Udupi: ಮನೆಬಿಟ್ಟು ಮಲ್ಪೆಗೆ ಬಂದಿದ್ದ ಹಾವೇರಿಯ ಇಬ್ಬರು ಬಾಲಕಿಯರ ರಕ್ಷಣೆ
Team Udayavani, Oct 20, 2024, 12:00 AM IST
ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ಇಬ್ಬರು ಬಾಲಕಿಯರನ್ನು ಶುಕ್ರವಾರ ರಕ್ಷಿಸಲಾಗಿದೆ. ಮನೆ ಬಿಟ್ಟು ಬಂದಿದ್ದ ಹಾವೇರಿ ಮೂಲದ ರೋಸ (13) ಹಾಗೂ ದುರ್ಗಮ್ಮ (16) ರಕ್ಷಿಸಲ್ಪಟ್ಟವರು.
ಬಾಲಕಿಯರ ಚಲನವಲನವನ್ನು ಕಂಡು ಸಂಶಯಗೊಂಡು ಬೀಚ್ ಗಸ್ತು ಸಿಬಂದಿ ಸುರೇಶ್ ಅಂಚನ್ ಮತ್ತು ಸುಬ್ರಹ್ಮಣ್ಯ ವಿಚಾರಿಸಿದಾಗ ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತತ್‌ಕ್ಷಣ ಅವರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದ್ದಾರೆ.
ನಿತ್ಯಾನಂದ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿ, ನಗರ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಪ್ರೇಮನ್ ಗೌಡ ಪಾಟೀಲ್ ಮಾರ್ಗದರ್ಶನದಲ್ಲಿ ಪೇದೆ ಮಹದೇವ್ ಜತೆಗೆ ಬೀಚ್‌ಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ಕಲ್ಯಾಣ ಸಮಿತಿಯ ಆದೇಶದಂತೆ ಬಾಲಕಿಯರನ್ನು ನಿಟ್ಟೂರಿನ ಬಾಲಭವನದಲ್ಲಿ ಇರಿಸಲಾಗಿದೆ. ಬಾಲಕಿಯರಿಗೆ ಹೆತ್ತವರಿಲ್ಲ. ಆದ ಕಾರಣ ಪೋಷಕರನ್ನು ಕರೆಸಲಾಗಿದ್ದು, ಅವರು ಜತೆಯಲ್ಲಿ ಕರೆದೊಯ್ಯಲು ಒಪ್ಪದ ಕಾರಣ ಉಡುಪಿಯಲ್ಲೇ ಇವರಿಗೆ ಶಿಕ್ಷಣ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ
Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.