ಎಲ್ಲಾ ಮುಸ್ಲಿಮರು ಕೆಟ್ಟವರಲ್ಲ ಹಾಗೆಯೇ ಎಲ್ಲಾ ಹಿಂದೂಗಳು ಒಳ್ಳೆಯವರಲ್ಲ : ಸಚಿವ ವಿ.ಸೋಮಣ್ಣ

Team Udayavani, Sep 10, 2020, 5:57 PM IST

ಎಲ್ಲಾ ಮುಸ್ಲಿಮರು ಕೆಟ್ಟವರಲ್ಲ ಹಾಗೆಯೇ ಎಲ್ಲಾ ಹಿಂದೂಗಳು ಒಳ್ಳೆಯವರಲ್ಲ : ಸಚಿವ ವಿ.ಸೋಮಣ್ಣ

ಬೆಂಗಳೂರು : ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ. ಎಲ್ಲಾ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದ್ರೆ ಅಲ್ಲಿ ದೆವ್ವ -ಸೈತಾನ್‍ಗಳು ಇದ್ದೇ ಇರುತ್ತವೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.

ನಗರದ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ ನಲ್ಲಿ ಈದ್ಗಾ ಮೈದಾನ ಕಾಂಪೌಂಡ್ ಪೂಜೆ ನೆರವೇರಿಸಿ ಮಾತನಾಡಿದ ಸೋಮಣ್ಣ, ಈ ಕೆಲಸಕ್ಕೂ ಜಾತಿ ಧರ್ಮಕ್ಕೂ ಸಂಬಂಧವಿಲ್ಲ. ಇದು ನನ್ನ ಕರ್ತವ್ಯ. ಒಬ್ಬ ಜನಪ್ರತಿನಿಯಾಗಿ ನಾನು ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ. ನಾವು ಭಾರತೀಯರು, ಹಿಂದೂ-ಮುಸ್ಲಿಮರು ಒಂದೇ ಮನೆಯವರು. ನೀವೂ ಅಲ್ಲಾ ಅಂತೀರಾ ನಾವು ಶಿವ ಅಂತೀವಿ, ಎಲ್ಲರಿಗೂ ದೇವರೊಬ್ಬನೇ ಎಂದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸೋಮಣ್ಣ, ಕೋವಿಡ್ ನಿಂದಾಗಿ ಸಾಮಾನ್ಯ ಬಡವ ಕಳೆದ ಐದು ತಿಂಗಳಿನಿಂದ ಕಂಗಾಲಾಗಿದ್ದಾನೆ. ಕಾಂಗ್ರೆಸ್ ನವರು 75 ವರ್ಷಗಳಿಂದ ನಿಮ್ಮನ್ನ ವೋಟ್ ಬ್ಯಾಂಕ್ ಗಾಗಿ ಬಳಸಿಕೊಂಡಿದ್ದಾರೆ, ಬಳಸಿಕೊಳ್ಳುತ್ತಿದ್ದಾರೆ. ಇನ್ನು ಎಷ್ಟು ವರ್ಷ ನೀವು ಮೋಸ ಹೋಗ್ತೀರಾ..?. ನಾನು ಯಾವತ್ತಾದರೂ ಅನ್ಯಾಯ ಮಾಡಿದ್ದೀನಾ..? ಆದರೂ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ನನಗೆ ಬೂಟಾಟಿಕೆ ಗೊತ್ತಿಲ್ಲ, ನಾನು ಕಾಮ್ ಕರ್ನೆ ವಾಲಾ ( ಜನರ ಕೆಲಸ ಮಾಡುವವನು) ಎಂದು ಹೇಳಿದರು.

ಇದನ್ನೂ ಓದಿ : ಮಜೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಬೊಳ್ಳಿ

ಇನ್ನಾದರೂ ನೀವು ಬದಲಾಗಿ, ದೇಶದಲ್ಲಿ ನರೇಂದ್ರ ಮೋದಿ ಅವರು ಬದಲಾವಣೆಯ ಪರ್ವ ಶುರು ಮಾಡಿದ್ದಾರೆ. ನಿಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ. ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಂತೆ ಮಾಡಿ ಎಂದ ಸೋಮಣ್ಣ ಅವರು, ಅಭಿವೃದ್ಧಿಗಾಗಿ ನೀವು ನಮ್ಮನ್ನ ಬೆಂಬಲಿಸಿ ಎಂದು ಮನವಿ ಮಾಡಿಕೊಂಡರು. ನಾನು ಈ ಪ್ರದೇಶದ ಬಡವರಿಗಾಗಿ 1 ಸಾವಿರ ಮನೆಗಳನ್ನು ಕಟ್ಟಿಕೊಡುತ್ತಿದ್ದೇನೆ. ನನ್ನ ಬೆಂಬಲಿಸದಿದ್ದರೂ ಪರವಾಗಿಲ್ಲ. ಆದ್ರೆ ನನ್ನ ವಿರುದ್ಧ ಸುಮ್ಮನೆ ಅಪಪ್ರಚಾರ ಮಾಡಬೇಡಿ. ನಾನು ಬಸವ ತತ್ವದಲ್ಲಿ ನಂಬಿಕೆಯನ್ನಿಟ್ಟುಕೊಂಡು ಅದರಂತೆ ನಡೆಯುತ್ತಿರುವ ವ್ಯಕ್ತಿ. ಅದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನೀವು ಬೆಂಬಲಿಸದಿದ್ದರೂ ನಾನು ನಿಮ್ಮ ಸೇವೆ ಮಾಡುತ್ತೇನೆ. ಈ ಈದ್ಗಾ ಮೈದಾನವನ್ನು ಆರು ತಿಂಗಳಿನಲ್ಲಿ ಕಟ್ಟಿಕೊಡುತ್ತೇನೆ ಎಂದು ಭರವಸೆ ನೀಡಿದರು.

ಈ ಕಾರ್ಯಕ್ರಮಕ್ಕೆ ನಾನು ಜಮೀರ್ ನ ಕರೆದುಕೊಂಡು ಬರಬೇಕು ಎಂದುಕೊಂಡಿದ್ದೆ. ಆದ್ರೆ ಅವನು ಬರಲಿಲ್ಲ. ಅವನು ನನ್ನ ಆತ್ಮೀಯ, ಅವನು ದಡ್ಡ ಅಲ್ಲ, ಕಿಲಾಡಿ. ಜಮೀರ್ ಕೇವಲ ಮುಸಲ್ಮಾರ ಎಂಎಲ್ ಎ ಅಲ್ಲ, ಎಲ್ಲಾ ವರ್ಗದವರ ಎಂಎಲ್ ಎ ಎಂದು ಹೇಳಿದರು.

ಇದನ್ನೂ ಓದಿ : ಲಡಾಖ್-ಫಿಂಗರ್ 4; ತಂತ್ರಗಾರಿಕೆಯಿಂದಲೇ ಚೀನಾ ಸೇನೆಯನ್ನು ಕಟ್ಟಿ ಹಾಕಿದ ಭಾರತೀಯ ಸೇನಾಪಡೆ!

ನಿಮಗೆ ನೂರು ಕೋಟಿ ರೂಪಾಯಿ ಕೆಲಸ ಇದ್ದರೂ ಪರವಾಗಿಲ್ಲ ನಾನು ಮಾಡಿಕೊಡುತ್ತೇನೆ. ಬೆಂಗಳೂರಿನಲ್ಲಿ ಒಂದು ಲಕ್ಷ ಮನೆ ಕೊಟ್ಟಿಕೊಡುತ್ತಿದ್ದೇನೆ. ಈ ವರೆಗೂ ಯಾರು ಚಾಲೆಂಜ್ ಹಾಕಿಲ್ಲ, ಜೂನ್ ಒಳಗೆ ಮನೆ ಕಟ್ಟಿಕೊಡುತ್ತೇನೆ. ಇದು ಆಗಿಲ್ಲ ಎಂದ್ರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದು ನಾನು ಮಾತ್ರ. ನಾನು ಕೆಲಸ ಮಾಡಿ ತೋರಿಸುತ್ತೇನೆ. ಯಾಕೆ ಈ ಹಿಂದೆ ಇದ್ದವರು ಮಾಡಲ್ಲಿಲ್ಲ..? ಎಂದು ಪ್ರಶ್ನಿಸಿದರು.

ನಾವ್ಯಾರು ನಿಮ್ಮ ಶತ್ರುಗಳಲ್ಲ, ನಾವು ಯಾರಿಗೂ ಅನ್ಯಾಯ ಮಾಡುವವರಲ್ಲ. ಇನ್ನೂ ಎರಡು ಮುಕ್ಕಾಲು ವರ್ಷ ನನಗೆ ಅಧಿಕಾರ ಇದೆ. ಅದನ್ನು ನೀವು ಉಪಯೋಗಿಸಿಕೊಳ್ಳಿ ಎಂದ ಸೋಮಣ್ಣ, ನನಗೆ ಬೆಂಬಲಿಸದಿದ್ದರೂ ಪರವಾಗಿಲ್ಲ, ಆದ್ರೆ ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡರು.

ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ. ನಿಮ್ಮಲ್ಲಿರುವ ಬಡವರ ಲೀಸ್ಟ್ ಕೊಡಿ, ಅವರಿಗೆ ಮನೆ ಕೊಟ್ಟಿಕೊಡಲು ಮೂರುವರೆ ಲಕ್ಷ ರೂಪಾಯಿ ದುಡ್ಡು ಕೊಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಸಚಿವರು, ನಾಯಂಡ ಹಳ್ಳಿ ವಾರ್ಡ್ ಸಂಖ್ಯೆ – 131ರಲ್ಲಿ ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಅಂಡರ್ ಪಾಸ್ ಅನ್ನು ಅಭಿವೃದ್ದಿ ಪಡಿಸಿ ಲೋಕಾರ್ಪಣೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿಯೇ ನನ್ನ ಧ್ಯೇಯ, ತಾಂತ್ರಿಕವಾಗಿ ಸರ್ವೆ ಮಾಡಿಸಿ ಯಾರಿಗೂ ತೊಂದರೆ ಆಗದಂತೆ ಈ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಜನರ ಪ್ರತಿನಿಧಿಗಳು ಚುನಾವಣೆ ವೇಳೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆನ್ನುವುದು ನನ್ನ ಸಂಕಲ್ಪವಾಗಿದೆ. ಈ ಅಂಡರ್ ಪಾಸ್ ಯೋಜನೆಯನ್ನು ಸುಮಾರು 8.30 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.