ಹರ್ಯಾಣದಲ್ಲಿ ಕಾರು ಹೊತ್ತಿ ಉರಿದು ಇಬ್ಬರು ಮುಸ್ಲಿಂ ಯುವಕರ ಸಾವು:ಗೋ ಸಾಗಾಟ, ಕೊಲೆ ಶಂಕೆ
Team Udayavani, Feb 17, 2023, 10:39 AM IST
ಭರತ್‌ಪುರ್: ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ಬೆಂಕಿಯ ಕೆನ್ನಾಲಿಗೆಯಿಂದಾಗಿ ಹೊತ್ತಿ ಉರಿದ ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಶವ ಪತ್ತೆಯಾದ ಒಂದು ದಿನದ ಬಳಿಕ ಇದೀಗ ಪೋಲಿಸರು 5 ಮಂದಿ ಮೇಲೆ ಪ್ರಕರಣ ದಾಖಲಾಗಿದೆ. ಇಬ್ಬರೂ ಮುಸ್ಲಿಂ ಯುವಕರನ್ನು ರಾಜಸ್ಥಾನದ ಭರತ್‌ಪುರ್ ಜಿಲ್ಲೆಯಿಂದ ಅಪಹರಿಸಿ ಹರ್ಯಾಣದಲ್ಲಿ ಕೊಲೆಗೈಯ್ಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಈಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು ಗೋವಿನ ಕಳ್ಳ ಸಾಗಾಣಿಕೆಯ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ನಾಸಿರ್ ಮತ್ತು ಜುನೈದ್ ಎಂದು ಗುರುತಿಸಲಾಗಿದೆ. ಅಲ್ಲದೆ ಪ್ರಕರಣ ಸಂಬಂಧ 5 ಮಂದಿ ಗೋರಕ್ಷಕರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲಾಗಿದೆ.
ಫೆ.16ರಂದು ನಾಸಿರ್ ಮತ್ತು ಜುನೈದ್ ಅವರ ಮೃತದೇಹ ಮಹೇಂದ್ರಾ ಬೊಲೆರೋ ಕಾರಿನಲ್ಲಿ ಹೊತ್ತಿ ಉರಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದ ಪೋಲಿಸರು ಈಗ 5 ಮಂದಿಯನ್ನು ಬಂಧಿಸಿದ್ದಾರೆ.
ಕಾರು ತಾನಾಗಿಯೇ ಹೊತ್ತಿಕೊಂಡಿತೇ ಅಲ್ಲಾ ಬೆಂಕಿಯಿಟ್ಟಿದ್ದಾರೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೇ ಗೋರಕ್ಷಕರೂ ಇದರಲ್ಲಿ ಭಾಗಿಯಾಗಿರುವ ಸಂದೇಹವಿದ್ದು ಈ ಬಗ್ಗೆಯೂ ತನಿಖೆ ನಡೆಯುತ್ತಿದೆ. ಜುನೈದ್ ಮೇಲೆ 5 ಗೋ ಕಳ್ಳತನದ ಪ್ರಕರಣವಿದ್ದು, ನಾಸಿರ್ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಎಂದು ಸ್ಥಳಿಯ ಪೋಲಿಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಕರಣದ ಸಂಬಂಧ ಭಜರಂಗದಳದ 5 ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಎಲ್ಲರೂ ಗೋ ರಕ್ಷಕರೆಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.