Trumpಗೆ ಜಯ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದ ರಾಮಸ್ವಾಮಿ
ಟ್ರಂಪ್ ಗೆ ಜನಬೆಂಬಲ ದೊರೆತಿರುವುದಾಗಿ ವರದಿ ವಿವರಿಸಿದೆ.
Team Udayavani, Jan 16, 2024, 1:37 PM IST
ವಾಷಿಂಗ್ಟನ್: ಲೋವಾ ರಿಪಬ್ಲಿಕನ್ ಕಾಕಸಸ್ ನಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಭಾರತೀಯ ಮೂಲದ ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಮಂಗಳವಾರ (ಜನವರಿ 16) ಘೋಷಿಸಿದ್ದು, ತಾನು ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:Australian Open; ಶ್ರೇಯಾಂಕಿತ ಆಟಗಾರನ ವಿರುದ್ಧ ಗೆದ್ದು ಇತಿಹಾಸ ಬರೆದ ಸುಮಿತ್ ನಾಗಲ್
ರಾಮಸ್ವಾಮಿ ಅವರು 2023ರ ಫೆಬ್ರವರಿಯಲ್ಲಿ ಅಧ್ಯಕ್ಷ ಚುನಾವಣೆಯ ಸ್ಪರ್ಧೆಗೆ ಕಾಲಿಟ್ಟ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ಚಿರಪರಿಚಿತರಾಗಿರಲಿಲ್ಲವಾಗಿತ್ತು. ಆದರೆ ವಿವೇಕ್ ರಾಮಸ್ವಾಮಿಯ ವಲಸೆ ಹಾಗೂ ಅಮೆರಿಕದ ವಿದೇಶಾಂಗ ನೀತಿ ಕುರಿತ ಖಡಕ್ ನಿಲುವನ್ನು ಮಂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಆಕಾಂಕ್ಷಿಯಾಗಿದ್ದ ವಿವೇಕ್ ರಾಮಸ್ವಾಮಿ ಲೋವಾ ರಿಪಬ್ಲಿಕನ್ ಕಾಕಸಸ್ ನಲ್ಲಿ ಕೇವಲ ಶೇ.7.7ರಷ್ಟು ಮತಗಳಿಸಿದ್ದರು. ಇದರಿಂದ ನಿರಾಸೆಗೊಂಡ ರಾಮಸ್ವಾಮಿ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.
ಲೋವಾ ರಿಪಬ್ಲಿಕನ್ ಕಾಕಸಸ್ ನಲ್ಲಿ ರಿಪಬ್ಲಿಕ್ ಪಕ್ಷದ ಡೊನಾಲ್ಡ್ ಟ್ರಂಪ್ ಶೇ.50ರಷ್ಟು ಮತ ಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ನಾಲ್ಕು ಕ್ರಿಮಿನಲ್ ಕೇಸ್ ಗಳನ್ನು ಎದುರಿಸುತ್ತಿದ್ದರೂ ಕೂಡಾ ಟ್ರಂಪ್ ಗೆ ಜನಬೆಂಬಲ ದೊರೆತಿರುವುದಾಗಿ ವರದಿ ವಿವರಿಸಿದೆ.
2009ರಿಂದ 2017ರವರೆಗೆ ಡೆಮಾಕ್ರಟಿಕ್ ಪಕ್ಷದ ಬರಾಕ್ ಒಬಾಮಾ ಅಮೆರಿಕದ ಅಧ್ಯಕ್ಷರಾಗಿದ್ದರು. 2017ರಿಂದ 2021ರವರೆಗೆ ರಿಪಬ್ಲಿಕ್ ಪಕ್ಷದ ಡೊನಾಲ್ಡ್ ಟ್ರಂಪ್ ಜಯಗಳಿಸಿ ಅಧಿಕಾರದ ಗದ್ದುಗೆ ಏರಿದ್ದರು. 2021ರಲ್ಲಿ ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಪರಾಜಯಗೊಂಡಿದ್ದು, ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಗೆಲುವು ಸಾಧಿಸಿದ್ದರು. ಆದರೆ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಬೈಡೆನ್ ಮತ್ತು ಟ್ರಂಪ್ ಮುಖಾಮುಖಿಯಾಗುವ ಮೂಲಕ ಗೆಲುವು ಯಾರ ಮಡಿಲಿಗೆ ಎಂಬುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.