ತಣಿಯದ ಸಂಪುಟ ಅಸಮಾಧಾನ
Team Udayavani, Aug 22, 2019, 5:15 AM IST
ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ವಂಚಿತರು ಅಸಮಾಧಾನ ಹೊರಹಾಕುವುದನ್ನು ಬುಧವಾರವೂ ಮುಂದುವರಿಸಿದ್ದಾರೆ. ಸಚಿವ ಸ್ಥಾನ ಸಿಗದವರಿಗಿಂತ ಮಾಜಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಿರುವುದರ ವಿರುದ್ಧ ಆಕ್ರೋಶದ ದನಿಯೇ ದೊಡ್ಡದಾಗಿ ಕೇಳುತ್ತಿದೆ.
ಈ ನಡುವೆ, ಅಸಮಾಧಾನಿತ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರೊಂದಿಗೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಶಾಸಕರ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಹಿರಿಯ ಶಾಸಕರಾದ ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಎಂ.ಪಿ.ರೇಣುಕಾಚಾರ್ಯ ಇತರರು ಅಸಮಾಧಾನದ ಮಾತುಗಳನ್ನಾಡುತ್ತಿರುವುದು ಪಕ್ಷದ ನಾಯಕರಲ್ಲಿ ಆತಂಕ ಸೃಷ್ಟಿಸಿದಂತಿದೆ. ಹಾಗಾಗಿ ಅತೃಪ್ತರನ್ನು ಸಮಾಧಾನಪಡಿಸುವ ಪ್ರಯತ್ನವನ್ನು ತೆರೆಮರೆಯಲ್ಲೇ ನಡೆಸುತ್ತಿದ್ದಾರೆ.
ಸಂಪುಟದಲ್ಲಿ ತಮ್ಮ ಕುಟುಂಬದವರಿಗೆ ಅವಕಾಶ ನೀಡಬೇಕು ಎಂಬುದು ಬಾಲಚಂದ್ರ ಜಾರಕಿಹೊಳಿ ಅವರ ಒತ್ತಾಯವಾಗಿದ್ದರೆ, ಮಾಜಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಸಚಿವರನ್ನಾಗಿ ಮಾಡಿರುವುದು ಅವರ ಅತೃಪ್ತಿಯ ಮೂಲವಾಗಿದೆ. ಬೆಳಗಾವಿಯಲ್ಲಿ ಜಾರಕಿ ಹೊಳಿ ಕುಟುಂಬ ಹಾಗೂ ಉಮೇಶ್ ಕತ್ತಿ ಅವರ ಪ್ರಭಾವ ತಗ್ಗಿಸಿ ನಿಯಂತ್ರಿಸುವ ಉದ್ದೇಶದಿಂದ ಪರಾಜಿತ ಅಭ್ಯರ್ಥಿಯನ್ನು ಸಚಿವರನ್ನಾಗಿ ಮಾಡಲಾಗಿದೆ ಎಂಬುದು ಬಾಲಚಂದ್ರ ಜಾರಕಿಹೊಳಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಇನ್ನೊಂದೆಡೆ ಸಚಿವ ಸ್ಥಾನದ ಆಕಾಂಕ್ಷಿಗಳು ಎನ್ನ ಲಾಗಿದ್ದ ಸಿ.ಎಂ. ಉದಾಸಿ, ರಾಜುಗೌಡ, ಜಿ.ಸೋಮ ಶೇಖರರೆಡ್ಡಿ ಇತರರು ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಈ ಸಂದರ್ಭದಲ್ಲೇ ತಮಗೆ ಸಚಿವ ಸ್ಥಾನ ತಪ್ಪಿರುವ ಬಗ್ಗೆಯೂ ಆಕಾಂಕ್ಷಿಗಳು ಅಳಲು ತೋಡಿಕೊಂಡರು.
ನೋ ಬಾಲ್ ಗೆ ಔಟ್: ಭೇಟಿ ಬಳಿಕ ಪ್ರತಿಕ್ರಿಯಿ ಸಿದ ಸುರಪುರ ಬಿಜೆಪಿ ಶಾಸಕ ರಾಜುಗೌಡ, ನನಗೆ ಸಚಿವ ಸ್ಥಾನ ತಪ್ಪಿಸಿದವರಿಗೆ ಒಳ್ಳೆಯದಾಗಲಿ. ನನಗೆ ಬೇಸರವೇ ನೆಂದರೆ ನೋ ಬಾಲ್ಗೆ ರನ್ ಔಟ್ ಆಗಿದ್ದೇನೆ. ನಾನೊಬ್ಬ ನ್ಪೋರ್ಟ್ಸ್ ಮ್ಯಾನ್. ಆಟದಲ್ಲಿ ಸೋಲು-ಗೆಲುವು ನೋಡಿದ್ದೇನೆ. ನಾನಿನ್ನೂ ಚಿಕ್ಕವನು. ಮುಂದೆ ಆಟದಲ್ಲಿ ಮತ್ತೆ ಗೆಲ್ಲುತ್ತೇನೆ ಎಂದು ಹೇಳಿದರು.
ಹೈ-ಕ ಭಾಗದಲ್ಲಿ 15-16 ಶಾಸಕರು ಗೆದ್ದಿದ್ದೇವೆ. ಇನ್ನೂ 3- 4 ಶಾಸಕರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಹಿಂದೆ ಸಚಿವನಾಗಿ ಕೆಲಸ ಮಾಡಿದ್ದೇನೆ. ಹಾಗಾಗಿ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಮ್ಮ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸ ಲಾತಿ ನೀಡಿದರೆ ನನಗೆ ಅಷ್ಟೇ ಸಾಕು ಎಂದು ಹೇಳಿದರು.
ಬಿಜೆಪಿ ಶಾಸಕ ರಾಮಣ್ಣ ಲಮಾಣಿ, ಸೋತವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂದರೆ 4 ಬಾರಿ ಗೆದ್ದ ನಾವೇನು ಮಾಡಬೇಕು. ಕಳೆದ ಬಾರಿ ಸಂಪುಟದಲ್ಲೂ ಅವರಿಗೇ ಅವಕಾಶ. ಈ ಬಾರಿಯೂ ಸ್ಥಾನ ನೀಡು ತ್ತಾರೆ ಎಂದರೆ ಏನರ್ಥ ಎಂದು ಬೇಸರ ವ್ಯಕ್ತಪಡಿಸಿದರು.0
ಹೊರಟ್ಟಿ- ಕತ್ತಿ ಭೇಟಿ: ಶಾಸಕರ ಭವನದಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ನಾವೆಲ್ಲಾ ಹಿಂದೆ ಒಂದೇ ಪಕ್ಷದಲ್ಲಿ ಇದ್ದವರು. ಮುಂದೆ ರಾಜಕೀಯದಲ್ಲಿ ಏನಾಗುವುದೋ ಗೊತ್ತಿಲ್ಲ. ಹಿಂದೆ ಒಟ್ಟಿಗೆ ಇದ್ದವರು ಮುಂದೆಯೂ ಒಟ್ಟಿಗೆ ಆಗಬ ಹುದು. ರಾಜಕಾರಣದಲ್ಲಿ ಎಲ್ಲವೂ ಹೀಗೆಯೇ ಆಗುತ್ತಿದೆ ಎಂದು ತಿಳಿದುಕೊಳ್ಳಬಾರದು ಎಂದು ಮಾರ್ಮಿಕವಾಗಿ ನುಡಿದರು.
ಮರಳಿ ಮನೆಗೆ ಬನ್ನಿ ಎಂದು ಉಮೇಶ್ ಕತ್ತಿ ಯವರಿಗೆ ಬಹಳ ದಿನಗಳಿಂದ ಹೇಳುತ್ತಿದ್ದೇವೆ. ಈಗಲೂ ಹೇಳಿದ್ದೇನೆ. ಕೆಲವು ಮುಳ್ಳುಗಳಿದ್ದು, ಸರಿ ಪಡಿಸಿಕೊಂಡು ಬರುವುದಾಗಿ ಹೇಳಿದ್ದಾರೆ. ಆಗು ಹೋಗುಗಳ ಬಗ್ಗೆಯೂ ಚರ್ಚಿಸಿದ್ದೇವೆ ಎಂದು ಹೇಳಿದರು.
ಯಡಿಯೂರಪ್ಪ ಬಳಿ ಚರ್ಚೆ: ಯಡಿಯೂರಪ್ಪ ನಿವಾಸಕ್ಕೆ ಮಂಗಳವಾರ ರಾತ್ರಿ ತೆರಳಿದ್ದ ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ ಅವರು ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಚರ್ಚೆ ನಡೆಸಿದರು. ತಮಗೆ ಈಗ ಅವಕಾಶ ತಪ್ಪಿಸಿದ ರೀತಿಯಲ್ಲೇ ಮುಂದೆ ಸಹೋದರ ರಮೇಶ್ ಜಾರಕಿಹೊಳಿ ಅವರಿಗೆ ಅನ್ಯಾಯ ವಾಗಬಾರದು. ಹಿಂದೆ ನಡೆದ ಮಾತುಕತೆಯಂ ತೆಯೇ ಅವರಿಗೆ ಸೂಕ್ತ ಸ್ಥಾನ ಮಾನ ಕಲ್ಪಿಸಬೇಕು ಎಂದು ಬಾಲಚಂದ್ರ ಜಾರಕಿಹೊಳಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು ಎನ್ನಲಾಗಿದೆ.
ಇನ್ನೊಂದೆಡೆ ವರಿಷ್ಠರು ರವಾನಿಸಿದ ಪಟ್ಟಿಯಲ್ಲಿದ್ದ ತಮ್ಮ ಹೆಸರನ್ನು ತೆಗೆಸಿದವರು ಯಾರು ಎಂಬುದನ್ನು ಬಹಿರಂಗಪಡಿಸಬೇಕು ಎಂದು ಉಮೇಶ್ ಕತ್ತಿ ಒತ್ತಾಯಿಸಿದರು. ಯಾವುದೇ ಕಾರಣಕ್ಕೂ ಮಾಜಿ ಶಾಸಕರು ಸಚಿವ ಸ್ಥಾನದಲ್ಲಿ ಮುಂದುವರಿಯ ಬಾರದು ಎಂದು ಆಗ್ರಹಿಸಿದರು. ಬಳಿಕ ಯಡಿ ಯೂರಪ್ಪ ಅವರು ಉಭಯ ನಾಯಕರನ್ನು ಸಮಾ ಧಾನಪಡಿಸುವ ಪ್ರಯತ್ನ ಮಾಡಿದರು ಎಂದು ಹೇಳಲಾಗಿದೆ.
ಸಿಎಂ ಜತೆ ಚರ್ಚಿಸಿದ್ದೇನೆ
ನನಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಸಿಕ್ಕಿಲ್ಲ. ಹಾಗೆಂದು ನನಗೆ ಯಾವ ಅತೃಪ್ತಿ, ಅಸಮಾ ಧಾನವೂ ಇಲ್ಲ. ನನಗಿದ್ದ ಅಸಮಾಧಾನವನ್ನು ಮುಖ್ಯಮಂತ್ರಿಗಳ ಹೇಳಿಕೊಂಡಿದ್ದೇನೆ. ಅವರು ನನಗೆ ಏನು ಹೇಳಬೇಕೋ ಅದನ್ನು ಹೇಳಿದ್ದಾರೆ ಎಂದು ನಾಯಕ ಉಮೇಶ್ ಕತ್ತಿ ಹೇಳಿದರು.
ನಮ್ಮ ಕುಟುಂಬ ಮುಗಿಸಲು ಸಾಧ್ಯವಿಲ್ಲ
ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಅಸಮಾಧಾನ ಇಲ್ಲವೇ ಇಲ್ಲ. ನನಗೆ ಯಾವುದೇ ಸ್ಥಾನಮಾನವೂ ಬೇಡ. ನಾನು ಸನ್ಯಾಸಿ ರೀತಿಯ ಇದ್ದೇನೆ ಎಂದು ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಹೇಳಿ ದ್ದೇನೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿ ದರು. ನಾನು ಸಚಿವನಾಗಿದ್ದಕ್ಕಿಂತ ಶಾಸಕನಾಗಿ ಹೆಚ್ಚು ಕೆಲಸ ಮಾಡಿದ್ದೇನೆ. ಉಮೇಶ್ ಕತ್ತಿಯವರಿಗೆ ಅನ್ಯಾ ಯವಾಗಿದ್ದು, ಅದನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತೇವೆ. ನಮ್ಮ ಕುಟುಂಬವನ್ನು ತುಳಿಯಬೇಕು ಎಂದು ನಾಲ್ಕೈದು ಮಂದಿ ಅಂದುಕೊಂಡರೂ ಅದು ಸಾಧ್ಯವಿಲ್ಲ ಎಂದು ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.