Varanasi:ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲ ಎಂದು ಕತ್ತು ಸೀಳಿಕೊಂಡು ಸಾ*ವಿಗೆ ಶರಣಾದ ಅರ್ಚಕ!
ಕೂಡಲೇ ಶರ್ಮಾ ಅವರನ್ನು ಪತ್ನಿ ಹಾಗೂ ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದಿದ್ದರು.
Team Udayavani, Dec 11, 2024, 11:46 AM IST
ನವದೆಹಲಿ: ಕಾಳಿ ದೇವಿಯನ್ನು ಒಲಿಸಿಕೊಳ್ಳಬೇಕೆಂದು ಅರ್ಚಕನೊಬ್ಬ 24ಗಂಟೆಗಳ ಕಾಲ ನಿರಂತರವಾಗಿ ಪೂಜೆ ಮಾಡಿದ ನಂತರವೂ ದೇವಿ ಪ್ರತ್ಯಕ್ಷವಾಗಲಿಲ್ಲ ಎಂದು ಮನನೊಂದು ತನ್ನ ಕತ್ತನ್ನು ಸೀಳಿಕೊಂಡು ಆ*ತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.
ಅರ್ಚಕ ಅಮಿತ್ ಶರ್ಮಾ (40ವರ್ಷ) ಗಾಯ್ ಘಾಟ್ ಪ್ರದೇಶದ ನಿವಾಸಿಯಾಗಿದ್ದು,ತಾನು ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಕಾಳಿ ದೇವಿಯನ್ನು ಪೂಜಿಸಿ, ದೇವಿ ಪ್ರತ್ಯಕ್ಷವಾಗಿಲ್ಲ ಎಂದು ಮಾನಸಿಕ ಒತ್ತಡಕ್ಕೆ ಒಳಗಾಗಿ ಕಟ್ಟರ್ ನಿಂದ ಗಂಟಲು ಸೀಳಿಕೊಂಡಿರುವುದಾಗಿ ವರದಿ ವಿವರಿಸಿದೆ.
ಈ ಸಂದರ್ಭದಲ್ಲಿ ಮನೆಯಲ್ಲಿ ಪತ್ನಿ ಜೂಲಿ ಅಡುಗೆ ಕೆಲಸದಲ್ಲಿ ನಿರತಳಾಗಿದ್ದಳು. ಆಗ ಕಾಳಿ ಮಾತೇ ದರ್ಶನ ನೀಡು…ಮಾ ಪ್ರತ್ಯಕ್ಷವಾಗು ಎಂದು ಚೀರಾಡುತ್ತಿರುವ ಶಬ್ದ ಕೇಳಿಸಿತ್ತು. ತಕ್ಷಣವೇ ಪತ್ನಿ ಕೋಣೆಗೆ ಹೋಗಿ ನೋಡಿದಾಗ…ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿತ್ತು. ಆಕೆಯು ಚೀರಾಡಲು ಆರಂಭಿಸಿದಾಗ ನೆರೆಹೊರೆಯವರು ಬಂದು ವಿಚಾರಿಸಿದಾಗ ವಿಷಯ ತಿಳಿದು ಅವರು ಆಘಾತಕ್ಕೊಳಗಾಗಿರುವುದಾಗಿ ವರದಿ ತಿಳಿಸಿದೆ.
ಕೂಡಲೇ ಶರ್ಮಾ ಅವರನ್ನು ಪತ್ನಿ ಹಾಗೂ ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅರ್ಚಕ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದರು.
ಪತಿ ಶರ್ಮಾ ಕೋಣೆಯನ್ನು ಲಾಕ್ ಮಾಡಿಕೊಂಡು ಕಾಳಿ ದೇವಿ ಪ್ರತ್ಯಕ್ಷಳಾಗುತ್ತಾಳೆ ಎಂಬ ಭ್ರಮೆಯಿಂದ 24ಗಂಟೆಗಳ ಕಾಲ ಕಠಿನ ಪೂಜೆ ಮಾಡುತ್ತಿದ್ದರು. ಆದರೆ ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲ. ಇದರಿಂದ ಮಾನಸಿಕ ಒತ್ತಡಕ್ಕೊಳಗಾಗಿ ತಮ್ಮ ಜೀವವನ್ನೇ ಬಲಿ ಕೊಟ್ಟಿರುವುದಾಗಿ ಪತ್ನಿ ಜೂಲಿ ಪೊಲೀಸರಿಗೆ ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣದ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway; 2 ವರ್ಷದಲ್ಲಿ 50 ಅಮೃತ್ ಭಾರತ ರೈಲು ಉತ್ಪಾದನೆ: ಅಶ್ವಿನಿ ವೈಷ್ಣವ್
Cardiac arrest: ಗುಜರಾತ್ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು
Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
MUST WATCH
ಹೊಸ ಸೇರ್ಪಡೆ
Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.