Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ
ಜಾತಿ ಪ್ರಮಾಣಪತ್ರ ವಿತರಣೆಯಲ್ಲಾಗುತ್ತಿರುವ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಹೇಳಿದ್ದೇನೆ: ಮುಖ್ಯಮಂತ್ರಿ
Team Udayavani, Oct 15, 2024, 8:39 PM IST
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದ್ದರೂ ಈ ವರ್ಷದಲ್ಲಿ ನಿಗಮಕ್ಕೆ ನಿಗದಿಪಡಿಸಿರುವ ಅನುದಾನ ಸಂಪೂರ್ಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ವಿಧಾನಸೌಧದಲ್ಲಿ ಮಂಗಳವಾರ ಪರಿಶಿಷ್ಟ ಪಂಗಡ ಸಮುದಾಯಗಳ ಸಭೆಯ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿ ವಾಲ್ಮೀಕಿ ನಿಗಮದ ಅನುದಾನ ಕಡಿತಗೊಳಿಸದಂತೆ ಹಲವು ಮನವಿಗಳು ಬಂದಿವೆ ಆದ್ದರಿಂದ ಈ ವರ್ಷ ವಾಲ್ಮೀಕಿ ನಿಗಮಕ್ಕೆ ಮೀಸಲಿಟ್ಟಿರುವ ಅನುದಾನ ಸಂಪೂರ್ಣ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ‘ಪರಿಶಿಷ್ಟ ಪಂಗಡದ ಶಾಸಕರು ಹಾಗೂ ಸ್ವಾಮೀಜಿಗಳ ಜತೆಗಿನ ಸಭೆಯಲ್ಲಿ ಎರಡು ವಿಷಯಗಳ ಬಗ್ಗೆ ಚರ್ಚೆಯಾಗಿದೆ. ಮೊದಲು ಅನುದಾನ ಕಡಿತ ಮಾಡದಂತೆ ಶಾಸಕರು ಹಾಗೂ ಸ್ವಾಮೀಜಿಗಳು ಮನವಿ ಮಾಡಿದ್ದರು. ಎರಡನೆಯದಾಗಿ ನಕಲಿ ಜಾತಿ ಪ್ರಮಾಣ ಪತ್ರ ಸಮಸ್ಯೆ ಕುರಿತ ಚರ್ಚೆ ನಡೆದಿದ್ದು ಗೊಂದಲ ನಿವಾರಣೆ ಮಾಡುವ ಕೆಲಸ ಮಾಡುತ್ತೇವೆ ಎಂದರು.
ಇನ್ನು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಕುರಿತಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ನಿಗಮದ 89.63 ಕೋಟಿ ರೂ. ದುರುಪಯೋಗವಾಗಿದ್ದು, ಅದರಲ್ಲಿ 5 ಕೋಟಿ ರೂ. ವಾಪಸ್ ಬಂದಿದೆ. ಎಸ್‌ಐಟಿ ತನಿಖೆ ವೇಳೆ ರೂ.71.54 ಕೋಟಿ ರೂಪಾಯಿಯ ಮತ್ತೆ ವಶಕ್ಕೆ ಪಡೆದಿದೆ. ಇನ್ನು ಉಳಿದ 13 ಕೋಟಿ ರೂ.ಮೊತ್ತ ನಿಗಮಕ್ಕೆ ವಾಪಸ್ ಬರಬೇಕಿದೆ. ಅವ್ಯವಹಾರದ ಪೂರ್ಣ ಮೊತ್ತ ಮರು ಪಡೆಯಲಾಗುವುದು. ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದ ಮುಂದಿದೆ. ನಾವು ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ. ಜಾತಿ ಪ್ರಮಾಣಪತ್ರದ ಬಗ್ಗೆ ಗೊಂದಲ ಪರಿಹರಿಸಿ ಅಗತ್ಯ ಆದೇಶಗಳ ಹೊರಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಾಲ್ಮೀಕಿ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಒದಗಿಸಲಾಗಿದ್ದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಮರುಹಂಚಿಕೆ ಮಾಡಲಾಗುವುದು.
ಜೊತೆಗೆ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಉಂಟಾಗುತ್ತಿರುವ ಗೊಂದಲವನ್ನು ನಿವಾರಣೆ ಮಾಡಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
– ಮುಖ್ಯಮಂತ್ರಿ… pic.twitter.com/a55qIrDgEI— CM of Karnataka (@CMofKarnataka) October 15, 2024
ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಚರ್ಚಿಸಿ ತೀರ್ಮಾನ:
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಕಡಿಮೆ ಅನುದಾನ ನೀಡುತ್ತಿರುವ ಕೇಂದ್ರದ ಅನ್ಯಾಯದ ವಿರುದ್ಧ ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ಈ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ವಿಚಾರ ಸದ್ಯಕ್ಕೆ ತೀರ್ಮಾನ ಮಾಡಿಲ್ಲ, ಪ್ರತಿಭಟನೆ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು. ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ವಿಚಾರವಾಗಿ ಸಿದ್ದರಾಮಯ್ಯ ಅವರು ಉಪಚುನಾವಣೆಗೆ ಸಿದ್ಧರಿದ್ದು, ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಹೇಳಿದರು.
ಪರಿಶಿಷ್ಟ ಪಂಗಡ ಸಮುದಾಯಗಳ ಸಭೆಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಖ್ ಸೇರಿ ಹಿರಿಯ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ
Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
MUST WATCH
ಹೊಸ ಸೇರ್ಪಡೆ
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
BBK11: ಮಿಡ್ ವೀಕ್ ಎಲಿಮಿನೇಷನ್ ವಿಚಾರಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಬಿಗ್ ಬಾಸ್; ಏನದು?
ಐನಾಪೂರ: ಶ್ರೀ ಕೆರಿಸಿದ್ದೇಶ್ವರ ದೇವರ ಭೇಟಿ -ಭಂಡಾರಮಯ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Udupi: ಶ್ರೀ ಕೃಷ್ಣ ಮಠದಲ್ಲಿ ವೈಭವದ ಮಕರ ಸಂಕ್ರಾಂತಿ ಉತ್ಸವ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.