Udupi: ನೇಜಾರು ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಚೌಗುಲೆ ಹಾಜರು
Team Udayavani, Nov 21, 2024, 2:10 AM IST
ಉಡುಪಿ: ವರ್ಷದ ಹಿಂದೆ ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ವಾಪಸು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ಸಾಕ್ಷಿಗಳ ವಿಚಾರಣೆ ನ. 21ಕ್ಕೆ ಮುಂದೂಡಲಾಗಿದೆ.
ಅ. 24ರಂದು ನ್ಯಾಯಾಲಯದ ಆದೇಶದಂತೆ ನ. 20ರಂದು 1 ಹಾಗೂ 2 ಮತ್ತು ನ. 21ರಂದು 3 ಹಾಗೂ 4 ನೇ ಸಾಕ್ಷಿಗಳು ವಿಚಾರಣೆಗೆ ಹಾಜರಾಗುವಂತೆ ದಿನಾಂಕ ನಿಗದಿಪಡಿಸಲಾಗಿತ್ತು. ಅದರಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಬುಧವಾರ ಉಡುಪಿ ನ್ಯಾಯಾಲಯಕ್ಕೆ ಕರೆದುಕೊಂಡು ಬರಲಾಗಿತ್ತು.
ತನಿಖಾಧಿಕಾರಿ ಮಲ್ಪೆ ಸಿಪಿಐ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಆರೋಪಿಯನ್ನು ಹಾಜರುಪಡಿಸಲಾಯಿತು. ಈ ಸಂದರ್ಭ ಆರೋಪಿ ಪರ ವಕೀಲರು, ವಕಾಲತ್ತನ್ನು ವಾಪಸು ಪಡೆದುಕೊಳ್ಳುತ್ತೇವೆ ಎಂದು ಕೋರ್ಟಿಗೆ ತಿಳಿಸಿದರು. ಅದಕ್ಕೆ ಆರೋಪಿ ಚೌಗುಲೆ, ನನ್ನ ಪತ್ನಿ ಹೊಸ ವಕೀಲರನ್ನು ನೇಮಕ ಮಾಡಲಿದ್ದಾರೆ ಎಂದರು. ಕೂಡಲೇ ವಕೀಲರನ್ನು ನೇಮಕ ಮಾಡುವಂತೆ ನ್ಯಾಯಾಧೀಶ ಎ. ಸಮೀವುಲ್ಲಾ ಅವರು ಆರೋಪಿಗೆ ಸೂಚಿಸಿದರು. ಕೊನೆ ಕ್ಷಣದಲ್ಲಿ ಆರೋಪಿ ಚೌಗುಲೆ ಪರ ವಕೀಲರು ವಕಾಲತ್ತು ವಾಪಸು ಪಡೆದಿರುವುದಕ್ಕೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಆಕ್ಷೇಪ ಸಲ್ಲಿಸಿದರು.
ಬುಧವಾರ ನಡೆಯಬೇಕಾಗಿದ್ದ ಸಾಕ್ಷಿಗಳ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಹಿರಿಯಡಕ ಜೈಲಿಗೆ ಕರೆದೊಯ್ಯಲಾಗಿದೆ. ಇದೇ ವೇಳೆ ಆತ ಪರಪ್ಪನ ಆಗ್ರಹಾರದಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡ ಘಟನೆಯೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಕುದ್ರು ನೆಸ್ಟ್ ರೆಸಾರ್ಟ್ನಲ್ಲಿ ಬೆಂಕಿ ಅವಘಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.