Valmiki Development ನಿಗಮದ ಹಣ ಬಳ್ಳಾರಿ ಚುನಾವಣೆಗೆ ಬಳಕೆ
ಸಂಸದ ತುಕಾರಾಂ ರಾಜೀನಾಮೆಗೆ ಬಿಜೆಪಿ ಆಗ್ರಹ, ಸಿಎಂ, ಡಿಸಿಎಂ ಗಮನಕ್ಕಿಲ್ಲದೆ ಅಕ್ರಮ ಸಾಧ್ಯವಿಲ್ಲ: ಪಿ. ರಾಜೀವ್
Team Udayavani, Jul 15, 2024, 7:00 AM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವು ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಬಳಕೆಯಾಗಿದ್ದು, ಈ ಹಣ ಬಳಸಿಕೊಂಡು ಗೆದ್ದಿರುವ ಇ.ತುಕಾರಾಂ ಅವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ರಾಜ್ಯ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆಗ್ರಹಿಸಿದರು.
ಭಾನುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತಂತೆ ಚುನಾವಣಾ ಆಯೋಗಕ್ಕೂ ಮನವಿ ಸಲ್ಲಿಸಲಿದ್ದೇವೆ. ನಿಗಮದ ಹಗರಣದಲ್ಲಿ ಭಾಗಿಯಾದ ನಾಗೇಂದ್ರರನ್ನು ಬಂಧಿಸಿದ ಜಾರಿ ನಿರ್ದೇಶನಾಲಯವು (ಇ.ಡಿ) ನ್ಯಾಯಾಂಗದ ಮುಂದೆ ರಿಮಾಂಡ್ ಅರ್ಜಿ ಹಾಜರುಪಡಿಸಿದೆ. ಪರಿಶಿಷ್ಟ ವರ್ಗದ ಅಭಿವೃದ್ಧಿ ಮೀಸಲಿಟ್ಟಿದ್ದ ಹಣ ದುರ್ಬಳಕೆ ಆಗಿದೆ. ಅದರಲ್ಲೂ 20.19 ಕೋಟಿ ರೂ. ಚುನಾವಣೆಗೆ ಬಳಕೆಯಾಗಿದೆ. ಅಕ್ರಮದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬ ಮಾಹಿತಿಗಳು ಉಲ್ಲೇಖವಾಗಿವೆ.
ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ತುಕಾರಾಂ, ನಾಗೇಂದ್ರರ ಸಂಬಂಧಿಕರೂ ಅಲ್ಲ. ಆದರೂ ನಾಗೇಂದ್ರ ಅವರು 20.19 ಕೋಟಿ ರೂಪಾಯಿಯನ್ನು ಲೋಕಸಭಾ ಚುನಾವಣೆಗೆ ದುರ್ಬಳಕೆ ಮಾಡಿದ ದಾಖಲೆ ಸಿಕ್ಕಿದೆ ಎಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಪ್ಪಿಗೆ ಮತ್ತು ಕುಮ್ಮಕ್ಕು ಇಲ್ಲದೆ, ಈ ಹಣವನ್ನು ಚುನಾವಣೆಗೆ ಬಳಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ತುಕಾರಾಂ ರಾಜೀನಾಮೆ ಕೊಡುವವರೆಗೆ ನಿರಂತರ ಹೋರಾಟ
ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಮಾತನಾಡಿ, ಸಂಸದ ಇ.ತುಕಾರಾಂ ಅವರಿಗೆ ಸಮಾಜದ ಬಗ್ಗೆ ಅಭಿಮಾನ ಮತ್ತು ಕಾಳಜಿ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡದೆ ಇದ್ದಲ್ಲಿ ಎಸ್‌ಟಿ ಮೋರ್ಚಾ ಮತ್ತು ಸಮಾಜದ ವತಿಯಿಂದ ನಿರಂತರ ಹೋರಾಟ ಸಂಘಟಿಸಲಾಗುವುದು ಎಂದು ಎಚ್ಚರಿಸಿದರು.
ವಾಲ್ಮೀಕಿ ನಿಗಮದ ಹಗರಣದ ಮೂಲಕ ಕಬಳಿಸಿದ ಸುಮಾರು 30ರಿಂದ 40 ಕೋಟಿ ಹಣವನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಳಸಿದ್ದು ಇ.ಡಿ. ತನಿಖೆ ವೇಳೆ ಬೆಳಕಿಗೆ ಬಂದಿದೆ. ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ಕಬಳಿಸಿ ಇವರ ಚುನಾವಣೆಗೆ ಬಳಸಿದ್ದಾರೆ. ಇ.ತುಕಾರಾಂ ಅವರು ಮನೆಗಳಿಗೆ ಹಣ ಹಂಚಿದ್ದು, ಚುನಾವಣೆಗೆ 50ರಿಂದ 60 ಕೋಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.
ಎಸ್‌ಟಿ ಮೋರ್ಚಾ ವತಿಯಿಂದ ಈ ಅಕ್ರಮದ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ನಾನೇನೂ ತಪ್ಪು ಮಾಡಿಲ್ಲ ಎಂದು ಸುಳ್ಳು ಹೇಳುತ್ತಿದ್ದರು. ಈಗ ಅವರು ಎಸ್‌ಐಟಿ ಮುಂದೆ ಶರಣಾಗಿದ್ದಾರೆ. ಆದರೂ, ಸಿದ್ದರಾಮಯ್ಯನವರು, ಡಿ.ಕೆ.ಶಿವಕುಮಾರ್ ಅವರು ದದ್ದಲ್ ಅವರ ರಾಜೀನಾಮೆ ಪಡೆದಿಲ್ಲ. ಪಕ್ಷಕ್ಕೆ ಮುಜುಗರ ಆಗುವುದೆಂದು ರಾಜೀನಾಮೆ ಪಡೆದಿಲ್ಲ ಎಂದು ಟೀಕಿಸಿದರು.
ಇದೊಂದು ಭಂಡ ಸರ್ಕಾರ. ಇವರು ಭ್ರಷ್ಟ ಮುಖ್ಯಮಂತ್ರಿ. ದದ್ದಲ್ ಅವರ ಕುಟುಂಬ ಕೋಟಿಗಟ್ಟಲೆ ಹಣದ ಅಕ್ರಮ ಆಸ್ತಿ ಖರೀದಿ ಮಾಡಿದೆ. ಮುಖ್ಯಮಂತ್ರಿಗಳು ದದ್ದಲ್ ರಾಜೀನಾಮೆ ರಾಜೀನಾಮೆ ಪಡೆಯಬೇಕಲ್ಲದೆ, ತಾವು ಕೂಡ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.