ಬಂಟ್ವಾಳ ಮೂಲದ ಪಿಎಸ್‌ಐ ನಿಧಿ ಅತ್ಯುತ್ತಮ ಆಲ್‌ರೌಂಡರ್
ನೂತನ ಪೊಲೀಸ್ ಅಧಿಕಾರಿಗಳಿಗೆ ತರಬೇತಿ
Team Udayavani, Feb 21, 2022, 5:45 AM IST
ಬಂಟ್ವಾಳ: ರಾಜ್ಯ ಪೊಲೀಸ್ ಇಲಾಖೆಗೆ 2020ರಲ್ಲಿ ಪಿಎಸ್‌ಐ ಆಗಿ ಆಯ್ಕೆಯಾಗಿರುವ ಬಂಟ್ವಾಳ ಮೂಲದ ನಿಧಿ ಬಿ.ಎನ್. ಅವರು ಕಲಬುರ್ಗಿಯ ಪೊಲೀಸ್ ತರಬೇತಿ ಮಹಾವಿದ್ಯಾಲಯದಲ್ಲಿ ನಡೆದ ತರಬೇತಿಯಲ್ಲಿ ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿ ಹಾಗೂ ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿ ಪಡೆದಿದ್ದಾರೆ.
ನೂತನವಾಗಿ ಆಯ್ಕೆಯಾದವರಿಗೆ 11 ತಿಂಗಳ ತರಬೇತಿಯನ್ನು ನೀಡಲಾಗಿದ್ದು, ಫೆ. 19ರಂದು ತರಬೇತಿಯ ನಿರ್ಗಮನ ಪಥಸಂಚಲನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಖಡ್ಗ, ಟ್ರೋಫಿ ಹಾಗೂ ಪ್ರಶಸ್ತಿ ನೀಡಿ ಗೌರವಿಸಿದರು.
ಇದನ್ನೂ ಓದಿ:ಇದೇ ಮೊದಲ ಬಾರಿಗೆ ಯುಎಇಯಲ್ಲಿ ತಲೆಎತ್ತಲಿದೆ ಐಐಟಿ
ಬಂಟ್ವಾಳ ತಾಲೂಕಿನ ಸೊರ್ನಾಡು ಬಂಡಸಾಲೆಯ ನಿಧಿ ಅವರು ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ನಾರಾಯಣ ಭಂಡಾರಿ ಬೊಟ್ಯಾಡಿ ಮತ್ತು ಬಂಟ್ವಾಳ ಬಿಎಸ್‌ಎನ್‌ಎಲ್‌ನ ನಿವೃತ್ತ ಅಧಿಕಾರಿ ಯಶೋದಾ ದಂಪತಿಯ ಪುತ್ರಿ. ಎಸ್‌ವಿಎಸ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ 7ನೇ ರ್‍ಯಾಂಕ್ ಪಡೆದಿದ್ದ ಅವರು ಕೆಎಎಸ್ ಪರೀಕ್ಷೆ ಬರೆದಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.