Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್ ಸಿ. ಡಿ’ಸೋಜಾ ಇನ್ನಿಲ್ಲ
Team Udayavani, Nov 13, 2024, 2:26 AM IST
ಉಡುಪಿ: ಉಡುಪಿ ಕ್ರೈಸ್ತ ಧರ್ಮಪ್ರಾಂತದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ|ಡಾ| ಲಾರೆನ್ಸ್ ಸಿ. ಡಿ’ಸೋಜಾ (75) ಅವರು ನ. 12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
1948ರ ನ. 28ರಂದು ಶಿರ್ವ ಸಮೀಪದ ಪೆರ್ನಾಲ್‌ನಲ್ಲಿ ಜನಿಸಿದ ಅವರು 1977ರಲ್ಲಿ ಧರ್ಮಗುರುವಾಗಿ ಯಾಜಕ ದೀಕ್ಷೆ ಪಡೆದರು. 1977-79ರ ವರೆಗೆ ಕುಲಶೇಖರ ಚರ್ಚಿನ ಸಹಾಯಕ ಧರ್ಮಗುರುಗಳಾಗಿ, 1979-84ರ ತನಕ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಹಾಯಕ ನಿರ್ದೇಶಕರಾಗಿ, 1984-92ರ ವರೆಗೆ ಮಂಗಳೂರು ಧರ್ಮಪ್ರಾಂತ ಕೆಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿಯಾಗಿ, 1998-2006ರ ವರೆಗೆ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ, 2006-2008ರ ವರೆಗೆ ಕುಲಶೇಖರ ಚರ್ಚ್‌ನ ಪ್ರಧಾನ ಧರ್ಮಗುರುಗಳಾಗಿ, 2008-2014ರ ವರೆಗೆ ಬೆಂಗಳೂರಿನ ಸೈಂಟ್ ಜಾನ್ಸ್ ಆಸ್ಪತ್ರೆಯ ನಿರ್ದೇಶಕರಾಗಿ, 2015-18ರ ವರೆಗೆ ಉಡುಪಿ ಕೆಥೋಲಿಕ್ ಶಿಕ್ಷಣ ಸೊಸೈಟಿ ಕಾರ್ಯದರ್ಶಿಯಾಗಿ, 2018-2020ರ ವರೆಗೆ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ.
ನಾಲ್ಕು ದಶಕಗಳ ಸುದೀರ್ಘ ಧಾರ್ಮಿಕ ಸೇವೆಯ ಬಳಿಕ 2020ರಲ್ಲಿ ಅನಾರೋಗ್ಯದ ಸಮಸ್ಯೆಯಿಂದಾಗಿ ನಿವೃತ್ತಿ ಹೊಂದಿ ಕಲ್ಯಾಣಪುರದಲ್ಲಿ ನಿವೃತ್ತ ಯಾಜಕರ ನಿವಾಸ ಮಿಲಾಗ್ರಿಸ್ ಹೋಮ್‌ನಲ್ಲಿ ವಾಸ್ತವ್ಯ ಹೊಂದಿದ್ದರು. ಮೃತರ ನಿಧನಕ್ಕೆ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೆ|ಡಾ| ಜೆರಾಲ್ಡ್ ಐಸಾಕ್ ಲೋಬೊ, ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ರೆ|ಡಾ| ರೋಶನ್ ಡಿ’ಸೋಜಾ ಹಾಗೂ ಧರ್ಮಪ್ರಾಂತದ ಧರ್ಮಗುರುಗಳು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು… ಸುನಿಲ್ ಆರೋಪ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.