ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ವಿನೂತನ ಉಪಕ್ರಮ

Team Udayavani, Mar 29, 2020, 6:15 AM IST

ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ವೈದ್ಯರಿಗೆ, ನರ್ಸ್‌ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ನಿರ್ಧರಿಸಿದೆ.

ಕೋವಿಡ್‌ 19 ಸೋಂಕಿತರಿಗೆ ಏಕರೂಪದ ಚಿಕಿತ್ಸೆ ಇರಬೇಕು ಮತ್ತು ಅದನ್ನು ಎಲ್ಲರೂ ಪಾಲಿಸಲೇಬೇಕಾಗಿರುತ್ತದೆ. ಅತ್ಯಂತ ಸೂಕ್ಷ್ಮ ರೀತಿಯಲ್ಲಿ ಚಿಕಿತ್ಸಾ ವಿಧಾನ ಮತ್ತು ಆರೈಕೆಗಳು ಅಗತ್ಯ ಇರುವುದರಿಂದ ಎಲ್ಲ ಜಿಲ್ಲೆಗಳ ವೈದ್ಯರಿಗೆ, ನರ್ಸ್‌ಗಳಿಗೆ ಮಾತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ. ಆಯಾ ಜಿಲ್ಲೆಗಳಲ್ಲಿಯೇ ವೈದ್ಯರು, ನರ್ಸ್‌ಗಳು ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ಲಭ್ಯತೆಯ ಆಧಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ವಿವಿಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ತಜ್ಞರ ಮೂಲಕ ತರಬೇತಿ
ಈ ವಿಚಾರದಲ್ಲಿ ವೈದ್ಯರಿಗೆ ಅಥವಾ ನರ್ಸ್‌ಗಳಿಗೆ ತರಬೇತಿ ನೀಡುವವರೂ ಕೂಡ ತುಂಬ ವಿಚಾರವನ್ನು ತಿಳಿದವರಾಗಿರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಿವಿಯು ವೈದ್ಯಕೀಯ ತಜ್ಞರ ಮೂಲಕ ತರಬೇತಿ ನೀಡಲಿದೆ. ಸರಕಾರದ ಒಪ್ಪಿಗೆಯಲ್ಲೇ ಈ ತರಬೇತಿ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

ಏನೇನು ತರಬೇತಿ?
ಕೋವಿಡ್‌ 19 ವೈರಸ್‌ ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಸರಕಾರ ಈಗಾಗಲೇ ಜಾರಿಗೊಳಿಸಿದೆ. ಆದರೆ ಸೋಂಕಿತರನ್ನು ಮಾತ್ರ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದವರು ಮಾತ್ರ ನೋಡಿಕೊಳ್ಳಬೇಕು. ಹೀಗಾಗಿ ವೈದ್ಯರಿಗೆ, ನರ್ಸ್‌ ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಅತ್ಯಾಧುನಿಕ ಸೌಲಭ್ಯವನ್ನು ವೈದ್ಯಕೀಯ ಸೌಲಭ್ಯ ಬಳಸಿ, ಯಾವುದೇ ರೀತಿಯಲ್ಲೂ ಅಪಾಯವಿಲ್ಲದ ರೀತಿಯಲ್ಲಿ ಆರೈಕೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ತರಬೇತಿ ಆನ್‌ಲೈನ್‌ ಮೂಲಕ ಇರುವುದರಿಂದ ವೈದ್ಯರು ಅಥವಾ ವೈದ್ಯಕೀಯ ಸಿಬಂದಿ ತಾವು ಇರುವ ಜಾಗಳಿಂದಲೇ ತರಬೇತಿ ಪಡೆಯಬಹುದಾಗಿದೆ ಎಂದು ವಿವಿಯ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಕೋವಿಡ್‌ 19 ಚಿಕಿತ್ಸೆ ಮತ್ತು ಆರೈಕೆ ಸಂಬಂಧಿಸಿದಂತೆ ಇಡೀ ದೇಶದಲ್ಲೇ ಏಕರೂಪ ಕ್ರಮ ಅಳವಡಿಸಿಕೊಳ್ಳಬೇಕು. ಹೀಗಾಗಿ ರಾಜ್ಯದ ಎಲ್ಲಡೇ ಏಕರೂಪ ಚಿಕಿತ್ಸೆ ಮತ್ತು ಆರೈಕೆ ಕ್ರಮಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರದ ಸಿಬಂದಿಗೆ ತರಬೇತಿ ನೀಡಲಿದ್ದೇವೆ. ಇದು ಚಿಕಿತ್ಸೆಗೆ ಅನುಕೂಲ ಆಗುವ ಜತೆಗೆ ಆಧುನಿಕ ಉಪ ಕರಣಗಳ ಸರಳ ಬಳಕೆಗೆ ಉಪಯೋಗ ಆಗಲಿದೆ.
-ಡಾ|ಎಸ್‌.ಸಚ್ಚಿದಾನಂದ, ಕುಲಪತಿ,
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.

ಸಿಬಂದಿಗೆ ತರಬೇತಿ
ರಾಜ್ಯದಲ್ಲಿರುವ ಬಹುತೇಕ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ನರ್ಸಿಂಗ್‌ ಕಾಲೇಜುಗಳು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಅಧೀನದಲ್ಲಿ ಬರುತ್ತದೆ. ಕೋವಿಡ್‌ 19 ತಡೆಯುವ ನಿಟ್ಟಿನಲ್ಲಿ ವಿವಿಯೂ ಈಗಾಗಲೇ ಕಾರ್ಯೋನ್ಮುಖವಾಗಿದ್ದು ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ಸಂಬಂಧ ಅಗತ್ಯ ಸೂಚನೆಯನ್ನು ನೀಡಿದ್ದು, ಈಗ ವೈದ್ಯರು ಮತ್ತು ವೈದ್ಯಕೀಯ ಸೇವೆಯ ಸಿಬಂದಿಗೆ ತರಬೇತಿ ನೀಡಲು ಮುಂದಾಗಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-katte

Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

BJP-Gov

ಪೊಲೀಸ್‌ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.