ಅಳಿದ ತ್ರಿವಳಿ ತಲಾಖ್‌

ನರೇಂದ್ರ ಮೋದಿ ಸರಕಾರದ ಐತಿಹಾಸಿಕ ನಿರ್ಧಾರಕ್ಕೆ ಸಂದ ಜಯ

Team Udayavani, Jul 31, 2019, 6:12 AM IST

39

ಹೊಸದಿಲ್ಲಿ: ಸಾಮಾಜಿಕ ಹಾಗೂ ರಾಜಕೀಯ ಸ್ತರಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿ, ಸಾಕಷ್ಟು ಪರ-ವಿರೋಧ ವಾದಗಳಿಗೆ ಗುರಿಯಾಗಿದ್ದ ತ್ರಿವಳಿ ತಲಾಖ್‌ ಕುರಿತ ಮಸೂದೆಯು (2019ರ ಮುಸ್ಲಿಂ ಮಹಿಳೆಯರ ವೈವಾಹಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ) ಕೊನೆಗೂ ರಾಜ್ಯಸಭೆಯ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ತ್ರಿವಳಿ ತಲಾಖ್‌ ರದ್ದುಗೊಳಿಸುವ ಕೇಂದ್ರದ ಐತಿಹಾಸಿಕ ನಿರ್ಧಾರಕ್ಕೆ ಸಂಸತ್ತಿನ ಅಂಗೀಕಾರ ಸಿಕ್ಕಂತಾಗಿದೆ.

ಈ ಹಿಂದೆ ಮೂರು ಬಾರಿ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದರೂ ರಾಜ್ಯಸಭೆಗೆ ಬಂದಾಗಲೆಲ್ಲ ಅದು ಹಿನ್ನಡೆ ಅನುಭವಿಸುತ್ತಿತ್ತು. ಈ ಬಾರಿ ರಾಜ್ಯಸಭೆಯ ಅಗ್ನಿ ಪರೀಕ್ಷೆಯಲ್ಲಿ ಮಸೂದೆ ಗೆದ್ದು ಬಂದಿದೆ. ಮಸೂದೆ ಪರವಾಗಿ 99 ಮತಗಳು ಬಂದರೆ, ವಿರೋಧವಾಗಿ 84 ಮತಗಳು ಬಂದವು.

ಮುಂದಿನ ಹಂತದಲ್ಲಿ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಲಾಗುತ್ತದೆ. ರಾಷ್ಟ್ರಪತಿಗಳ ಅಂಕಿತ ಬಿದ್ದ ಬಳಿಕ ಫೆ. 21ರಂದು ಇದೇ ವಿಚಾರವಾಗಿ ರಾಷ್ಟ್ರಪತಿ ಯವರು ನೀಡಿದ್ದ ಅಧ್ಯಾದೇಶಕ್ಕೆ ಬದಲು ಕಾನೂನಾಗಿ ಈ ಮಸೂದೆ ಜಾರಿಗೊಳ್ಳಲಿದೆ.

ವರವಾದ ವಿಪಕ್ಷಗಳ ನಡೆ!
ಮತದಾನಕ್ಕೂ ಮೊದಲು ಅಂದಾಜಿಸಿದ್ದ ಪ್ರಕಾರ, 245 ಸದಸ್ಯ ಬಲವಿರುವ ರಾಜ್ಯಸಭೆಯಲ್ಲಿ 4 ಸ್ಥಾನಗಳು ಖಾಲಿ ಇರುವುದರಿಂದ ಸದನದ ಒಟ್ಟು ಬಲ 241 ಆಗಿದ್ದು ಮಸೂದೆಯ ಪರವಾಗಿ 121 ಮತಗಳು ಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಮಂಗಳವಾರದ ಕಲಾಪಕ್ಕೆ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ, ತೆಲಂಗಾಣ ರಾಷ್ಟ್ರೀಯ ಕಾಂಗ್ರೆಸ್‌ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ನ ಕೆಲವು ಸಂಸದರು ಗೈರಾಗಿದ್ದರು. ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಅವರು ಮಸೂದೆಯನ್ನು ಮಂಡಿಸಿದ ಅನಂತರ, ಸುಮಾರು ನಾಲ್ಕೂವರೆ ಗಂಟೆಗಳ ಕಾಲ ನಡೆದ ಚರ್ಚೆಯ ವೇಳೆ ಜೆಡಿಯು ಹಾಗೂ ಎಐಎಡಿಎಂಕೆ ಸಭಾತ್ಯಾಗ ಮಾಡಿದವು. ಹೀಗೆ ವಿಪಕ್ಷ ಸದಸ್ಯರ ಗೈರು ಹಾಗೂ ಸಭಾತ್ಯಾಗಗಳು ರಾಜ್ಯಸಭೆಯಲ್ಲಿ ವಿಪಕ್ಷದವರ ಸಂಖ್ಯೆಯನ್ನು ಗಣನೀಯವಾಗಿ ಕುಗ್ಗಿಸಿತು. ಹಾಗಾಗಿ ಸದನದ ಸದಸ್ಯ ಬಲ 183ಕ್ಕೆ ಇಳಿಯಿತು ಹಾಗೂ ಮಸೂದೆಯ ಬಹುಮತಕ್ಕೆ 92 ಮತಗಳು ಬೇಕಾದವು. ಇದರ ನಡುವೆಯೇ ಎನ್‌ಡಿಎ ಹಾಗೂ ಯುಪಿಎನಲ್ಲಿ ಗುರುತಿಸಿಕೊಳ್ಳದ ಬಿಜೆಡಿ ಪಕ್ಷವು ಮತದಾನದಲ್ಲಿ ಮಸೂದೆಯನ್ನು ಬೆಂಬಲಿಸುವುದಾಗಿ ಘೋಷಿಸಿದ್ದು ಸರಕಾರಕ್ಕೆ ಅನುಕೂಲವಾಯಿತು.

ಸದನ ಸಮಿತಿಗೆ ಹಸ್ತಾಂತರವಿಲ್ಲ
ಅಂತಿಮ ಮತದಾನಕ್ಕೂ ಮುನ್ನ, ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಮಸೂದೆಯನ್ನು ರಾಜ್ಯಸಭೆಯ ಸ್ಥಾಯೀ ಸಮಿತಿಯ ಪರಿಶೀಲನೆಗೆ ಕಳುಹಿಸಬೇಕೆಂದು ವಿಪಕ್ಷಗಳು ಹಿಡಿದಿದ್ದ ಪಟ್ಟು, ಮತದಾನದಲ್ಲಿ ವಿಫ‌ಲಗೊಂಡಿತು. ವಿಪಕ್ಷಗಳ ಪರವಾಗಿ 84 ಮತಗಳು ಬಂದರೆ, ಆಡಳಿತ ಪಕ್ಷದ ಪರವಾಗಿ 100 ಮತಗಳು ಬಂದಿದ್ದವು.

ವಿವಾದಕ್ಕೀಡಾಗಿದ್ದು ಏಕೆ?
ಮಸೂದೆಯಲ್ಲಿ ತ್ರಿವಳಿ ತಲಾಖ್‌ ನೀಡುವ ಪತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ನೀಡಬೇಕೆಂಬ ಅಂಶವು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಅಂಶವು ದುರುಪಯೋಗವಾಗುವ ಸಾಧ್ಯತೆ ಇರುವುದರಿಂದ ಇದು ರಾಜ್ಯಸಭೆಯ ಆಯ್ಕೆ ಸಮಿತಿಯ ಅವಗಾಹನೆಗೆ ಒಳಗಾಗಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿದ್ದವು.

ಇದು ಮುಸ್ಲಿಂ ಕುಟುಂಬಗಳನ್ನು ಒಡೆಯುವಂಥ ಮಸೂದೆ. ಇದರ ಹಿಂದೆ ರಾಜಕೀಯ ಉದ್ದೇಶಗಳಿವೆ. ಇಂಥ ಮಸೂದೆಗಳ ಆಲೋಚನೆ ಬರುವುದು ಕೇವಲ ಬಿಜೆಪಿ ಸರಕಾರದಲ್ಲಿ ಮಾತ್ರ.
– ಗುಲಾಂ ನಬಿ ಆಜಾದ್‌, ಕಾಂಗ್ರೆಸ್‌ ಸಂಸದ

ಇದೊಂದು ಐತಿಹಾಸಿಕ ದಿನ. ಮುಸ್ಲಿಂ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಮೋದಿ ಸರಕಾರ ಮಾಡುತ್ತಿರುವ ಪ್ರಯತ್ನಗಳಿಗೆ ಸಂದ ಜಯ.
– ರವಿಶಂಕರ್‌ ಪ್ರಸಾದ್‌, ಕೇಂದ್ರ ಕಾನೂನು ಸಚಿವ

ಮಸೂದೆ ಏನು ಹೇಳುತ್ತದೆ?
1 ಎಲೆಕ್ಟ್ರಾನಿಕ್‌ ರೂಪದಲ್ಲಿ ಅಥವಾ ಬರವಣಿಗೆ ರೂಪದಲ್ಲಿ ಒಮ್ಮೆಲೇ ಮೂರು ಬಾರಿ ತ್ರಿವಳಿ ತಲಾಖ್‌ ಹೇಳುವುದನ್ನು ಅನೂರ್ಜಿತ ಎಂದು ಪರಿಗಣಿಸುತ್ತದೆ.
2 ಇದು ಶಿಕ್ಷಾರ್ಹ ಅಪರಾಧ. (ಪೊಲೀಸ್‌ ಅಧಿಕಾರಿ ವಾರಂಟ್‌ ಇಲ್ಲದೆ ತಲಾಖ್‌ ಕೊಟ್ಟವನನ್ನು ಬಂಧಿಸಬಹುದು. ಆದರೆ ಆತನ ಪತ್ನಿ, ಪತ್ನಿಯ ರಕ್ತ ಸಂಬಂಧಿಕರು ದೂರು ನೀಡಬೇಕು).
3 ಬಂಧಿತ ಪುರುಷನಿಗೆ ಜಾಮೀನು ಕೊಡುವ ಅಧಿಕಾರ ಮ್ಯಾಜಿಸ್ಟ್ರೇಟ್‌ಗೆ ಇರುತ್ತದೆ. ಆದರೆ ತಲಾಖ್‌ ಪಡೆದ ಮಹಿಳೆಯ ವಾದ ಆಲಿಸಬೇಕು.
4 ಪತಿ ಮತ್ತು ಪತ್ನಿಗೆ ಮಾತುಕತೆಯ ಮೂಲಕ ಮತ್ತೆ ಒಂದಾಗುವ ಅವಕಾಶವನ್ನೂ ಈ ಮಸೂದೆ ಕಲ್ಪಿಸಿದೆ. ಆದರೆ ಈ ವೇಳೆ ಮ್ಯಾಜಿಸ್ಟ್ರೇಟ್‌ ಕೆಲವೊಂದು ನಿಬಂಧನೆಗಳನ್ನು ಹಾಕಬಹುದು.
5 ಡೈವೋರ್ಸ್‌ಗೆ ಒಳಗಾದ ಮಹಿಳೆ ಮತ್ತು ಆಕೆಯ ಮಕ್ಕಳ ಜೀವನಾಂಶಕ್ಕಾಗಿ ಗಂಡ ಹಣ ನೀಡಬೇಕು. ಎಷ್ಟು ನೀಡಬೇಕು ಎಂಬುದನ್ನು ಮ್ಯಾಜಿಸ್ಟ್ರೇಟ್‌ ನಿರ್ಧರಿಸುತ್ತಾರೆ.
6 ಮಹಿಳೆ ಅಪ್ತಾಪ್ತ ವಯಸ್ಸಿನ ಮಕ್ಕಳನ್ನು ತನ್ನಲ್ಲೇ ಇರಿಸಿಕೊಳ್ಳುತ್ತೇನೆ ಎಂದು ಕೇಳಿದಲ್ಲಿ ಮ್ಯಾಜಿಸ್ಟ್ರೇಟ್‌ ಅವರು ಆಕೆಯ ವಶಕ್ಕೆ ನೀಡಬಹುದು.

ಲಿಂಗ ಸಮಾನತೆಗೆ ಸಂದ ಜಯ: ಮೋದಿ ಬಣ್ಣನೆ
ತ್ರಿವಳಿ ತಲಾಖ್‌ ಕಾಯ್ದೆಯು ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಮುಸ್ಲಿಂ ಸಮುದಾಯದಲ್ಲಿ ಪುರಾತನ ಕಾಲ ದಿಂದಲೂ ಇದ್ದ ಆಚರಣೆಯೊಂದು ಇಂದು ಇತಿಹಾಸದ ಕಸದಬುಟ್ಟಿಗೆ ಸೇರಿದೆ. ಪ್ರಾಚೀನ ಪದ್ಧತಿಯಿಂದ ಆಗುತ್ತಿದ್ದ ಅನ್ಯಾಯಗಳನ್ನು ಸಂಸತ್ತು ಇಂದು ತಿರಸ್ಕರಿಸಿದೆ. ಇದು
ಲಿಂಗ ಸಮಾನತೆಗೆ ಸಂದ ಜಯ ಎಂದಿದ್ದಾರೆ.

245 ರಾಜ್ಯಸಭೆಯ ಒಟ್ಟು ಬಲಾಬಲ
183 ವಿಪಕ್ಷಗಳ ಸದಸ್ಯರ ಗೈರು, ಸಭಾತ್ಯಾಗದಿಂದ ಇಳಿದ ಸದನದ ಬಲ
92 ಮಸೂದೆ ಅಂಗೀಕಾರಕ್ಕೆ ಅಗತ್ಯವಿದ್ದ ಸಂಖ್ಯೆ
99 ಮಸೂದೆ ಪರವಾಗಿ ಬಂದ ಮತಗಳು
84 ಮಸೂದೆ ವಿರೋಧವಾಗಿ ಬಂದ ಮತಗಳು

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.