Udupi: ದೇಶದ ಆರ್ಥಿಕ ಅಭಿವೃದ್ಧಿ ಎಲ್ಲರ ಆದ್ಯತೆಯಾಗಲಿ: ಸುರೇಶ್‌ ಪ್ರಭು

ಮೈಕ್ರೋಸಾಫ್ಟ್, ಅಮೆಜಾನ್‌, ಇನ್ಫೋಸಿಸ್‌ಗಳ ಅಭಿವೃದ್ಧಿ ಸಾಧನೆಗಳು ಅಪಾರ: ಸಂವಾದದಲ್ಲಿ ರಾಷ್ಟ್ರೀಯ ಹೊಸ ಸಹಕಾರಿ ನೀತಿ ಅಧ್ಯಕ್ಷ

Team Udayavani, Aug 11, 2024, 6:45 AM IST

Suresh-Prabhu

ಉಡುಪಿ: ಆರ್ಥಿಕ ಅಭಿವೃದ್ಧಿ ಎಲ್ಲರ ಆದ್ಯತೆಯಾಗಬೇಕು. ದೇಶ ಆರ್ಥಿಕತೆಯಲ್ಲಿ ಬಹಳಷ್ಟು ಅಭಿವೃದ್ಧಿ ಸಾಧಿಸುತ್ತಿದೆ. ವಿವಿಧ ತಂತ್ರಜ್ಞಾನಗಳ ಮೂಲಕ ಆರ್ಥಿಕ ಕ್ಷೇತ್ರ ಅಭಿವೃದ್ಧಿಯಾಗುತ್ತಿದೆ. ಸಹಕಾರ ಕ್ಷೇತ್ರಗಳಲ್ಲೂ ಯುಪಿಐ ಮೂಲಕ ಹಲವಾರು ರೀತಿಯ ವ್ಯವಹಾರಗಳು ನಡೆದು ಜನರಿಗೆ ಮತ್ತಷ್ಟು ಅನುಕೂಲವಾಗುತ್ತಿದೆ. 2047ರಲ್ಲಿ ರಾಷ್ಟ್ರ ಮತ್ತಷ್ಟು ಅಭಿವೃದ್ಧಿ ಸಾಧಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ. ಕೃತಕ ಬುದ್ಧಿಮತ್ತೆಯಿಂದ ಮುಂಬರುವ ದಿನಗಳಲ್ಲಿ ಮತ್ತಷ್ಟು ಕ್ರಾಂತಿ ಉಂಟಾಗಲಿದೆ. ಸುಸ್ಥಿರ ಅಭಿವೃದ್ಧಿಗೆ ಇದರ ಕೊಡುಗೆಯೂ ಅಪಾರ ಎಂದು ಕೇಂದ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯ ಹೊಸ ಸಹಕಾರಿ ನೀತಿಯ ಅಧ್ಯಕ್ಷ ಸುರೇಶ್‌ ಪ್ರಭು ಹೇಳಿದರು.

ಖಾಸಗಿ ಹೊಟೇಲ್‌ನಲ್ಲಿ ಶನಿವಾರ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಜರಗಿದ ಸಂವಾದದಲ್ಲಿ ಮಾತನಾಡಿದ ಅವರು, ಆದಾಯ ತೆರಿಗೆ ನೇರ ತೆರಿಗೆಯಾಗಿದೆ. ಆದಾಯ ತೆರಿಗೆ ಮೂಲಕ ಎಲ್ಲ ಸರಕಾರಿ ಅಧಿಕಾರಿಗಳು ಸಹಿತ ಮೂಲ ಸೌಕರ್ಯಗಳು ನಡೆಯುತ್ತಿವೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ತಂತ್ರಜ್ಞಾನ ಬಹಳಷ್ಟು ಪ್ರಾಮುಖ್ಯ ಪಡೆದುಕೊಂಡಿದೆ. ಸಹಕಾರ
ಸಂಸ್ಥೆಗಳು ಗ್ರಾಮಾಂತರ ಭಾಗದಲ್ಲಿ ಮತ್ತಷ್ಟು ಸೇವೆ ನೀಡಲು ಯುಪಿಐಗಳ ಪಾತ್ರ ಮಹತ್ತರವಾಗಿದೆ ಎಂದರು.

ಯುವಜನತೆ ಸ್ಟಾರ್ಟಪ್‌ ಮಾಡಲು ಬಹಳಷ್ಟು ಅವಕಾಶವಿದೆ. ಗುಜರಾತ್‌ನ ಎಲ್ಲ ಜಿಲ್ಲೆಗಳಲ್ಲಿ ಬಹಳಷ್ಟು ಮಂದಿ ಸ್ಟಾರ್ಟಪ್‌ಗ್ಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವು ವಿವಿ, ಶಾಲೆಗಳಲ್ಲಿ ಇನ್‌ಕ್ಯುಬೇಷನ್‌ ಸೆಂಟರ್‌ಗಳು ಆರಂಭಗೊಂಡಿವೆ. ಮೀನುಗಾರರ ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.

ಉಡುಪಿ ಸಹಿತ ಕರಾವಳಿ ಜಿಲ್ಲೆಯ ಹಲವಾರು ರಾಷ್ಟ್ರೀಕೃತ ಬ್ಯಾಂಕ್‌ಗಳಿವೆ. ಭವಿಷ್ಯದಲ್ಲಿ ಕೈಗಾರಿಕೆಗಿಂತಲೂ ಪ್ರವಾಸೋದ್ಯಮ ಸಹಿತ ಇತರ ಕ್ಷೇತ್ರಗಳಲ್ಲಿ ಉದ್ಯೋಗಾ ವಕಾಶ ಹೆಚ್ಚಳವಾಗಲಿದೆ. ಆರ್ಥಿಕತೆ ಬೇರೆ ಬೇರೆ ರೀತಿಯಲ್ಲಿ ವಿಭಿನ್ನವಾಗಿ ನಡೆಯುತ್ತಿದೆ. ಮೈಕ್ರೋಸಾಫ್ಟ್, ಅಮೆಜಾನ್‌, ಇನ್ಫೋಸಿಸ್‌ಗಳ ಅಭಿವೃದ್ಧಿ ಸಾಧನೆಗಳು ಅಪಾರವಾಗಿದೆ. ಕೈಗಾರಿಕೆಗಳ ಉದ್ದೇಶ ತಿಳಿಯಬೇಕು. ಸರ್ವಿಸ್‌ ಕ್ಷೇತ್ರ ಹಾಗೂ ಕೈಗಾರಿಕೆ ಕ್ಷೇತ್ರದಲ್ಲಿ ಎಲ್ಲಿ ಉದ್ಯೋಗಾವಕಾಶ ಅಧಿಕವಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಮಹಾಲಕ್ಷ್ಮೀ ಕೋ-ಆಪ್‌ ಬ್ಯಾಂಕ್‌ ಅಧ್ಯಕ್ಷ, ಶಾಸಕ ಯಶ್‌ಪಾಲ್‌ ಎ.ಸುವರ್ಣ, ಬ್ಯಾಂಕಿಂಗ್‌ ಕ್ಷೇತ್ರದ ಗಣ್ಯರು, ನ್ಯಾಯವಾದಿಗಳು, ಕೈಗಾರಿ ಕೋದ್ಯಮಿಗಳು, ಸಹಕಾರ ಕ್ಷೇತ್ರದ ಮುಖಂಡರು ಉಪಸ್ಥಿತರಿದ್ದರು.

ಸಹಕಾರಿ ನೀತಿ ವರದಿ ಸಲ್ಲಿಕೆ
ರಾಷ್ಟ್ರೀಯ ಹೊಸ ಸಹಕಾರಿ ನೀತಿಯ ವರದಿಯನ್ನು ಈಗಾಗಲೇ ಕೇಂದ್ರ ಸರಕಾರಕ್ಕೆ ಒಪ್ಪಿಸಿದ್ದೇವೆ. ಕೇಂದ್ರ ಸರಕಾರ ಯಾವಾಗ ಬೇಕಾದರೂ ಇದರ ಘೋಷಣೆ ಮಾಡಬಹುದು. ಹೊಸ ನೀತಿಯಲ್ಲಿ ಡಿಜಿಟಲೀಕರಣ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡಿದ್ದೇವೆ. ಯಾವುದೇ ಸಹಕಾರಿ ಸಂಸ್ಥೆಯು ಜಗತ್ತಿನ ತಂತ್ರಜ್ಞಾನದ ಸೌಲಭ್ಯವನ್ನು ಸುಲಭವಾಗಿ ಪಡೆಯುವಂತೆ ಆಗಬೇಕು.

ಕರ್ನಾಟಕದ ಮಾದರಿಯಲ್ಲಿ ಸಹಕಾರಿ ಕ್ಷೇತ್ರವು ಸ್ವಾಯತ್ತವಾಗಿ ಬೆಳೆಯಬೇಕು. ಮಾತ್ರವಲ್ಲದೇ ತೀರಾ ಅಗತ್ಯ ಎದುರಾದಾಗ ಮಾತ್ರ ಸರಕಾರ ಮಧ್ಯಪ್ರವೇಶ ಮಾಡಬೇಕು. ಸಹಕಾರಿ ವಲಯದ ಲಾಭ ಕೆಲವೇ ಕೆಲವರಿಗೆ ಆಗಬಾರದು. ಅದು ಸಮಾಜಕ್ಕೆ ಆಗಬೇಕು ಎಂಬ ನೆಲೆಯಲ್ಲಿ ಕೆಲವು ಶಿಫಾರಸು ಮಾಡಿದ್ದೇವೆ ಎಂದು ಸುರೇಶ್‌ ಪ್ರಭು ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

4(1)

Lupus Nephritis: ಲೂಪಸ್‌ ನೆಫ್ರೈಟಿಸ್‌ ರೋಗಿಗಳಿಗೆ ಒಂದು ಮಾರ್ಗದರ್ಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.