ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಸಿಎಂ ಬೊಮ್ಮಾಯಿ

Team Udayavani, Dec 9, 2021, 7:58 PM IST

ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು : ಕಾಶಿಯಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಪಟಗಳನ್ನು ನಿರ್ಮಿಸುವ 30 ಕೋಟಿ ರೂ. ವೆಚ್ಚದ ಯೋಜನೆಗೆ ಜನವರಿ 14, 15 ರ ಹರಜಾತ್ರೆ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹರಿಹರದ ಪಂಚಮಸಾಲಿ ಗುರುಪೀಠದ ಆಶ್ರಯದಲ್ಲಿ ನಡೆಯಲಿರುವ ಹರಜಾತ್ರೆಯ ಲೋಗೋ, ಧ್ವನಿಸುರುಳಿ, ಟಿ ಶರ್ಟ್ ನ್ನು ಬಿಡುಗಡೆ ಮಾಡಿ ಮಾತನಾಡಿದರು.

ಹರ ಎಂದರೆ ಶಕ್ತಿ :
ಹರ ಎಂದರೆ ಆಧ್ಯಾತ್ಮಕವಾಗಿ ಶಕ್ತಿ, ಲೌಕಿಕವಾಗಿ ‘ಬಗೆಹರಿಸುವುದು’ ಎಂದರ್ಥ. ಜಗತ್ತಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತಹ ಶ್ರೇಷ್ಠ ದೇವತೆ ಹರ. ಹರನನ್ನು ನಂಬುವವರು ತಮ್ಮ ಬದುಕಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಪಂಚಮಸಾಲಿ ಸಮಾಜಕ್ಕೆ ದೊಡ್ಡ ಇತಿಹಾಸವಿದೆ. ಒಕ್ಕಲುತನವನ್ನು ನಂಬಿದವರು 21ನೇ ಶತಮಾನದಲ್ಲಿ ಬದಲಾವಣೆ ಆಗಬೇಕು. ಅತಿ ಹೆಚ್ಚು ವಿದ್ಯಾವಂತರಿರುವ, ಎಲ್ಲ ರಂಗದಲ್ಲಿಯೂ ಪರಿಣಿತರಿರುವ ಸಮಾಜವಾಗಿ ಹೊರಹೊಮ್ಮಬೇಕಾಗಿರುವ ಆಧುನಿಕ ಸಮಯದ ಬೇಡಿಕೆಯಾಗಿದೆ. ಈ ದಿಸೆಯಲ್ಲಿ ಶ್ರೀಗಳು ಹೊಸ ದಿಕ್ಕನ್ನು ತೋರಿಸಿದ್ದಾರೆ. ಪೀಠಕ್ಕೆ ಬಂದ ಕೆಲವೇ ದಿನಗಳಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ಸ್ಥಳಕ್ಕೆ ಪಾದಯಾತ್ರೆ ಮಾಡುವ ಮೂಲಕ ತಮ್ಮ ಬದ್ಧತೆಯನ್ನು , ಕರ್ತವ್ಯನಿಷ್ಠೆಯನ್ನು ಇಡೀ ಸಮಾಜಕ್ಕೆ ತೋರಿಸಿದ್ದಾರೆ. ಕೇವಲ ಒಬ್ಬ ವ್ಯಕ್ತಿ ಮಾತ್ರವಲ್ಲ, ಇಡೀ ಸಮಾಜ, ಸಮುದಾಯ, ನಾಡಿನ ಜನ ಉತ್ತಮ ರೀತಿಯಲ್ಲಿ ಬದುಕು ನಡೆಸುವ ಕಲ್ಪನೆಯೊಂದಿಗೆ ಶ್ರೀಗಳು ದುಡಿಯುತ್ತಿದ್ದಾರೆ. ಪರಮಪೂಜ್ಯರ ನೇತೃತ್ವದಲ್ಲಿ ಹರಜಾತ್ರೆ ದೊಡ್ಡಮಟ್ಟದಲ್ಲಿ ನಡೆಯುತ್ತಾ ಬಂದಿದೆ ಎಂದರು.

ಇದನ್ನೂ ಓದಿ : ಸ್ನೇಹಿತನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ತಡವಾಗಿ ಬೆಳಕಿಗೆ ಬಂದ ಘಟನೆ

ಹರಜಾತ್ರೆಯ ಮೂಲಕ ನಾಡು, ಸಂಸ್ಕೃತಿಯ ಬೆಳವಣಿಗೆ :
ನಾಗರಿಕತೆ ಬೆಳೆಯುತ್ತದೆ. ಆದರೆ ಸಂಸ್ಕೃತಿಯನ್ನು ಬೆಳೆಸಬೇಕಾಗುತ್ತದೆ. ಹರಜಾತ್ರೆಯ ಮೂಲಕ ನಾಡು, ಸಂಸ್ಕೃತಿಯನ್ನು ಬೆಳೆಸುವ ಗುರಿ ಪೂಜ್ಯರು ಹೊಂದಿದ್ದಾರೆ. ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹರಜಾತ್ರೆಯಲ್ಲಿ ಯುವಜನರಿಗೆ ಎನ್‍ಇಪಿ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಶಿಕ್ಷಣ ಮತ್ತು ಕೌಶಲ್ಯ ಸಿಕ್ಕ ನಂತರ ಉದ್ಯೋಗ ಮತ್ತು ಉದ್ಯಮ ಸೃಜನೆಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ :
ಸಮಾಜವನ್ನು ಕಟ್ಟುವ ಜೊತೆಗೆ ಸಮಾಜಕ್ಕೆ ನ್ಯಾಯವನ್ನು ಒದಗಿಸುವ ವಿಚಾರದಲ್ಲಿ ಬಹಳ ಸ್ಪಷ್ಠತೆಯಿಂದ ಮುನ್ನೆಡಿದ್ದಾರೆ. ಸಮಾಜವನ್ನು 2 ಎ ಮೀಸಲಾತಿ ನೀಡುವ ಬಗ್ಗೆ ಸೂಕ್ತ ಸಲಹೆ ಸಹಕಾರಗಳನ್ನು ನೀಡಿದ್ದಾರೆ. ಸರ್ಕಾರ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್‌ ಮಾತ್ರ!

BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್‌ ಮಾತ್ರ!

High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫ‌ಲ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫ‌ಲ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು

Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Suside-Boy

Vitla: ಅನಂತಾಡಿ: ಸೀರೆಗೆ ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.