Nipah Virus: ಕೇರಳದಲ್ಲಿ ನಿಫಾ ವೈರಸ್ ನಿಂದಾಗಿ ಇಬ್ಬರ ಸಾವು-ತೀವ್ರ ನಿಗಾ: ಕೇಂದ್ರ ಸರ್ಕಾರ
2021 ರಲ್ಲಿ ಬಾವಲಿಗಳಿಂದ ಹರಡುವ ನಿಫಾ ವೈರಸ್ ಹತ್ತಾರು ಸಾವು ನೋವುಗಳಿಗೆ ಕಾರಣವಾಗಿತ್ತು.
Team Udayavani, Sep 12, 2023, 6:47 PM IST
ನವದೆಹಲಿ: ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವ್ಯ ಮಂಗಳವಾರ (ಸೆ.12) ಖಚಿತಪಡಿಸಿದ್ದಾರೆ.
ಇದನ್ನೂ ಓದಿ:ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ
ಇನ್ನೂ ನಾಲ್ಕು ಮಂದಿ ನಿಫಾ ವೈರಸ್ ಸೋಂಕಿಗೆ ಒಳಗಾಗಿರುವುದಾಗಿ ಶಂಕಿಸಲಾಗಿದ್ದು, ಅವರ ಸ್ಯಾಂಪಲ್ಸ್ ಅನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿರುವುದಾಗಿ ಸಚಿವ ಮಾಂಡವ್ಯ ತಿಳಿಸಿದ್ದಾರೆ.
ಕೇರಳದಲ್ಲಿ ಇಬ್ಬರು ಅಸಹಜ ಸಾವಿನಿಂದ ಸಾವನ್ನಪ್ಪಿದ್ದು, ನಿಫಾ ವೈರಸ್ ಭೀತಿ ಹೆಚ್ಚಿಸಿರುವುದಾಗಿ ಈ ಮೊದಲು ವರದಿಯಾಗಿತ್ತು. ಇದೀಗ ಜ್ವರದಿಂದ ಬಳಲುತ್ತಿದ್ದ ಇಬ್ಬರು ನಿಫಾ ವೈರಸ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಸಚಿವ ಮಾಂಡವ್ಯ ದೃಢಪಡಿಸಿದ್ದು, ಈ ನಿಟ್ಟಿನಲ್ಲಿ ನಿಫಾ ವೈರಸ್ ಭೀತಿಯನ್ನು ಹೆಚ್ಚುವಂತೆ ಮಾಡಿರುವುದಾಗಿ ವರದಿ ತಿಳಿಸಿದೆ.
ನಿಫಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೇರಳಕ್ಕೆ ಕೇಂದ್ರದ ಆರೋಗ್ಯ ಇಲಾಖೆ ತಂಡವನ್ನು ಕಳುಹಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರ್ಕಾರಕ್ಕೆ ನಿಫಾ ವೈರಸ್ ನಿರ್ವಹಣೆ ಕುರಿತು ನೆರವು ನೀಡುವಂತೆ ತಿಳಿಸಿರುವುದಾಗಿ ಮಾಂಡವ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೇರಳದಲ್ಲಿ 2018 ಹಾಗೂ 2021 ರಲ್ಲಿ ಬಾವಲಿಗಳಿಂದ ಹರಡುವ ನಿಫಾ ವೈರಸ್ ಹತ್ತಾರು ಸಾವು ನೋವುಗಳಿಗೆ ಕಾರಣವಾಗಿತ್ತು. ಕೋಝಿಕ್ಕೋಡ್ ನಲ್ಲಿ ಈ ಹಿಂದೆ ಕೂಡ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿತ್ತು.
ಬಾವಲಿಗಳು ಕಚ್ಚಿದ ಹಣ್ಣನ್ನು ಸೇವಿಸಿದರೆ ಈ ವೈರಸ್ ಹರಡುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ ಹಾಗೂ ಪ್ರಾಣಿಗಳಿಗೂ ವೇಗವಾಗಿ ನಿಫಾ ವೈರಸ್ ಹರಡುತ್ತದೆ. ಇದು ಉಸಿರಾಟದ ತೊಂದರೆ, ತಲೆನೋವು, ಸ್ನಾಯು ಸೆಳೆತದಂತಹ ಲಕ್ಷಣಗಳನ್ನು ಒಳಗೊಂಡಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.