ಒಂದೇ ದಿನ 80 ಲಕ್ಷ ಜನರಿಗೆ ಲಸಿಕೆ! ಕರ್ನಾಟಕದಲ್ಲಿ 11 ಲಕ್ಷದಷ್ಟು ಮಂದಿ ಲಸಿಕೆ ಪಡೆದು ದಾಖಲೆ
Team Udayavani, Jun 22, 2021, 7:15 AM IST
ಹೊಸದಿಲ್ಲಿ/ ಬೆಂಗಳೂರು : ದೇಶಾದ್ಯಂತ ಸೋಮವಾರ ಆರಂಭವಾದ ಮೆಗಾ ಲಸಿಕೆ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು, 80 ಲಕ್ಷಕ್ಕೂ ಹೆಚ್ಚು ಮಂದಿ ಒಂದೇ ದಿನ ಲಸಿಕೆ ಪಡೆದಿದ್ದಾರೆ. ಜತೆಗೆ ಇದೇ ಮೊದಲ ಬಾರಿಗೆ ವಿಶ್ವದಲ್ಲಿ ಒಂದೇ ದಿನ ಇಷ್ಟು ಬೃಹತ್ ಪ್ರಮಾಣದಲ್ಲಿ ಲಸಿಕೆ ಹಾಕಿದ ದಾಖಲೆಯನ್ನೂ ಭಾರತ ನಿರ್ಮಾಣ ಮಾಡಿದೆ.
ಕರ್ನಾಟಕದಲ್ಲಿ 11 ಲಕ್ಷದಷ್ಟು ಮಂದಿ ಲಸಿಕೆ ಪಡೆದು ದಾಖಲೆ ನಿರ್ಮಿಸಿದ್ದಾರೆ. ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿರುವಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 10.7 ಲಕ್ಷ ಮಂದಿಗೆ ಲಸಿಕೆ
ರಾಜ್ಯದಲ್ಲಿ 18ರಿಂದ 44 ವರ್ಷದ ಏಳು ಲಕ್ಷ ಮಂದಿಯ ಸಹಿತ 10.7 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಸಾಮಾನ್ಯ ದಿನಗಳಿಗೆ ಹೋಲಿಸಿದರೆ ನಾಲ್ಕು ಪಟ್ಟು ಅಧಿಕ ಲಸಿಕೆ ವಿತರಣೆ ಮಾಡಲಾಗಿದೆ.
ರಾಜ್ಯಾದ್ಯಂತ 8,262 ಲಸಿಕೆ ಕೇಂದ್ರಗಳಲ್ಲಿ ಲಸಿಕೆ ವಿತರಣೆ ನಡೆದಿದ್ದು, 9.8 ಲಕ್ಷ ಮಂದಿಗೆ ಮೊದಲ ಡೋಸ್, 90 ಸಾವಿರ ಮಂದಿಗೆ ಎರಡನೇ ಡೋಸ್ ಸೇರಿ ಒಟ್ಟು 10.7 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. 7.1 ಲಕ್ಷ 18ರಿಂದ 44 ವರ್ಷದವರು, 1.1 ಲಕ್ಷ 60 ವರ್ಷ ಮೇಲಟ್ಟವರು, 2.5 ಲಕ್ಷ 44ರಿಂದ 60 ವರ್ಷದೊಳಗಿನವರು ಲಸಿಕೆ ಪಡೆದಿದ್ದಾರೆ.
ದ.ಕ., ಉಡುಪಿ: 70 ಸಾವಿರ
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ದಾಖಲೆಯ 70,641 ಮಂದಿಗೆ ಲಸಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ 26,249 ಮಂದಿ ಲಸಿಕೆ ಪಡೆದುಕೊಂಡರು.
ರಾಜ್ಯ ಮಟ್ಟದಲ್ಲಿ ಅತ್ಯಧಿಕ ಲಸಿಕೆ ಹಾಕಿದ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ 6ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 36,000 ಮಂದಿಗೆ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿತ್ತು.
ಬೆಂಗಳೂರೇ ಪ್ರಥಮ
ದೇಶದಲ್ಲಿ ಅತೀ ಹೆಚ್ಚು ಮಂದಿ ಲಸಿಕೆ ಪಡೆದ ನಗರವಾಗಿ ಬೆಂಗಳೂರು ಗುರುತಿಸಿ ಕೊಂಡಿದೆ ಎಂದು ಆರೋಗ್ಯ ಸಚಿವ ಡಾ| ಸುಧಾಕರ್ ತಿಳಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಮಧ್ಯ ಪ್ರದೇಶದ ಇಂದೋರ್ ಇದೆ. ಬೆಂಗಳೂರಿನಲ್ಲಿ ಸೋಮವಾರ 2.13 ಲಕ್ಷ ಮಂದಿ ಲಸಿಕೆ ಪಡೆದರೆ ಇಂದೋರ್ ನಲ್ಲಿ 2.11 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ರಾಜ್ಯಗಳ ಪೈಕಿ ಮಧ್ಯಪ್ರದೇಶ 15.5 ಲಕ್ಷ ಮಂದಿಗೆ ಲಸಿಕೆ ನೀಡಿ ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.