Uttara Kannada: ನಾಳೆ ಅಂಕೋಲಾಕ್ಕೆ ಸಿಎಂ ಸಿದ್ದರಾಮಯ್ಯ; ಸಂತ್ರಸ್ತರ ಭೇಟಿ
ಕಾರವಾರದಲ್ಲಿ ಸಭೆ, ಶಿರೂರು ಹಾನಿ ಪ್ರದೇಶ ಪರಿಶೀಲನೆ, ವಿಪಕ್ಷ ನಾಯಕರಾದ ಅಶೋಕ್, ಬಿ.ವೈ.ವಿಜಯೇಂದ್ರ ಕೂಡ ನಾಳೆ ಭೇಟಿ
Team Udayavani, Jul 20, 2024, 10:00 PM IST
ಬೆಂಗಳೂರು: ಅಂಕೋಲಾ-ಶಿರೂರು ನಡುವಿನ ಹೆದ್ದಾರಿ ಕುಸಿತದಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ (ಜು.21) ಭೇಟಿ ನೀಡಿ ಪರಿಶೀಲಿಸಲು ಮುಂದಾಗಿದ್ದಾರೆ.
ಈಗಾಗಲೇ ಸಚಿವರಾದ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್ ಸೇರಿದಂತೆ ಇನ್ನಿತರರು ಆರೈಕೆ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಜತೆಗೆ ಹೆದ್ದಾರಿ ಬದಿ ಕುಸಿದ ಸ್ಥಳಕ್ಕೂ ಭೇಟಿ ನೀಡಿ ಅದರ ತೆರವು ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ಅಲ್ಲದೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೂಡ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾನುವಾರ ಭೇಟಿ ನೀಡಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.
ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775… pic.twitter.com/fWN7WAlCUw
— Siddaramaiah (@siddaramaiah) July 20, 2024
ನಾನೇ ಭಾನುವಾರ ತೆರಳುವೆ: ಶನಿವಾರ ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ಭಾನುವಾರ ನಾನೇ ತೆರಳುತ್ತೇನೆ ಎಂದಿದ್ದಾರೆ.
ಶಿರೂರಿಗೆ ವಿಜಯೇಂದ್ರ, ಅಶೋಕ್ ನಾಳೆ ಭೇಟಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಮಧ್ಯಾಹ್ನದ ವೇಳೆಗೆ ಉಲ್ವೇರ್ ಮತ್ತು ಶಿರೂರಿಗೆ ಭೇಟಿ ನೀಡಲಿದ್ದು, ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಇತ್ತ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಹಾಸನ ಜಿಲ್ಲೆ ಸಕಲೇಶಪುರ ಭಾಗಕ್ಕೆ ಭೇಟಿ ನೀಡಲಿದ್ದು, ಬಳಿಕ ಶಿರೂರಿಗೂ ಭೇಟಿ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.