Ullala: ಹಲ್ಲೆ ಆರೋಪಿ ಮೇಲೆ ಎಂಟು ಮಂದಿಯಿಂದ ದಾಳಿ; ಹತ್ಯೆಗೆ ಯತ್ನ
Team Udayavani, Nov 12, 2024, 7:16 AM IST
ಉಳ್ಳಾಲ: ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಇನ್ಸ್ಪೆಕ್ಟರ್ ಕಚೇರಿಯಲ್ಲಿ ಮಾತುಕತೆ ನಡೆಸುತ್ತಿದ್ದ ಸಂದರ್ಭ ಠಾಣಾಧಿಕಾರಿಯ ಎದುರೇ ಹಿಂದೂ ಮುಖಂಡನಿಗೆ ಹಲ್ಲೆ ನಡೆಸಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿ ಆಸೀಫ್ ಕಾರಿಗೆ ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದ ಎಂಟು ಮಂದಿ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಕೆ.ಸಿ.ರೋಡ್ ಬಳಿಯ ಜಿಯೋ ಪೆಟ್ರೋಲ್ ಬಂಕ್ ಬಳಿ ನಡೆದಿದ್ದು, ಘಟನೆ ನಡೆದು ಮೂರು ದಿನಗಳ ಬಳಿಕ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಲ್ಲರ ಕೈಯಲ್ಲೂ ಮೊಟ್ಟೆ ಹಾಗೂ ತಲವಾರುಗಳಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಒಂದು ಬೈಕಿನಲ್ಲಿದ್ದವರು ಕಾರಿಗೆ ತಲವಾರು ಬೀಸಿದ್ದಾರೆ. ಗಾಜಿಗೆ ಹಾನಿಯಾಗಿದೆ. ಬೈಕುಗಳಲ್ಲಿದ್ದವರು ಹಿಂಬಾಲಿಸಲು ಆರಂಭಿಸಿದಾಗ ರಕ್ಷಣೆಗಾಗಿ ಕಾರಿನಲ್ಲೇ ಮಂಜೇಶ್ವರ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಕೋರಿದ್ದೆ. ಪೊಲೀಸರು ಘಟನೆ ನಡೆದ ಠಾಣಾ ವ್ಯಾಪ್ತಿಯಲ್ಲಿ ದೂರು ನೀಡಲು ತಿಳಿಸಿದ್ದರಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೂವರ ಬಂಧನ
ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ಮೂವರನ್ನು ಬಂಧಿ ಸಿದ್ದಾರೆ. ಸುರತ್ಕಲ್ ಇಡ್ಯಾ ನಿವಾಸಿ ಅಣ್ಣಪ್ಪ ಸ್ವಾಮಿ (24), ನಾರ್ಲ ತಲಪಾಡಿಯ ಸಚಿನ್ (24) ಕಂಬ್ಳಪದವು ಪಾದಲ್ ಕೋಡಿಯ ಕುಶಿತ್ (18) ಬಂಧಿತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.