Udupi: ಹಿರಿಯ BJP ಮುಖಂಡ ಮಲ್ಪೆ ಸೋಮಶೇಖರ ಭಟ್ ನಿಧನ
Team Udayavani, Feb 4, 2024, 9:45 PM IST
ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಪಿತಾಮಹ ಎಂದು ಕರೆಯಲ್ಪಡುವ, ಉಡುಪಿ ಪುರಸಭೆ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ ಭಟ್ ಅವರು ರವಿವಾರ ನಿಧನ ಹೊಂದಿದ್ದಾರೆ.
ಜನ ಸಂಘದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿದ್ದರು.
ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿರುವ ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಸಿದ್ಧರಾಗಿದ್ದರು. ಡಾ| ವಿ.ಎಸ್ ಆಚಾರ್ಯರ ರಾಜಕೀಯ ಗುರುಗಳಾಗಿದ್ದ ಇವರು ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕಡಿಯಾಳಿ ಇದರ ಸ್ಥಾಪಕ ಸದಸ್ಯರಾಗಿದ್ದರು.
ಕುಂಜಿಬೆಟ್ಟು ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ(ರಿ)ದ ನಿರ್ದೇಶಕರಾಗಿ ಮಲ್ಪೆ ಸೋಮಶೇಖರ ಭಟ್ ಸೇವೆ ಸಲ್ಲಿಸುತ್ತಿದ್ದರು. ಉಡುಪಿ ಜಿಲ್ಲೆಯ ಹಿರಿಯ ಕೈಗಾರಿಕೋದ್ಯಮಿಯಾಗಿದ್ದ ಇವರು ಕೊಡುಗೈದಾನಿಯಾಗಿದ್ದು, ಇವರ ನಿಧನಕ್ಕೆ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ, ಮತ್ತು ದಿವಂಗತ ಡಾ. ವಿ ಎಸ್ ಆಚಾರ್ಯರ ಪುತ್ರ, ಡಾ. ರವಿರಾಜ್ ಆಚಾರ್ಯ,ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜಕೀಯವಾಗಿ ನಾನು ಇಂದು ಯಾವುದೇ ಹುದ್ದೆ, ಯಾವುದೇ ಸ್ಥಾನ ಮಾನ ಪಡೆಯವಲ್ಲಿ ನನಗೆ ಮಾರ್ಗದರ್ಶನ ನೀಡಿ ನನ್ನನ್ನು ಬೆಳೆಸಿದ ನನ್ನ ರಾಜಕೀಯ ಗುರುಗಳು. ಡಾ. ವಿ.ಎಸ್. ಆಚಾರ್ಯ ಅವರೊಂದಿಗೆ ಉಡುಪಿಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ಚೇತನ ಡಾ. ಸೋಮಶೇಖರ್ ಭಟ್ ಅವರ ಅಗಲಿಕೆಯ ಸುದ್ದಿಯಿಂದ ತುಂಬಾ ದುಃಖಿತನಾಗಿದ್ದೇನೆ. pic.twitter.com/g0nsZcnRab
— K Raghupathi Bhat (@RaghupathiBhat) February 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.