ಒಂದೇ ಕಡೆ ಬೀಡು ಬಿಟ್ಟಿರುವ ಅಧಿಕಾರಿಗಳ ವರ್ಗಾವಣೆ: ಸಚಿವ ಎಸ್.ಟಿ.ಸೋಮಶೇಖರ್
Team Udayavani, Mar 21, 2020, 7:56 PM IST
ಬೆಂಗಳೂರು: ರಾಜ್ಯದ ಕೃಷಿ ಮಾರಾಟ ಮಂಡಳಿಯಲ್ಲಿ ಹಲವು ವರ್ಷಗಳಿಂದ ಒಂದೇ ಕಡೆ ಬೀಡು ಬಿಟ್ಟಿರುವ ಅಧಿಕಾರಿಗಳನ್ನು ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಕೃಷಿ ಮಾರಾಟ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಮಂಡಳಿ ಸರ್ವ ಸದಸ್ಯರ ಸಭೆ ಬಳಿಕ ಮಾತನಾಡಿದ ಅವರು, ಕೃಷಿ ಮಾರಾಟ ಮಂಡಳಿಯಲ್ಲಿ 2,289 ಖಾಲಿ ಹುದ್ದೆಗಳಿದ್ದು ಅವುಗಳಲ್ಲಿ ಶೀಘ್ರವಾಗಿ 839 ಹುದ್ದೆಗಳನ್ನು ಕೆಪಿಎಸ್‌ಸಿ ಮೂಲಕ ಭರ್ತಿ ಮಾಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವ ಕೊಡುವ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿಸಿದರು.
ಮೈಸೂರು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಯ ಎಪಿಎಂಸಿಗಳಲ್ಲಿ ತರಬೇತಿ ಕೇಂದ್ರಗಳಿದ್ದು ಅವುಗಳಲ್ಲಿ ರೈತರಿಗೆ ಮತ್ತು ರೈತ ಮಹಿಳೆಯರಿಗೆ ವೈಜ್ಞಾನಿಕ ತರಬೇತಿ ನೀಡಲು ಚರ್ಚೆ ನಡೆಯಿತು. ಕೊರೊನಾ ವೈರಸ್ ತಗ್ಗಿದ ಬಳಿಕ ಆಯ್ದ, ನುರಿತ ರೈತರನ್ನು ಅಧ್ಯಯನ ಪ್ರವಾಸಕ್ಕೆ (ಭಾರತ ದರ್ಶನ)ಕಳುಹಿಸಿ ಕೊಡುವ ಬಗ್ಗೆ ಒಮ್ಮತದ ತೀರ್ಮಾನಕ್ಕೆ ಬರಲಾಯಿತು ಎಂದರು.
ಗೌರವ ಧನ ಹೆಚ್ಚಳ
ಎಪಿಎಂಸಿ ಸದಸ್ಯರ ಗೌರವ ಧನವನ್ನು ಹೆಚ್ಚಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲು ತೀರ್ಮಾನಿಸಲಾಗಿದೆ. ರಾಜ್ಯದ ಎಲ್ಲ ಎಪಿಎಂಸಿಗಳನ್ನ ಕಾಗದ ರಹಿತ(ಇ-ಆಡಳಿತ) ಆಡಳಿತ ನಡೆಸುವ ಬಗ್ಗೆ ಚರ್ಚಿಸಲಾಯಿತು. ಜತೆಗೆ ಪ್ರತಿ 3 ತಿಂಗಳುಗಳಿಗೊಮ್ಮೆ ಸರ್ವಸದಸ್ಯರ ಸಭೆ ಕರೆದು, ಕಾಲ ಕಾಲಕ್ಕೆ ರೈತರ ಸಮಸ್ಯೆಗಳನ್ನು ಚರ್ಚಿಸಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.