Uttar Pradesh: ತಪ್ಪಾದ ಇಂಜೆಕ್ಷನ್ ನಿಂದ ಬಾಲಕಿ ಸಾವು; ಶವ ಎಸೆದು ವೈದ್ಯ, ಸಿಬಂದಿ ಪರಾರಿ!
ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಬೀಗ ಹಾಕುವಂತೆ ಜಿಲ್ಲಾ ವೈದ್ಯಾಧಿಕಾರಿ ಆದೇಶ ನೀಡಿದ್ದಾರೆ
Team Udayavani, Sep 29, 2023, 6:48 PM IST
ಲಕ್ನೋ: ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬ 17 ವರ್ಷದ ಹುಡುಗಿಯೊಬ್ಬಳಿಗೆ ಕಾಯಿಲೆಗೆ ಸಂಬಂಧಪಡದ (Wrong) ಇಂಜೆಕ್ಷನ್ ನೀಡಿದ ಪರಿಣಾಮ ಕೊನೆಯುಸಿರೆಳೆದಿರುವ ಘಟನೆ ಉತ್ತರಪ್ರದೇಶದ ಮೈನ್ ಪುರಿಯಲ್ಲಿ ನಡೆದಿದೆ.
ಇದನ್ನೂ ಓದಿ:Illicit ಸಂಬಂಧ; ವಿವಾಹಿತೆಗೆ ಬ್ಲಾಕ್ ಮೇಲ್: ಸುಬ್ರಹ್ಮಣ್ಯ ಗ್ರಾ.ಪಂ.ಮಾಜಿ ಸದಸ್ಯ ಅರೆಸ್ಟ್
“ನಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂಬ ವಿಷಯವನ್ನೂ ತಿಳಿಸದೇ ಆಸ್ಪತ್ರೆಯ ಸಿಬಂದಿ ಹೊರಗಿನ ಪಾರ್ಕಿಂಗ್ ಸ್ಥಳದಲ್ಲಿದ್ದ ಮೋಟಾರ್ ಸೈಕಲ್ ಮೇಲೆ ಶವವನ್ನು ಇರಿಸಿ ಪರಾರಿಯಾಗಿದ್ದರು” ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆಯ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಸಾರ್ವಜನಿಕರ ಆಕ್ರೋಶದ ಭಯಕ್ಕೆ ಹೆದರಿ ವೈದ್ಯರು ಮತ್ತು ಆಸ್ಪತ್ರೆಯ ಎಲ್ಲಾ ಸಿಬಂದಿಗಳು ಓಡಿಹೋಗಿರುವುದಾಗಿ ವರದಿ ತಿಳಿಸಿದೆ. ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿದ್ದ ಬೈಕ್ ಮೇಲೆ ಬಾಲಕಿಯ ಶವ ಅನಾಥವಾಗಿರುವಂತೆ ಬಿದ್ದಿರುವುದು ಸಿಸಿಟಿವಿಯಲ್ಲಿ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಜ್ವರದಿಂದ ಬಳಲುತ್ತಿದ್ದ ಭಾರ್ತಿ(17ವರ್ಷ)ಯನ್ನು ಪೋಷಕರು ಘಿರೋರ್ ಪ್ರದೇಶದ ಕರ್ಹಾಲ್ ರಸ್ತೆಯಲ್ಲಿರುವ ರಾಧಾ ಸ್ವಾಮಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಆಕೆಯ ಚಿಕ್ಕಮ್ಮ ಮನೀಶಾ ತಿಳಿಸಿದ್ದಾರೆ. ಆಕೆ ಆರೋಗ್ಯವಾಗಿಯೇ ಇದ್ದಳು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಇಂಜೆಕ್ಷನ್ ನೀಡಿದ್ದರು. ಬಳಿಕ ಆಕೆಯ ಆರೋಗ್ಯ ತೀವ್ರ ಹದಗೆಟ್ಟಿತ್ತು. ನೀವು ಆಕೆಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ವೈದ್ಯ ತಿಳಿಸಿದ್ದ. ಆದರೆ ಆ ಸಮಯಕ್ಕೆ ಭಾರ್ತಿ ಕೊನೆಯುಸಿರೆಳೆದಿದ್ದಳು ಎಂದು ಮನೀಶಾ ವಿವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಬೀಗ ಹಾಕುವಂತೆ ಜಿಲ್ಲಾ ವೈದ್ಯಾಧಿಕಾರಿ ಆದೇಶ ನೀಡಿದ್ದಾರೆ. ಆರೋಪಿ ವೈದ್ಯನ ವಿರುದ್ಧ ಎಫ್ ಐಆರ್ ದಾಖಲಿಸಿ, ಆಸ್ಪತ್ರೆಯ ರಿಜಿಸ್ಟ್ರೇಶನ್ ರದ್ದುಪಡಿಸಲಾಗುವುದು ಎಂದು ಸಿಎಂಒ ಗುಪ್ತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers Protest: ರೈತ ದಲ್ಲೇವಾಲ್ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್ ಕಿಶೋರ್ ನಿರಶನ
RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ
Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.