Valmiki Nigama Scam; ಶಾಸಕ ದದ್ದಲ್ ರಾಯಚೂರಿನಲ್ಲಿ: ತಿರುಗಾಟದ ವೀಡಿಯೋ ವೈರಲ್
Team Udayavani, Jul 15, 2024, 7:25 AM IST
ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣ ತನಿಖೆ ನಡೆಯುತ್ತಿದ್ದು, ಇ.ಡಿ. ಅ ಧಿಕಾರಿಗಳ ಕಣ್ತಪ್ಪಿಸಿ ಓಡಾಡುತ್ತಿರುವ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ರವಿವಾರ ಬೆಳಗ್ಗೆ ನಗರದಲ್ಲಿ ಕಾಣಿಸಿಕೊಂಡಿರುವ ವೀಡಿಯೋ ಹರಿದಾಡುತ್ತಿದೆ.
ನಗರದ ಮಂತ್ರಾಲಯ ರಸ್ತೆಯಲ್ಲಿ ದದ್ದಲ್ ತಮ್ಮ ಆಪ್ತ ಶಿವಪ್ಪ ನಾಯಕ ಅವರ ಕಾರಿನಲ್ಲಿ ಮಂತ್ರಾಲಯದ ಕಡೆಗೆ ಹೋಗುವ ವೀಡಿಯೋ ತುಣುಕು ಹರಿದಾಡುತ್ತಿದೆ. ಶನಿವಾರ ತಡರಾತ್ರಿ ದದ್ದಲ್ ಮನೆಗೆ ಬಂದಿದ್ದು, ರವಿವಾರ ಬೆಳಗ್ಗೆ ವಾಪಸ್ ತೆರಳಿದ್ದಾರೆ ಎನ್ನಲಾಗುತ್ತಿದೆ. ಅವರು ಬಳಸುತ್ತಿದ್ದ ಕಾರು ಬಿಟ್ಟು ಬೇರೆ ಕಾರಿನಲ್ಲಿ ಹೋಗಿದ್ದಾರೆ. ಆದರೆ ಈ ಬಗ್ಗೆ ಅವರ ಆಪ್ತರು ಗುಟ್ಟು ಬಿಟ್ಟು ಕೊಡುತ್ತಿಲ್ಲ.
ಜು.10ರಿಂದ ಸತತ 40 ಗಂಟೆಗಳ ಕಾಲ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. ಅನಂತರ ದದ್ದಲ್ ಮಾಜಿ ಆಪ್ತ ಪಂಪಣ್ಣ ಮನೆ ಮೇಲೂ ದಾಳಿ ನಡೆಸಿ ವಿಚಾರಣೆ ಮಾಡಿದ್ದರು. ಬೆಂಗಳೂರಿನಲ್ಲಿ ಎಸ್‌ಐಟಿ ವಿಚಾರಣೆಯಲ್ಲಿರುವ ದದ್ದಲ್ ಶನಿವಾರದಿಂದ ನಾಪತ್ತೆಯಾಗಿದ್ದರು.
ಜಾರಿ ನಿರ್ದೇಶನಾಲಯದಿಂದ ಇಂದೇ ಬಂಧನ?
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣದಲ್ಲಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ಗೆ ನಿಗಮದ ದುಡ್ಡು ಹೋಗಿರುವ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ಸುಳಿವು ಸಿಕ್ಕಿದೆ ಎನ್ನಲಾಗಿದ್ದು, ವಶಕ್ಕೆ ಪಡೆದು ಇಲ್ಲವೇ ಬಂಧಿಸಿ ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇ.ಡಿ. ಅಧಿಕಾರಿಗಳು ತಮ್ಮ ಹಿಂದೆ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆ ದದ್ದಲ್ ಧಾರ್ಮಿಕ ಕೇಂದ್ರಗಳಿಗೆ ಸುತ್ತಾಡುತ್ತಾ ಕಣ್ತಪ್ಪಿಸಿ ಒಡಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದದ್ದಲ್ ನಡೆ ಅನುಮಾನಕ್ಕೀಡು ಮಾಡಿದೆ.
ಇ.ಡಿ.ಗಿಂತ ಎಸ್‌ಐಟಿ ವಾಸಿ!
ಮತ್ತೂಂದೆಡೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಶಾಸಕ ದದ್ದಲ್‌ಗೆ ಎಸ್‌ಐಟಿ ಅಧಿಕಾರಿಗಳು ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ. ಹಾಜರಾಗುವ ಸಾಧ್ಯತೆಗಳೇ ಹೆಚ್ಚು ಎನ್ನಲಾಗುತ್ತಿದೆ. ಏಕೆಂದರೆ ಶುಕ್ರವಾರ ಎಸ್‌ಐಟಿ ವಿಚಾರಣೆ ವೇಳೆ ತಮ್ಮನ್ನು ಬಂಧಿಸುವಂತೆ ಎಸ್‌ಐಟಿ ಅಧಿಕಾರಿ ಗಳಿಗೆ ದದ್ದಲ್ ಅವರೇ ಹೇಳಿದ್ದರು ಎನ್ನಲಾಗುತ್ತಿದೆ.
ಕೇಂದ್ರ ಸರಕಾರದ ಅಧೀನದಲ್ಲಿರುವ ಇ.ಡಿ. ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದರೆ ಹಗರಣದ ಇಂಚಿಂಚೂ ಮಾಹಿತಿಯನ್ನು ತಮ್ಮಿಂದ ಜಾಲಾಡಬಹುದು ಎಂಬ ಭೀತಿಯಿಂದ ಎಸ್‌ಐಟಿ ಅಧಿಕಾರಿಗಳ ಬಳಿ ಈ ಹಿಂದೆ ಬಂಧಿಸುವಂತೆ ದುಂಬಾಲು ಬಿದ್ದಿದ್ದರು. ಇದನ್ನು ಕೇಳಿ ಎಸ್‌ಐಟಿ ಅಧಿಕಾರಿಗಳೇ ಒಂದು ಕ್ಷಣ ತಬ್ಬಿಬ್ಟಾಗಿದ್ದರು ಎಂದು ತಿಳಿದು ಬಂದಿದೆ. ಸೋಮವಾರ ಅವರನ್ನು ಎಸ್‌ಐಟಿ ಬಂಧಿಸುತ್ತದೋ ಅಥವಾ ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆಯಲಿ ದ್ದಾರೋ ಎಂಬುದು ಕುತೂಹಲಕ್ಕೀಡು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.