Viral: 500 ರೂ. ನೋಟುಗಳ ರಾಶಿ, ರಾಶಿ ಹಣದ ಜತೆ ಪೊಲೀಸ್ ಅಧಿಕಾರಿಯ ಹೆಂಡತಿ, ಮಕ್ಕಳ ಸೆಲ್ಫಿ!
500 ರೂ. ಮುಖಬೆಲೆಯ ನೋಟುಗಳ 27 ಬಂಡಲ್ ಜತೆ ಸೆಲ್ಫಿ
Team Udayavani, Jun 30, 2023, 11:24 AM IST
ಲಕ್ನೋ: ಅಧಿಕಾರ, ಹಣದ ದಾಹ ಹೇಗಿರುತ್ತದೆ ಎಂಬುದಕ್ಕೆ ಆಗಾಗ ನಡೆಯುತ್ತಿರುವ ಇ.ಡಿ, ಲೋಕಾಯುಕ್ತ ಸಂಸ್ಥೆಗಳ ದಾಳಿಯಿಂದ ಬೆಳಕಿಗೆ ಬರುತ್ತದೆ. ಆದರೆ ಉತ್ತರಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500 ರೂ. ಮುಖಬೆಲೆಯ ಕಂತೆ, ಕಂತೆ ನೋಟುಗಳ ರಾಶಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅದು ವೈರಲ್ ಆದ ನಂತರ ಪೊಲೀಸ್ ಅಧಿಕಾರಿ ಸಂಕಷ್ಟ ಸಿಲುಕಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಮುಂಗಾರು ಅಧಿವೇಶನದಲ್ಲೇ ಏಕರೂಪ ಕಾನೂನು ಸಂಹಿತೆ ಮಸೂದೆ ಮಂಡನೆ
ಪೊಲೀಸ್ ಅಧಿಕಾರಿಯ ಹೆಂಡತಿ ಮತ್ತು ಮಕ್ಕಳು 500 ರೂ. ನೋಟುಗಳ ಬಂಡಲ್ ಗಳ ಜೊತೆ ಸೆಲ್ಫಿ ತೆಗೆದುಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪೊಲೀಸ್ ಅಧಿಕಾರಿಯನ್ನು ತಕ್ಷಣವೇ ವರ್ಗಾವಣೆ ಮಾಡಿ, ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಪೊಲೀಸ್ ಅಧಿಕಾರಿಯ ಹೆಂಡತಿ ಮತ್ತು ಮಕ್ಕಳು ಬೆಡ್ ಮೇಲೆ 500 ರೂ. ಮುಖಬೆಲೆಯ ನೋಟುಗಳ 27 ಬಂಡಲ್ ಗಳನ್ನು ಹರಡಿಕೊಂಡು ಕುಳಿತಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 27 ಬಂಡಲ್ ಗಳ ಒಟ್ಟು ಮೊತ್ತ 14 ಲಕ್ಷ ರೂಪಾಯಿ ಎಂದು ವರದಿ ವಿವರಿಸಿದೆ.
ಘಟನೆಗೆ ಸಂಬಂಧಿಸಿದಂತೆ ಉನ್ನಾವೋ ಪೊಲೀಸ್ ಠಾಣಾಧಿಕಾರಿ ರಮೇಶ್ ಚಂದ್ರ ಸಹಾನಿಯನ್ನು ವರ್ಗಾವಣೆ ಮಾಡಲಾಗಿದೆ. ಏತನ್ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೊದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಹಾನಿ, ಈ ಫೋಟೊವನ್ನು 2021ರ ನವೆಂಬರ್ 14ರಂದು ತೆಗೆದಿದ್ದು, ತಮ್ಮ ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಬಂದ ಹಣ ಇದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!
Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು
Tragedy: ದೇವಸ್ಥಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು, CCTVಯಲ್ಲಿ ಸೆರೆಯಾಯ್ತು ದೃಶ್ಯ
Viral Video: ಮದ್ಯ ಸೇವಿಸಿ ನಡುರಸ್ತೆಯಲ್ಲೇ ಮೂತ್ರ ವಿಸರ್ಜಿಸಿದ ಪೊಲೀಸ್ ಪೇದೆ.!
MUST WATCH
ಹೊಸ ಸೇರ್ಪಡೆ
BBಕ11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.