Upper Krishna: ನೀರಾವರಿ ಇಲಾಖೆ ಭೂಸ್ವಾಧೀನ ಹೆಚ್ಚಳದ ಬಗ್ಗೆ ಸಮಗ್ರ ತನಿಖೆ : ಡಿಸಿಎಂ

ಎಕರೆಗೆ 5.18 ಕೋಟಿ ಪರಿಹಾರ ನೀಡಲು ಸೂಚಿಸಿದ ಕೋರ್ಟ್‌ !

Team Udayavani, Jul 24, 2024, 6:15 AM IST

DCM-DK-Shivakumar

ವಿಧಾನಸಭೆ: ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿವಿಧ ಕಾಮಗಾರಿಗಳ ಭೂಸ್ವಾಧೀನ ಹಾಗೂ ಪರಿಹಾರ ನಿಗದಿ ವಿಚಾರದಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಕಟಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಇಲ್ಲಿ ನಡೆದಿರುವ ಕೆಲ ಸಂಗತಿಗಳನ್ನು ಗಮನಿಸಿದರೆ ನೀವೆಲ್ಲರೂ ಗಾಭರಿಯಾಗಬೇಕಾಗುತ್ತದೆ. ಈ ಯೋಜನೆ ಅನುಷ್ಠಾನ ಸಂದರ್ಭದಲ್ಲಿ ರೈತರು ಎಕರೆಗೆ 1 ರಿಂದ 3 ಸಾವಿರ ರೂ.ವರೆಗೆ ಮಾತ್ರ ಪರಿಹಾರ ಪಡೆದಿದ್ದರು. ಆದರೆ ಈಗ ಪರಿಹಾರ ಮತ್ತು ಭೂಸ್ವಾಧೀನ ವಿಚಾರವೇ ಹಗರಣದ ಸ್ವರೂಪ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕಾದ ಸಂದರ್ಭ ಬಂದಿದೆ ಎಂದರು.

ಒಟ್ಟು 2000 ಪ್ರಕರಣಗಳಲ್ಲಿ ನಾವು ಪರಿಹಾರ ಕೊಡಬೇಕಿದೆ. ಹಿಂದೆ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಸರಾಸರಿ 25 ಲಕ್ಷ ರೂ. ಪ್ರತಿ ಎಕರೆಗೆ ಪರಿಹಾರ ನಿಗದಿ ಮಾಡಲಾಗಿತ್ತು. ಆದರೆ ವಿಜಯಪುರದ ಒಂದು ಪ್ರಕಣದಲ್ಲಿ ಒಂದು ಎಕರೆಗೆ 5.18 ಕೋಟಿ ರೂ. ಪರಿಹಾರ ನೀಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲೂ ಇಷ್ಟು ಪರಿಹಾರ ನೀಡುವುದಕ್ಕೆ ಸಾಧ್ಯವಿಲ್ಲ. ಸರ್ಕಾರಿ ವಕೀಲರು ಹಾಗೂ ಕಕ್ಷಿದಾರರ ಭಾಗಿದಾರಿಕೆಯಿಂದ ಇಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂಥ ಪ್ರಕರಣದಲ್ಲಿ ಭಾಗಿಯಾದ ಎಲ್ಲ ವಕೀಲರನ್ನು ಕಿತ್ತು ಹಾಕುವುದಕ್ಕೆ ಕಾನೂನು ಮತ್ತು ಸಂಸದೀಯ ಇಲಾಖೆ ಜತೆ ಸಭೆ ನಡೆಸಿ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಬಸನಗೌಡ ಯತ್ನಾಳ್‌, ಕೃಷ್ಣಾ ನದಿ ಕರ್ನಾಟಕದ ಶೇ.68 ರಷ್ಟು ನೀರಾವರಿ ಯೋಜನೆಗಳಿಗೆ ಆಧಾರವಾಗಿದೆ. ಆದರೆ, ಕಾವೇರಿ ಕೊಳ್ಳದ ಯೋಜನೆಗಳಿಗೆ ಸಿಕ್ಕ ಆದ್ಯತೆ ಲಭ್ಯವಾಗುತ್ತಿಲ್ಲ. ಇದೇ ರೀತಿಯಾದರೆ 100 ವರ್ಷವಾದರೂ ಕಾಮಗಾರಿಗಳು ಮುಕ್ತಾಯವಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ಮೃತದೇಹ… ಮಹಿಳೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

1-gggggggg

Hagaribommanahalli; ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ಮೃತದೇಹ… ಮಹಿಳೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.