60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪೂರ್ಣಗೊಳಿಸಿ :ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ
Team Udayavani, Aug 21, 2021, 8:04 PM IST
ಉಡುಪಿ : ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವುದರ ಮೂಲಕ ಹಿರಿಯ ವ್ಯಕ್ತಿಗಳು ಕೋವಿಡ್‌ಗೆ ಬಲಿಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್-19 ಜಿಲ್ಲಾ ಪರಿಣಿತರ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಮೊದಲೇ ಡೋಸ್ ಪಡೆದು ಎರಡನೇ ಡೋಸ್ ಬಾಕಿಯಿರುವ ಹಿರಿಯ ನಾಗರಿಕರ ವಿವರಗಳನ್ನು ಪಡೆದು ಅವರಿಗೆ ಅವರ ವಾಸಸ್ಥಳದ ಸಮೀಪವೇ ಲಸಿಕೆಗೆ ವ್ಯವಸ್ಥೆ ಮಾಡಿ, ಖಾಸಗಿಯಾಗಿ ಈಗಾಗಲೇ ಲಸಿಕೆ ಪಡೆದಿರುವ ಹಿರಿಯ ನಾಗರಿಕರ ವಿವರ ಪಡೆದು ಅವರಿಗೂ ಲಸಿಕೆಗೆ ವ್ಯವಸ್ಥೆ ಮಾಡಿ, ಗ್ರಾಮಾಂತರ ಪ್ರದೇಶದಲ್ಲಿ ಸಹ ಅಲ್ಲಿಯೇ ಕ್ಯಾಂಪ್ ಏರ್ಪಡಿಸಿ ಲಸಿಕೆ ನೀಡಲು ವ್ಯವಸ್ಥೆ ಮಾಡಿ ಜಿಲ್ಲೆಯಲ್ಲಿರುವ ಎಲ್ಲ ಹಿರಿಯ ನಾಗರಿಕರಿಗೆ ಎರಡೂ ಡೋಸ್ ಲಸಿಕೆ ನೀಡುವುದರ ಮೂಲಕ ಅವರು ಕೋವಿಡ್‌ಗೆ ಬಲಿಯಾಗುವುದನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಎರಡೂ ಡೋಸ್ ಲಸಿಕೆ ಪಡೆಯಿರಿ
ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟರಿಗೆ ಲಸಿಕೆ ನೀಡಲು 4,13,861 ಗುರಿ ಹೊಂದಿದ್ದು, ಇದುವರೆಗೆ 3,32,255 ಮಂದಿಗೆ ಪ್ರಥಮ ಡೋಸ್ ನೀಡಿ 80ಶೇ.ಸಾಧನೆ ಆಗಿದೆ. 1,69,499 ಮಂದಿಗೆ ಎರಡನೇ ಡೋಸ್ ನೀಡಿ, 41ಶೇ. ಸಾಧನೆ ಮಾಡಿದ್ದು, ಇದರಲ್ಲಿ ಇನ್ನೂ ಹೆಚ್ಚಿನ ಗುರಿ ಸಾಧಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಹಿರಿಯ ನಾಗರಿಕರು 100ಶೇ. ಸಂಪೂರ್ಣ ಎರಡೂ ಲಸಿಕೆ ಪಡೆಯುವಂತೆ ಕಾರ್ಯಕ್ರಮ ರೂಪಿಸಿ ಎಂದರು.
ನಿಗದಿತ ಅವಧಿಯೊಳಗೆ ಲಸಿಕೆ ಪಡೆಯಲು ಸೂಚನೆ
ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪರೀಕ್ಷೆಯನ್ನು ಹೆಚ್ಚುಗೊಳಿಸಲಾಗಿದ್ದು, ಸ್ವಾಬ್ ಸಂಗ್ರಹಿಸಿದ 24 ಗಂಟೆಯೊಳಗೆ ವರದಿ ನೀಡಲು ಕ್ರಮ ಕೈಗೊಳ್ಳಿ, ಲ್ಯಾಬ್‌ನಲ್ಲಿ ಪರೀಕ್ಷಾ ವರದಿ ನೀಡಲು ವಿಳಂಬವಾದಲ್ಲಿ ಪಕ್ಕದ ಜಿಲ್ಲೆಗಳಿಗೆ ಸ್ವಾಬ್ ಕಳುಹಿಸಿ ನಿಗದಿತ ಅವಧಿಯೊಳಗೆ ವರದಿ ಪಡೆಯುವಂತೆ ಹೇಳಿದರು.
ನಿರಂತರ ಸಂಪರ್ಕದಲ್ಲಿರಿ
ಜಿಲ್ಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಅದಷ್ಟು ಶೀಘ್ರದಲ್ಲಿ ಜಿಲ್ಲೆಗೆ ಮಂಜೂರಾಗಿರುವ ಎಲ್ಲ ಪ್ಲಾಂಟ್‌ಗಳ ಕಾಮಗಾರಿಗಳು ಮುಕ್ತಾಯಗೊಂಡು ಕಾರ್ಯನಿರ್ವಹಿಸುವ ಕುರಿತು ಸಂಬಂಧಪಟ್ಟ ಕಂಪೆನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ತಿಳಿಸಿದರು.
ಪರೀಕ್ಷೆ ಕಡ್ಡಾಯ
ಮಕ್ಕಳ ವಾರ್ಡ್‌ಗಳ ನಿರ್ಮಾಣ ಕುರಿತಂತೆ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಮುಕ್ತಾಯಗೊಳಿಸಿ ಸರಕಾರ ಮತ್ತು ವಿವಿಧ ದಾನಿಗಳು ನೀಡಿರುವ ವೈದ್ಯಕೀಯ ಉಪಕರಣಗಳನ್ನು ವಾರ್ಡ್‌ಗಳಲ್ಲಿ ಅಳವಡಿಸಿ, ನಗರ ಪ್ರದೇಶದಲ್ಲಿ ಪಾಸಿಟಿವ್ ಬಂದ ವ್ಯಕ್ತಿಯು ವಾಸಿಸುವ 100 ಮೀ. ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದ 200 ಮೀ. ವ್ಯಾಪ್ತಿಯಲ್ಲಿ ವ್ಯಾಪಕ ಟೆಸ್ಟಿಂಗ್ ನಡೆಸಿ, ಉದ್ಯೋಗಿಗಳು ಪಾಸಿಟಿವ್ ಬಂದಲ್ಲಿ ಅವರೊಂದಿಗೆ ಕಾರ್ಯ ನಿರ್ವಹಿಸುವ ಎಲ್ಲ ಸಹೋದ್ಯೋಗಿಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದು ಸೂಚಿಸಿದರು.
ಇದನ್ನೂ ಓದಿ :ಲಂಬಾಣಿಗರು ಎಸ್‌ಸಿಗೋ, ಎಸ್‌ಟಿಗೋ ?|ಸಂಸದ ಜಾದವ್ ದ್ವಂದ ನಿಲುವು ಬಯಲಿಗೆಳೆದ ಖರ್ಗೆ
ಹೊರರಾಜ್ಯದವರಿಗೆ ಐಸೋಲೇಶನ್
ಜಿಲ್ಲೆಗೆ ಕೇರಳ ಸಮೀಪದಲ್ಲಿದ್ದು, ಅಲ್ಲಿಂದ ವಿವಿಧ ಕಾರಣಗಳಿಗೆ ಸಾರ್ವಜನಿಕರು ಆಗಮಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿಲ್ಲ. ಜಿಲ್ಲೆಗೆ ವಿದ್ಯಾಭ್ಯಾಸಕ್ಕೆ ಆಗಮಿಸುವ ಹೊರರಾಜ್ಯದ ವಿದ್ಯಾರ್ಥಿಗಳನ್ನು 7 ದಿನಗಳ ಐಸೊಲೇಶನ್‌ಗೆ ಒಳಪಡಿಸಿ 7 ನೇ ದಿನ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿ ಎಂದರು.
ಜಿ.ಪಂ.ಉಪ ಕಾರ್ಯದರ್ಶಿ ಕಿರಣ್ ಪೆಡ್ನೆಕರ್, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ನಾಯಕ್, ಡಿಎಚ್‌ಒ ಡಾ| ನಾಗಭೂಷಣ ಉಡುಪ, ಕೋವಿಡ್ ನೋಡೆಲ್ ಅಧಿಕಾರಿ ಡಾ| ಪ್ರಶಾಂತ್ ಭಟ್ ಹಾಗೂ ಎಕ್ಸ್‌ಪರ್ಟ್ ಸಮಿತಿಯ ವಿವಿಧ ವೈದ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.