ವಾಷಿಂಗ್ಟನ್ : ಉದ್ಯೋಗ ಪರವಾನಗಿ ಮತ್ತೆ 18 ತಿಂಗಳು ವಿಸ್ತರಣೆ
Team Udayavani, May 4, 2022, 10:51 PM IST
ವಾಷಿಂಗ್ಟನ್ : ಅಮೆರಿಕದಲ್ಲಿರುವ ಸಾವಿರಾರು ಭಾರತೀಯ ವೃತ್ತಿಪರರಿಗೆ ಬೈಡೆನ್ ಆಡಳಿತವು ಸಮಾಧಾನಕರ ಸುದ್ದಿಯನ್ನು ನೀಡಿದೆ. ಗ್ರೀನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿರುವವರು, ಎಚ್-1 ಬಿ ವೀಸಾದಾರರ ಸಂಗಾತಿಗಳು ಸೇರಿದಂತೆ ಕೆಲವು ನಿರ್ದಿಷ್ಟ ಕೆಟಗರಿಯ ವಲಸಿಗರು ತಮ್ಮ ಉದ್ಯೋಗ ಪರವಾನಗಿ ಅವಧಿ ಮುಗಿದಿದ್ದರೂ, ಇನ್ನೂ 18 ತಿಂಗಳ ಕಾಲ ಅದನ್ನು ಬಳಸಲು ಸರ್ಕಾರ ಅನುಮತಿ ನೀಡಿದೆ.
ಮೇ 4ರಿಂದಲೇ ಈ ನಿಯಮ ಅನ್ವಯವಾಗಿದ್ದು, ಪರವಾನಗಿಯ ಎಕ್ಸ್‌ಪೈರಿ ದಿನಾಂಕವು ಮತ್ತೆ 540 ದಿನಗಳವರೆಗೆ ಸ್ವಯಂಚಾಲಿತವಾಗಿ ವಿಸ್ತರಣೆಯಾಗಿದೆ ಎಂದು ಅಮೆರಿಕ ಗೃಹ ಇಲಾಖೆ ತಿಳಿಸಿದೆ.
ಈ ಹಿಂದೆ ಪರವಾನಗಿ ಅವಧಿಯನ್ನು 180 ದಿನಗಳಿಗೆ ವಿಸ್ತರಣೆ ಮಾಡಲಾಗಿತ್ತು. ಈಗ ಹೆಚ್ಚುವರಿ 18 ತಿಂಗಳ ಕಾಲಾವಕಾಶ ಸಿಕ್ಕಿರುವ ಕಾರಣ, ಇಲ್ಲಿರುವ ಉದ್ಯೋಗಿಗಳು ನಿರಾತಂಕವಾಗಿ ತಮ್ಮ ಉದ್ಯೋಗವನ್ನು ಮುಂದುವರಿಸಬಹುದು. ಈ ನಿಯಮದಿಂದಾಗಿ ಸುಮಾರು 87 ಸಾವಿರ ವಲಸಿಗರಿಗೆ ಅನುಕೂಲವಾಗಲಿದೆ ಎಂದೂ ಇಲಾಖೆ ತಿಳಿಸಿದೆ.
ಇದನ್ನೂ ಓದಿ :ಪಿಎಸ್ಐ ಪರೀಕ್ಷೆ ಅಕ್ರಮ: ಡಿವೈಎಸ್ಪಿ ,ಇನ್ಸ್ ಪೆಕ್ಟರ್ ಸಸ್ಪೆಂಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.