POCSO Act; 15 ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯ: ಶಿಕ್ಷಕನ ಬಂಧನ, ಇಬ್ಬರ ಅಮಾನತು
7 ಮತ್ತು 8ನೇ ತರಗತಿ ವಿದ್ಯಾರ್ಥಿನಿಯರಿಗೆ ದೈಹಿಕ ಕಿರುಕುಳ ನೀಡಿರುವುದಾಗಿ ದೂರು ದಾಖಲಾಗಿತ್ತು.
Team Udayavani, May 15, 2023, 1:45 PM IST
ಲಕ್ನೋ(ಉತ್ತರಪ್ರದೇಶ): 15 ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪಿ ಕಂಪ್ಯೂಟರ್ ಶಿಕ್ಷಕನಿಗೆ ಬೆಂಬಲ ನೀಡಿದ ಆರೋಪದಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಂಪ್ಯೂಟರ್ ಶಿಕ್ಷಕನನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಷಹಜಹಾನ್ ಪುರ್ ಜಿಲ್ಲೆಯ ತಿಲ್ಹಾರ್ ಗ್ರಾಮದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
7 ಮತ್ತು 8ನೇ ತರಗತಿ ವಿದ್ಯಾರ್ಥಿನಿಯರಿಗೆ ದೈಹಿಕ ಕಿರುಕುಳ ನೀಡಿರುವುದಾಗಿ ದೂರು ದಾಖಲಾಗಿತ್ತು. ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿ ವಿವರಿಸಿದೆ.
ಮೂವರ ವಿರುದ್ಧ ಎಸ್ ಸಿ/ಎಸ್ ಟಿ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಖ್ಯೋಪಾಧ್ಯಾಯ ಮತ್ತು ಸಹ ಶಿಕ್ಷಕನನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಶಿಕ್ಷಣಾಧಿಕಾರಿ ಕುಮಾರ್ ಗೌರವ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರ ಸಮ್ಮುಖದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಕಂಪ್ಯೂಟರ್ ಶಿಕ್ಷಕನನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.