Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ: ಮಂಜುನಾಥ್ ಪಿ. ಶೆಟ್ಟಿ
Team Udayavani, Oct 6, 2024, 6:04 PM IST
ಉಡುಪಿ: ಗ್ರಾಮ ಪಂಚಾಯಿತಿಗಳಲ್ಲಿ (ಗ್ರಾ.ಪಂ.) ಕೆಲಸ ನಿರ್ವಹಿಸುತ್ತಿರುವ ಪಿಡಿಒ, ಕಾರ್ಯದರ್ಶಿ, ಎಸ್‌ಡಿಎ ಮತ್ತು ಪಂಚ ನೌಕರರ ಬೇಡಿಕೆ ಈಡೇರಿಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡ ಮುಷ್ಕರಕ್ಕೆ ಸರಕಾರ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸದಿರುವುದರಿಂದ ಪ್ರತಿಭಟನೆಯು ಜಿಲ್ಲಾ ಮಟ್ಟದಲ್ಲಿ ಮುಂದುವರಿಸಲಾಗುವುದು ಎಂದು ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ್ ಪಿ. ಶೆಟ್ಟಿ ತಿಳಿಸಿದ್ದಾರೆ.
ಅ.4ರಿಂದ 11 ವೃಂದ ಸಂಘಟನೆಗಳು ಉಡುಪಿ ಜಿಲ್ಲೆ ಸಹಿತ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ಸೇವೆಗಳ ನಿಲ್ಲಿಸಿ ಮುಷ್ಕರ ಹಮ್ಮಿಕೊಂಡಿದ್ದೇವೆ. ಅ.7ರಿಂದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಆವರಣ ರಜತಾದ್ರಿಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಸುತ್ತೇವೆ. ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಸೇವೆ ಲಭ್ಯ ಇರುವುದಿಲ್ಲ. ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒ, ಕಾರ್ಯದರ್ಶಿ, ಎಸ್‌ಡಿಎ ಸಹಿತ ಪಂಚ ನೌಕರರು ಮುಷ್ಕರದಲ್ಲಿ ಭಾಗವಹಿಸುತ್ತಿದ್ದಾರೆ. ಸರಕಾರ ಮನವಿಗೆ ಸ್ಪಂದಿಸದಿದ್ದಲ್ಲಿ ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಮಂಜುನಾಥ್ ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಗ್ರಾಮ ಪಂಚಾಯಿತಿ ನೌಕರರ ಮುಷ್ಕರದಿಂದ ಪಂಚಾಯಿತಿ ಸೇವೆ ವ್ಯತ್ಯಯವಾಗಿದ್ದು, ಹಲವು ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿ ಸಾರ್ವಜನಿಕರ ಅಗತ್ಯ, ಕೆಲಸ ಕಾರ್ಯಗಳಿಗೂ ಸಂಕಷ್ಟ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.