Udupi: ರಾಷ್ಟ್ರೀಕೃತ ಬ್ಯಾಂಕ್‌ಗಳು ಬಡವರ ಸ್ನೇಹಿಯಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ಬ್ಯಾಂಕ್‌ಗಳು ನಿಯಮಗಳ ಬೆನ್ನು ಹತ್ತಿ ಜನರಿಗೆ ಸುಲಭದಲ್ಲಿ ಸಾಲ ಸಿಗುವುದೇ ಕಷ್ಟ, ಪಿಎಂ ವಿಶ್ವಕರ್ಮ ಯೋಜನೆ ಪ್ರಗತಿ ಪರಿಶೀಲನೆ ಸಭೆ
Team Udayavani, Oct 29, 2024, 1:26 AM IST
ಮಣಿಪಾಲ: ರಾಷ್ಟ್ರೀಕೃತ ಬ್ಯಾಂಕ್‌ಗಳು ಬಡ ಜನರ ನೆಚ್ಚಿನ ಬ್ಯಾಂಕ್ ಆಗಿದ್ದವು. ಪ್ರಸ್ತುತ ಆ ಸ್ಥಾನವನ್ನು ಸಹಕಾರಿ ಸಂಘಗಳು ವಹಿಸಿಕೊಂಡಿವೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಪುನರಪಿ ಬಡವರ ಬ್ಯಾಂಕ್ ಆಗಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜರಗಿದ ಪಿಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ಗಳು ನಿಯಮಗಳ ಬೆನ್ನು ಹತ್ತಿ ಜನರಿಗೆ ಸುಲಭದಲ್ಲಿ ಸಾಲ ಸಿಗುವುದೇ ಕಷ್ಟ ಎನ್ನುವ ಪರಿಸ್ಥಿತಿ ಉಂಟಾಗಿದೆ. ಪಿಎಂ ವಿಶ್ವಕರ್ಮ ಯೋಜನೆ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ಮತ್ತೆ ಬಡ ಜನರ ಸ್ನೇಹಿ ಬ್ಯಾಂಕನ್ನಾಗಿ ಮಾಡುವ ಉದ್ದೇಶ ಹೊಂದಿದೆ ಎಂದರು. ಜಿಲ್ಲೆಯಲ್ಲಿ ಎಷ್ಟು ಜನ ವಿಶ್ವಕರ್ಮ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ, ಎಷ್ಟು ಮಂದಿಗೆ ಸಾಲ ನೀಡಲಾಗಿದೆ ಮತ್ತು ಎಷ್ಟು ಜನರಿಗೆ ಸಾಲ ನೀಡಲು ಬಾಕಿ ಇದೆ, ಯಾವ ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಮಂದಿಗೆ ಸಾಲ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳಿಂದ ಸಂಸದರು ಪಡೆದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಮಾತನಾಡಿ, 3,303 ಅರ್ಜಿ ಸಲ್ಲಿಕೆಯಾಗಿದ್ದು, ಆ ಪೈಕಿ 2,470 ವಿಲೇವಾರಿಗೆ ಬಾಕಿ ಇದೆ. 13 ಸಂಸ್ಥೆಗಳಲ್ಲಿ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಯೋಜನೆಯ ಫಲಾನುಭವಿಗಳಿಗೆ ನ.8ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕಾರ್ಯಕ್ರಮ ಸಂಘಟಿಸಿ, ಸಾಲಪತ್ರ ವಿತರಿಸುವುದಕ್ಕೆ ನಿರ್ಧರಿಸಲಾಯಿತು.
ಈ ಸಂದರ್ಭ ಮುದ್ರಾ ಮತ್ತು ಸ್ವನಿಧಿ ಯೋಜನೆಯ ಫಲಾನುಭವಿಗಳಿಗೂ ಸಾಲಪತ್ರ ನೀಡಲು ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಕೈಗಾರಿಕೆ ಸಂಸ್ಥೆಯ ನಾಗರಾಜ್ ನಾಯಕ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.