ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ
Team Udayavani, Jan 28, 2022, 1:27 PM IST
ಉಡುಪಿ: ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹುಡುಗಿಯರನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ನಗರದ ಹೃದಯ ಭಾಗದಲ್ಲಿ ಇರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಮಾಹಿತಿ ಮೇರೆಗೆ ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು ಅವರ ತಂಡ ದಾಳಿ ನಡೆಸಿ, ಇಬ್ಬರು ಹುಡುಗಿಯರು ಮತ್ತು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿ ಪೊಲೀಸರಿಂದ ಬಂಧಿತರಾದ ಆರೋಪಿಗಳು ಗುರುರಾಜ್, ವಿಜಯ ಶೆಟ್ಟಿ, ಹೇಮಂತ್, ಸಂದೀಪ್ ಮೊಗವೀರ ಎಂದು ತಿಳಿದು ಬಂದಿದೆ. ಲಾಡ್ಜ್ ಮಾಲಕ ರಮೇಶ್ ಶೆಟ್ಟಿ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿ ಅವರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರಿಗೆ ಕೆಲವು ಸಮಯದಿಂದ ಇಲ್ಲಿಅನೈತಿಕ ದಂಧೆ ನಡೆಯುತ್ತಿದೆ ಎಂದು ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಮಹಿಳಾ ಠಾಣೆ ಇನ್ಸ್ಪೆಕ್ಟರ್ ಜಯಂತ್ ಮತ್ತು ಅವರ ತಂಡ ಐದು ಮಂದಿ ಮೇಲೆ ಕೇಸು ದಾಖಲಿಸಿಕೊಂಡು ನಾಲ್ಕು ಮಂದಿ ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.