ಅಪ್ರಾಪ್ತ ಮಗಳ ಮೇಲೆ ಸತತ ಅತ್ಯಾಚಾರ; ತಂದೆ ಸೇರಿ 28 ಮಂದಿ ಬಂಧನ

354, 376ಡಿ, 323, 328, 506 ಹಾಗೂ 120 ಬಿ ಕಾಯ್ದೆಯಡಿ ಎಫ್ ಐಆರ್ ದಾಖಲಿಸಲಾಗಿದೆ

Team Udayavani, Oct 13, 2021, 3:54 PM IST

ಅಪ್ರಾಪ್ತ ಮಗಳ ಮೇಲೆ ಸತತ ಅತ್ಯಾಚಾರ; ತಂದೆ ಸೇರಿ 28 ಮಂದಿ ಬಂಧನ

ಲಕ್ನೋ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ತಂದೆ ಸೇರಿದಂತೆ  28 ಮಂದಿಯನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಲಲಿತ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಬಹುಜನ್ ಸಮಾಜ್ ಪಕ್ಷದ ಜಿಲ್ಲಾಧ್ಯಕ್ಷ ಸೇರಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ನಿಮ್ಮ ತಂದೆ ಕೂಡ ಪುಟಗೋಸಿ ಹುದ್ದೆಯಲ್ಲಿ ಇದ್ದದ್ದಾ? : ಎಚ್ ಡಿಕೆಗೆ ಸಿದ್ದರಾಮಯ್ಯ ಪ್ರಶ್ನೆ

ಆರನೇ ತರಗತಿಯಲ್ಲಿರುವಾಗಲೇ ತಂದೆ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದು, ಬಳಿಕ ಹಲವಾರು ಬಾರಿ ಅತ್ಯಾಚಾರ ಎಸಗಿರುವುದಾಗಿ ಮಾಹಿತಿ ನೀಡಿದ್ದಾಳೆ.

ಅಷ್ಟೇ ಅಲ್ಲ ವ್ಯವಹಾರದ ಉದ್ದೇಶದಿಂದ ಇತರರನ್ನು ದೂರವಾಣಿ ಕರೆ ಮಾಡಿ ಕರೆಯಿಸಿಕೊಂಡು, ಅವರ ಜತೆಯೂ ಲೈಂಗಿಕ ಚಟುವಟಿಕೆ ನಡೆಸುವಂತೆ ಬಲವಂತ ಮಾಡಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ.

ಅತ್ಯಾಚಾರ ಎಸಗಿದವರಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ತಿಲಕ್ ಯಾದವ್ ಹಾಗೂ ಆತನ ಮೂವರು ಕಿರಿಯ ಸಹೋದರರು, ಬಿಎಸ್ಪಿ ಜಿಲ್ಲಾಧ್ಯಕ್ಷ ದೀಪಕ್ ಅಹಿವಾರ್, ಉಪಾಧ್ಯಕ್ಷ ನೀರಜ್ ತಿವಾರಿ ಹಾಗೂ ಆತನ ಕುಟುಂಬದ ಕೆಲವು ಸದಸ್ಯರು ಇದ್ದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ವರದಿ ಹೇಳಿದೆ.

ಅತ್ಯಾಚಾರ ಎಸಗಿದ ವಿಷಯವನ್ನು ಬಹಿರಂಗಪಡಿಸಿದರೆ ತಾಯಿಯನ್ನು ಕೊಲ್ಲುವುದಾಗಿ ತಂದೆ ಬೆದರಿಕೆ ಒಡ್ಡಿರುವುದಾಗಿ ಸಂತ್ರಸ್ತೆ ದೂರಿದ್ದಾಳೆ. ದೂರಿನ ಆಧಾರದ ಮೇಲೆ ಪೊಲೀಸರು ತಂದೆ ಹಾಗೂ ಇತರ 28 ಮಂದಿ ವಿರುದ್ಧ 354, 376ಡಿ, 323, 328, 506 ಹಾಗೂ 120 ಬಿ ಕಾಯ್ದೆಯಡಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಆಕೆಗೆ ಸಹೋದರನೊಬ್ಬನಿದ್ದಾನೆ. ಆಕೆಯ ಎಲ್ಲಾ ಮಾಹಿತಿಯನ್ನು ಪರಿಶೀಲಿಸಲಾಗಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದರಿಂದ ಎಲ್ಲಾ ಆಯಾಮದಿಂದಲೂ ತನಿಖೆ ನಡೆಸುತ್ತಿದ್ದೇವೆ ಎಂದು ಲಲಿತ್ ಪುರ್ ಎಎಸ್ ಪಿ ಗಿರಿಜೇಶ್ ಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.