ಕೇಂದ್ರಗಳನ್ನು ಗುರುತಿಸಲಾಗುವುದು. ಹಿನ್ನೀರು ಪ್ರದೇಶಗಳಲ್ಲಿ ಇನ್ನಷ್ಟು ಕಾಂಡ್ಲಾ ವನಗಳನ್ನು ಬೆಳೆಸುವ ಗುರಿ ಇದೆ. ಇಕೋ ಟೂರಿಸಂ ಮೂಲಕ ಬರುವ ಆದಾಯವನ್ನು ಬಳಸಿಕೊಂಡು ಕಾಂಡ್ಲಾ ವನಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಗಳಿವೆ ಎಂದರು.

ಶೇ. 33ಕ್ಕೇರಿಸುವ ಗುರಿ
ಯಡಿಯೂರಪ್ಪ ಅವರ ಹಿಂದಿನ ಸರಕಾರದ ಅವಧಿಯಲ್ಲಿ ರೂಪಿಸಲಾದ “ಹಸಿರು ಕವಚ’ ಯೋಜನೆಯಿಂದಾಗಿ ರಾಜ್ಯದಲ್ಲಿ ಶೇ. 13ರಷ್ಟಿದ್ದ ಹಸಿರು ಕವಚ ಪ್ರಸ್ತುತ ಶೇ. 23ಕ್ಕೇರಿದೆ. ಅದನ್ನು ಶೇ. 33ಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಒಂದೆರಡು ವರ್ಷಗಳಲ್ಲಿ ಮುಗಿಯುವ ಯೋಜನೆ ಇದಲ್ಲ; ಕಾಲಾವಕಾಶ ಬೇಕು ಎಂದ ಅವರು, ಬಂಡೀಪುರ ಸೇರಿದಂತೆ ಹಾಗೂ ಇತರ ಅರಣ್ಯ ಇಲಾಖೆಯ ಪ್ರವಾಸ ಸ್ಥಳಗಳಿಗೆ ಕೋವಿಡ್‌ ಕಾರಣದಿಂದ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಆದರೆ ದಟ್ಟಾರಣ್ಯ ಪ್ರದೇಶಗಳಿಗೆ ಪ್ರವಾಸಿಗ ರಿಗೆ ಅನುಮತಿ ಇಲ್ಲ ಎಂದು ತಿಳಿಸಿದರು.

ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ, ಹಿರಿಯ ಅಧಿಕಾರಿ ಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಿಲ್ಲೆಯಾದ್ಯಂತ ಸಚಿವರ ಪ್ರವಾಸ
ಉಡುಪಿ: ಸಚಿವ ಲಿಂಬಾವಳಿ ಶನಿವಾರ ಕುಂದಾಪುರ, ಉಡುಪಿ ಮತ್ತು ಕಾರ್ಕಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಮಾಡಿ ಕೋಡಿ ಪಂಚಗಂಗಾವಳಿ ನದಿ ತೀರದ ಹಿನ್ನೀರು ಪ್ರದೇಶಗಳಲ್ಲಿ ಬೋಟ್‌ ಮೂಲಕ ಕಾಂಡ್ಲಾ ವನಗಳನ್ನು ವೀಕ್ಷಿಸಿದರು. ಬಳಿಕ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಲ್ಲದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖಾ ಸಭೆ ನಡೆಸಿದರು. ಹೆಬ್ರಿಯಲ್ಲಿ ಸಾಲು ಮರದ ತಿಮ್ಮಕ್ಕ ವೃಕ್ಷೊàದ್ಯಾನ ಉದ್ಘಾಟನೆ, ಕಾರ್ಕಳದಲ್ಲಿ ವನ್ಯಜೀವಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟನೆ ನೆರವೇರಿಸಿ ಕೋಟಿ ಚೆನ್ನಯ ಥೀಂ ಪಾರ್ಕ್‌ಗೆ ಭೇಟಿ ನೀಡಿದರು.

ಟಾಪ್ ನ್ಯೂಸ್

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

1-aaane

Karkala; ಗಣಪತಿ ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮೃತರ ಕುಟುಂಬಸ್ಥರು ಪಾರದರ್ಶಕ ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು

AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.