Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಚಿವೆ ಹೆಬ್ಬಾಳ್ಕರ್ ಆಕ್ರೋಶ
Team Udayavani, Oct 20, 2024, 2:33 AM IST
ಉಡುಪಿ: ಮುಡಾ ಪ್ರಕರಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕಾರ್ಯ ಮಾಡುತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ಸಚಿವ ಭೈರತಿ ಸುರೇಶ್ ಮುಡಾ ಪ್ರಕರಣದ ದಾಖಲೆಗಳನ್ನು ಸುಟ್ಟಿದ್ದಾರೆ ಎಂಬುದನ್ನು ಇವರು ನೋಡಿದ್ದಾರೆಯೇ? ಅಥವಾ ಕೆಮರಾ ಇಟ್ಟಿದ್ದಾರೆಯೇ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇ.ಡಿ. ದಾಳಿಯೇ ರಾಜಕೀಯ ಪ್ರೇರಿತವಾದುದು. ರಾಜಭವನ, ರಾಜ್ಯಪಾಲರು ತುಂಬಾ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರಕಾರ ಹಾಗೂ ಬಿಜೆಪಿಯ ಹುನ್ನಾರವಾಗಿದೆ ಎಂದರು.
ಪಂಚಮಸಾಲಿ 2ಎ ಮೀಸಲಾತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಭೆಯಲ್ಲಿ ನಡೆದ ವಿಷಯವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಬಿಜೆಪಿಗರು ಕೇಂದ್ರ ಸರಕಾರವನ್ನು ಪ್ರಶ್ನಿಸಲಿ
ರಾಜ್ಯ ಸರಕಾರದಿಂದ ಕರಾವಳಿಗೆ ಅನ್ಯಾಯ ಆಗುತ್ತಿದೆ. ಕಾಂಗ್ರೆಸ್‌ನಿಂದ ಬಿಡಿಗಾಸು ಅನುದಾನ ಇಲ್ಲ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರದಿಂದಾಗುವ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ? ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆದರೆ ಜನರನ್ನು ದಾರಿ ತಪ್ಪಿಸಿ, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾತ್ರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಆರೋಪ ಮಾಡುವುದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ ಎಂದರು.
ಬಿಪಿಎಲ್ ಪರಿಶೀಲನೆಗೆ ಐವನ್ ಸಮರ್ಥನೆ
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಮಾತನಾಡಿ, ಬಿಜೆಪಿಯ ಅತಿಯಾದ ಆತ್ಮವಿಶ್ವಾಸಕ್ಕೆ ಉಪಚುನಾವಣೆಯಲ್ಲಿ ಜನರೇ ಉತ್ತರ ನೀಡುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಶ್ರೀಮಂತರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಹೀಗಾಗಿ ಅನರ್ಹರನ್ನು ಪಟ್ಟಿಯಿಂದ ಹೊರಗಿಡಲು ಪರಿಶೀಲಿಸಲಾಗುತ್ತದೆ. ಬಡವರ ಸೌಲಭ್ಯ ಶ್ರೀಮಂತರಿಗೆ ಕೊಡಲು ಬಿಜೆಪಿ ನಾಯಕರು ಒಪ್ಪುವರೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಗೆಲುವು ಖಚಿತ
ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಃಸಿದ್ಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಜರಗಿದ ಸಭೆಯಲ್ಲಿ ಮಾತನಾಡಿದ ಅವರು, ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಮತದಾರರು ಬೆಂಬಲಿಸುವ ವಿಶ್ವಾಸವಿದೆ ಎಂದರು. ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮತ್ತಿತರರು ಇದ್ದರು.
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಡಾ| ಕಸ್ತೂರಿ ರಂಗನ್ ವರದಿ ಬಗ್ಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಸುದೀರ್ಘ ಚರ್ಚೆಯಾಗಿದೆ. ಸದ್ಯ ನೀತಿಸಂಹಿತೆ ಇರುವ ಕಾರಣ ಈಗ ಯಾವುದೇ ಭರವಸೆ ನೀಡುವುದಿಲ್ಲ. ಅರಣ್ಯ ಸಚಿವ ಈಶ್ವರ ಖಂಡ್ರೆ ಜತೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Karkala: ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ
MUST WATCH
ಹೊಸ ಸೇರ್ಪಡೆ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
IFFI: ಪಾಪ್ ಸಂಗೀತಗಾರ ರಾಬಿ ವಿಲಿಯಮ್ಸ್ ಬೆಟರ್ ಮ್ಯಾನ್ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.