Noidaದಿಂದ ದೆಹಲಿವರೆಗೆ ಉತ್ತರಪ್ರದೇಶ ರೈತರ ಪ್ರತಿಭಟನಾ ಜಾಥಾ; ಬಿಗಿ ಭದ್ರತೆ, Traffic ಜಾಮ್
, Dec 2, 2024, 12:04 PM IST
ನವದೆಹಲಿ: ನೂತನ ಕೃಷಿ ಕಾಯ್ದೆಯಡಿ ಪರಿಹಾರ ಮತ್ತು ಲಾಭದ ಕುರಿತು ಐದು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉತ್ತರಪ್ರದೇಶ ರೈತರು ಸೋಮವಾರ (ಡಿ.02) ನೋಯ್ಡಾದಿಂದ ಪಾರ್ಲಿಮೆಂಟ್ ಕಾಂಪ್ಲೆಕ್ಸ್ ವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದು, ಇದರ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಸಂಸತ್ ನಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ರೈತರು ಮತ್ತೆ ಬೀದಿಗಿಳಿದಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ದೆಹಲಿ ಮತ್ತು ಎನ್ ಸಿಆರ್ ನ ಮಾರ್ಗಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನಗಳಿಗೆ ಬದಲಿ ಮಾರ್ಗದ ಅವಕಾಶ ಕಲ್ಪಿಸಿಕೊಟ್ಟಿರುವುದಾಗಿ ವರದಿ ವಿವರಿಸಿದೆ.
ಭೂಮಿ ರಹಿತ ರೈತರ ಮಕ್ಕಳಿಗೆ ಉದ್ಯೋಗಾವಕಾಶ, ಪುನರ್ವಸತಿ ಸೌಲಭ್ಯ, ಉನ್ನತ ಮಟ್ಟದ ಸಮಿತಿ ರಚನೆ ಸೇರಿದಂತೆ ಐದು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ಪ್ರತಿಭಟನಾ ಜಾಥಾ ಹಮ್ಮಿಕೊಂಡಿರುವುದಾಗಿ ವರದಿ ತಿಳಿಸಿದೆ.
ಭಾರತೀಯ ಕಿಸಾನ್ ಪರಿಷತ್ (BKP), ಕಿಸಾನ್ ಮಜ್ದೂರ್ ಮೋರ್ಚಾ (KMM) ಸೇರಿದಂತೆ ವಿವಿಧ ಮೈತ್ರಿ ಸಂಘಟನೆಗಳ ಸಹಕಾರದೊಂದಿಗೆ ರೈತರು ನೋಯ್ಡಾ ಮಹಾಮಾಯ ಫ್ಲೈ ಓವರ್ ಸಮೀಪದಿಂದ 12ಗಂಟೆಗೆ ಪ್ರತಿಭಟನಾ ಜಾಥಾ ಆರಂಭಗೊಳ್ಳಲಿದ್ದು, ನಂತರ ಪಾದಯಾತ್ರೆ, ಟ್ರ್ಯಾಕ್ಟರ್ ಮೂಲಕ ದೆಹಲಿಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.